ಶಿವಮೊಗ್ಗ: ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಕಾಮಗಾರಿ ನಡೆಯುತ್ತಿದ್ದ ಸ್ಥಳಕ್ಕೆ ಸಚಿವ ಕೆ.ಎಸ್.ಈಶ್ವರಪ್ಪ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ತಾಲೂಕಿನ ಅಬ್ಬಲಗೆರೆ ಗ್ರಾಮದ ಕೆರೆಯಲ್ಲಿ ಗ್ರಾಮ ಪಂಚಾಯತ್ ವತಿಯಿಂದ ಉದ್ಯೋಗ ಖಾತ್ರಿ ಯೋಜನೆಯ ಕಾಮಗಾರಿ ನಡೆಯುತ್ತಿದೆ. ಈ ಮಧ್ಯೆ ಶಿಕಾರಿಪುರಲ್ಲಿ ಕೊರೊನಾ ವೈರಸ್ ತಡೆಯುವ ಬಗ್ಗೆ ಅಧಿಕಾರಿಗಳ ಸಭೆಗೆ ತೆರಳಲು ಹೊರಟಿದ್ದ ಸಚಿವರು ಕಾಮಗಾರಿ ವೀಕ್ಷಣೆ ಮಾಡಿದ್ದಾರೆ.
ಭೇಟಿ ನೀಡಿದ ಸಂದರ್ಭದಲ್ಲಿ ಕಾಮಗಾರಿಯಲ್ಲಿ ತೊಡಗಿಕೊಂಡವರನ್ನು ಮಾತನಾಡಿಸಿದ ಅವರು, ಕೆಲಸ ಮಾಡುವಾಗ ಒಬ್ಬರಿಂದ ಒಬ್ಬರು ಅಂತರ ಕಾಯ್ದುಕೊಳ್ಳಿ, ಎಲ್ಲರೂ ಕೈ ತೊಳೆದು ಊಟ ಮಾಡಿ, ನೀರು ಕುಡಿಯಿರಿ ಎಂದು ಸಲಹೆ ನೀಡಿದ್ದಾರೆ.
ಈ ವೇಳೆ ಜಿಲ್ಲಾಧಿಕಾರಿ ಶಿವಕುಮಾರ್, ಜಿ.ಪಂ ಸಿಇಒ ವೈಶಾಲಿ, ಎಸ್ಪಿ ಶಾಂತರಾಜು, ಡಿಹೆಚ್ಒ ರಾಜೇಶ್ ಸೂರಗಿಹಳ್ಳಿ ಸೇರಿ ಇತರರು ಹಾಜರಿದ್ದರು.