ETV Bharat / state

ಶಿವಮೊಗ್ಗದಲ್ಲಿ ಲಾಕ್‍ಡೌನ್ ಮಾರ್ಗಸೂಚಿ ಸ್ವಲ್ಪ ಮಟ್ಟಿಗೆ ಸಡಿಲಿಕೆ : ಸಚಿವ ಕೆ ಎಸ್ ಈಶ್ವರಪ್ಪ - ಸಚಿವ ಕೆ.ಎಸ್.ಈಶ್ವರಪ್ಪ

ಲಾಕ್‍ಡೌನ್ ಸಡಿಲಿಕೆ ಮಾಡಲಾಗಿದ್ದರೂ, ಸಾಮಾಜಿಕ ಅಂತರ ಕಾಪಾಡುವುದು ಹಾಗೂ ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು. ಅಂಗಡಿಗಳ ಮುಂದೆ ಸಾಮಾಜಿಕ ಅಂತರವನ್ನು ಜನರು ಪಾಲಿಸದಿದ್ದರೆ, ಆ ಅಂಗಡಿ ಮಾಲೀಕರ ಮೇಲೆ ಕ್ರಮಕೈಗೊಳ್ಳಲಾಗುವುದು. ಅಂಗಡಿಗಳ ಮುಂದೆ ಜನ ಜಂಗುಳಿ ಸೇರಿದ್ದರೆ ಅಂತಹ ಅಂಗಡಿಗಳನ್ನು ಮುಚ್ಚಿಸಿ ಪೊಲೀಸರು ಕ್ರಮಕೈಗೊಳ್ಳಲಿದ್ದಾರೆ..

Minister Eshwarappa
ಸಚಿವ ಕೆ.ಎಸ್.ಈಶ್ವರಪ್ಪ
author img

By

Published : Jun 20, 2021, 3:14 PM IST

Updated : Jun 20, 2021, 4:21 PM IST

ಶಿವಮೊಗ್ಗ : ನಗರ ಹಾಗೂ ಭದ್ರಾವತಿ ನಗರಗಳಿಗೆ ಪ್ರತ್ಯೇಕವಾಗಿ ಲಾಕ್‍ಡೌನ್ ಮಾರ್ಗಸೂಚಿ ಹೊರಡಿಸಲಾಗಿದೆ. ಇನ್ನುಳಿದ ತಾಲೂಕುಗಳಲ್ಲಿ ರಾಜ್ಯ ಸರ್ಕಾರ ಹೊರಡಿಸಿರುವ ಮಾರ್ಗಸೂಚಿ ಮುಂದಿನ ಆದೇಶದವರೆಗೆ ಜಾರಿಯಲ್ಲಿರಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು.

ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ

ಜಿಲ್ಲಾಡಳಿತ ಸಭಾಂಗಣದಲ್ಲಿ ವಿವಿಧ ಸಂಘ-ಸಂಸ್ಥೆಗಳ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗಾರರಿಗೆ ಮಾಹಿತಿ ನೀಡಿದರು. ಜಿಲ್ಲೆಯ ಬಹುತೇಕ ತಾಲೂಕುಗಳಲ್ಲಿ ಕೊರೊನಾ ಪ್ರಮಾಣ ಶೇ.5ಕ್ಕಿಂತಲೂ ಕಡಿಮೆಯಿದೆ. ಆದರೂ ಶಿವಮೊಗ್ಗ ನಗರ ಹಾಗೂ ಭದ್ರಾವತಿಯಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಕಡಿಮೆಯಾಗಿಲ್ಲ. ಈ ಹಿನ್ನೆಲೆಯಲ್ಲಿ ಶಿವಮೊಗ್ಗ ಹಾಗೂ ಭದ್ರಾವತಿಯಲ್ಲಿ ಕೆಲವು ನಿರ್ಬಂಧಗಳನ್ನು ವಿಧಿಸಿ ವ್ಯಾಪಾರ, ವಹಿವಾಟುಗಳಿಗೆ ಅನುಮತಿ ನೀಡಲು ನಿರ್ಧರಿಸಲಾಗಿದೆ ಎಂದರು.

ಇದನ್ನು ಓದಿ: ಶಾಸಕ ಅರವಿಂದ್‌ ಬೆಲ್ಲದ್ ಫೋನ್ ಕದ್ದಾಲಿಕೆ ಪ್ರಕರಣದ ತನಿಖೆ ನಡೆಯುತ್ತಿದೆ : ಗೃಹ ಸಚಿವ ಬೊಮ್ಮಾಯಿ

ಸಗಟು ತರಕಾರಿ ಮತ್ತು ದಿನಸಿ ವ್ಯಾಪಾರ, ಗಾಂಧಿಬಜಾರ್ ಸಗಟು ವ್ಯಾಪಾರಿಗಳಿಗೆ ಮಧ್ಯಾಹ್ನ 12 ಗಂಟೆಯವರೆಗೆ, ಸಿಮೆಂಟ್, ಸ್ಟೀಲ್, ಹಾರ್ಡ್‍ವೇರ್, ಫೋಟೋ ಸ್ಟುಡಿಯೋ, ಚಿನ್ನ ಗಿರವಿ ಅಂಗಡಿ, ಟೈಲರ್​ಗಳಿಗೆ, ಬಂಗಾರ ಕೆಲಸ ಮಾಡುವವರು ಮುಂತಾದ ಕ್ಷೇತ್ರದವರಿಗೆ ಮಧ್ಯಾಹ್ನ 2ಗಂಟೆಯವರೆಗೆ ಅವಕಾಶ ನೀಡಲಾಗುವುದು.

ಬಟ್ಟೆ ಮತ್ತು ಚಿನ್ನದ ವ್ಯಾಪಾರಕ್ಕೆ ಅವಕಾಶವಿರುವುದಿಲ್ಲ. ಬೀದಿ ಬದಿ ವ್ಯಾಪಾರಕ್ಕೆ ಅವಕಾಶವಿದೆ. ಆದರೆ, ಬೀದಿಬದಿ ಆಹಾರ ಉತ್ಪನ್ನ ಮಾರಾಟಕ್ಕೆ ಅನುಮತಿ ಇಲ್ಲ. ವಾಕಿಂಗ್, ಯೋಗ ಇತ್ಯಾದಿ ವ್ಯಾಯಾಮ ಚಟುವಟಿಕೆಗಳಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ಸ್ಪಷ್ಟಪಡಿಸಿದರು.

ಮಾರ್ಗಸೂಚಿ ಪಾಲಿಸಿ : ಲಾಕ್‍ಡೌನ್ ಸಡಿಲಿಕೆ ಮಾಡಲಾಗಿದ್ದರೂ, ಸಾಮಾಜಿಕ ಅಂತರ ಕಾಪಾಡುವುದು ಹಾಗೂ ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು. ಅಂಗಡಿಗಳ ಮುಂದೆ ಸಾಮಾಜಿಕ ಅಂತರವನ್ನು ಜನರು ಪಾಲಿಸದಿದ್ದರೆ, ಆ ಅಂಗಡಿ ಮಾಲೀಕರ ಮೇಲೆ ಕ್ರಮಕೈಗೊಳ್ಳಲಾಗುವುದು. ಅಂಗಡಿಗಳ ಮುಂದೆ ಜನ ಜಂಗುಳಿ ಸೇರಿದ್ದರೆ ಅಂತಹ ಅಂಗಡಿಗಳನ್ನು ಮುಚ್ಚಿಸಿ ಪೊಲೀಸರು ಕ್ರಮಕೈಗೊಳ್ಳಲಿದ್ದಾರೆ ಎಂದು ಎಚ್ಚರಿಕೆ ನೀಡಿದರು.

ಲಸಿಕಾ ಅಭಿಯಾನ : ಜಿಲ್ಲೆಯಾದ್ಯಂತ ನಾಳೆಯಿಂದ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರ ಹಾಗೂ ತಾಲೂಕು ಆಸ್ಪತ್ರೆಗಳಲ್ಲಿ ಕೋವಿಡ್ ಲಸಿಕೆ ಅಭಿಯಾನ ಆಯೋಜಿಸಲಾಗಿದೆ. 45 ವರ್ಷ ಮೇಲ್ಪಟ್ಟವರಿಗೆ ಮಾತ್ರವಲ್ಲದೆ, 18 ರಿಂದ 44 ವರ್ಷದ ಒಳಗಿನವರಿಗೂ ಲಸಿಕೆಯನ್ನು ನೀಡಲು ಸಿದ್ಧತೆ ಮಾಡಲಾಗಿದೆ ಎಂದು ಅವರು ಹೇಳಿದರು.

Last Updated : Jun 20, 2021, 4:21 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.