ETV Bharat / state

ಸಚಿವ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ ಕೆ.ಎಸ್‌.ಈಶ್ವರಪ್ಪ - eswarappa latest news

ಈ ಪ್ರಕರಣದಲ್ಲಿ ನನ್ನಿಂದ ಒಂದೇ ಒಂದು ತಪ್ಪಿದ್ರೆ ಆ ಭಗವಂತನಲ್ಲಿ ನಾನೇ ಶಿಕ್ಷೆ ಕೊಡು ಎಂದು ಕೇಳಿಕೊಳ್ಳುತ್ತೇನೆ. ನಾನು ನಮ್ಮ ಇಲಾಖೆಯನ್ನು ಯಶಸ್ವಿಯಾಗಿ ತೆಗೆದುಕೊಂಡು ಹೋಗುತ್ತಿದ್ದೆ. ಅದರಲ್ಲೂ ಮನೆಮನೆಗೆ ಗಂಗೆ ಎಂಬ ಕಾರ್ಯಕ್ರಮ ಯಶಸ್ವಿಯಾಗಿದೆ. ಇದಕ್ಕೆಲ್ಲಾ ಸಹಕಾರ ನೀಡಿದ ಎಲ್ಲರಿಗೂ ಧನ್ಯವಾದ ಎಂದು ಮಾಧ್ಯಮಗೋಷ್ಟಿಯಲ್ಲಿ ಈಶ್ವರಪ್ಪ ಹೇಳಿದರು.

ನಾಳೆ ರಾಜೀನಾಮೆ ನೀಡುತ್ತೇನೆ: ಈಶ್ವರಪ್ಪ
ನಾಳೆ ರಾಜೀನಾಮೆ ನೀಡುತ್ತೇನೆ: ಈಶ್ವರಪ್ಪ
author img

By

Published : Apr 14, 2022, 6:27 PM IST

Updated : Apr 14, 2022, 6:51 PM IST

ಶಿವಮೊಗ್ಗ: ಗುತ್ತಿಗೆದಾರ ಸಂತೋಷ್​ ಪಾಟೀಲ್ ಆತ್ಮಹತ್ಯೆ ಸಂಬಂಧ ಇಂದು ಮಾಧ್ಯಮಗೋಷ್ಠಿ ನಡೆಸಿದ ಈಶ್ವರಪ್ಪ ನಾಳೆ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಹೇಳಿದರು. ನಾಳೆ ಸಂಜೆ ಬೆಂಗಳೂರಿಗೆ ತೆರಳಿ ಸಿಎಂ ಭೇಟಿ ಮಾಡಿ ನಂತರ ರಾಜೀನಾಮೆ ಸಲ್ಲಿಸುತ್ತೇನೆ. ನನಗೆ ದೇವರ ಮೇಲೆ ನಂಬಿಕೆ ಇದೆ. ಈ ಪ್ರಕರಣದಿಂದ ಹೊರ ಬಂದೇ ಬರುತ್ತೇನೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಈ ಪ್ರಕರಣದಲ್ಲಿ ನನ್ನಿಂದ ಒಂದೇ ಒಂದು ತಪ್ಪಿದ್ರೆ ಆ ಭಗವಂತನಲ್ಲಿ ನಾನೇ ಶಿಕ್ಷೆ ಕೊಡು ಎಂದು ಕೇಳಿಕೊಳ್ಳುತ್ತೇನೆ. ನಾನು ನಮ್ಮ ಇಲಾಖೆಯನ್ನು ಯಶಸ್ವಿಯಾಗಿ ತೆಗೆದುಕೊಂಡು ಹೋಗುತ್ತಿದ್ದೆ. ಅದರಲ್ಲೂ ಮನೆಮನೆಗೆ ಗಂಗೆ ಎಂಬ ಕಾರ್ಯಕ್ರಮ ಯಶಸ್ವಿಯಾಗಿದೆ. ಇದಕ್ಕೆಲ್ಲಾ ಸಹಕಾರ ನೀಡಿದ ಎಲ್ಲರಿಗೂ ಧನ್ಯವಾದ ಎಂದರು.

ರಾಜೀನಾಮೆ ಬಗ್ಗೆ ನಾನು ಮೂರು-ನಾಲ್ಕು ದಿನದ ಹಿಂದೆಯೇ ತೀರ್ಮಾನ ಮಾಡಿದ್ದೆ. ಇದರಿಂದ ಸರ್ಕಾರಕ್ಕೆ ಇರುಸುಮುರುಸು ಆಗಬಾರದು ಎಂದು ಈ ತೀರ್ಮಾನಕ್ಕೆ ಬಂದೆ ಎಂದಿರುವ ಅವರು, ರಮೇಶ್ ಜಾರಕಿಹೊಳಿ ಹೇಳಿಕೆಗೆ ಪ್ರತಿಕ್ರಿಯಿಸಿ, ನಾನು ಬಲಿಪಶುವ ಆಗುವವನಲ್ಲ. ದೇವರನ್ನು ನಂಬಿದ್ದೇನೆ, ತನಿಖೆ ಆಗಲಿ, ತನಿಖೆ ಆದ ನಂತರ ಅದರಿಂದ ಹೊರಬರುವೆ ಎಂದು ಹೇಳಿದರು.

ರಾಜೀನಾಮೆಗೆ ಕಾಂಗ್ರೆಸ್‌ ಪಟ್ಟು: ಗುತ್ತಿಗೆದಾರನ ಆತ್ಮಹತ್ಯೆ ಪ್ರಕರಣ ನಡೆದ ನಂತರ ಈಶ್ವರಪ್ಪ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ರಾಜ್ಯ ಕಾಂಗ್ರೆಸ್​ ಪಟ್ಟು ಹಿಡಿದಿತ್ತು. ಅಷ್ಟೇ ಅಲ್ಲದೇ ದೇಶದೆಲ್ಲೆಡೆ ಈ ಬಗ್ಗೆ ಚರ್ಚೆಯೂ ಆಗಿತ್ತು.

Last Updated : Apr 14, 2022, 6:51 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.