ಶಿವಮೊಗ್ಗ : 50 ಕೋಟಿ ರೂ. ವೆಚ್ಚದಲ್ಲಿ ವಿಶೇಷ ಕ್ರೀಡಾ ವಲಯ ಆರಂಭಿಸಲಾಗುವುದು ಎಂದು ಕೇಂದ್ರ ಕ್ರೀಡಾ ಸಚಿವ ಕಿರಣ್ ರಿಜಿಜು ತಿಳಿಸಿದರು.
ಓದಿ: ಪಂಚಮಸಾಲಿ ಮೀಸಲಾತಿ ಹೋರಾಟ: ಪ್ರತಿಭಟನಾಕಾರರು, ಪೊಲೀಸರ ನಡುವೆ ನೂಕಾಟ-ತಳ್ಳಾಟ
ಶಿವಮೊಗ್ಗ ನಗರದ ನೆಹರು ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸ್ಮಾರ್ಟ್ ಸಿಟಿ ಯೋಜನೆ ಅಡಿ ನೆಹರು ಕ್ರೀಡಾಂಗಣವನ್ನು ಮೇಲ್ದರ್ಜೆಗೇರಿಸುವ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು. ಶಿವಮೊಗ್ಗದಲ್ಲಿ 50 ಕೋಟಿ ರೂ. ವೆಚ್ಚದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸಹಯೋಗದಲ್ಲಿ ವಿಶೇಷ ಕ್ರೀಡಾ ವಲಯ ಆರಂಭಿಸುವುದಾಗಿ ಘೋಷಿಸಿದರು.
ಈ ವಿಶೇಷ ಕ್ರೀಡಾ ವಲಯದಲ್ಲಿ ವಿಶ್ವದರ್ಜೆಯ ಎಲ್ಲಾ ಸವಲತ್ತುಗಳು ದೊರೆಯುತ್ತವೆ. ಜೊತೆಗೆ ಉತ್ತಮ ತರಬೇತಿ ಸಿಗಲಿದೆ, ಮುಂದಿನ ದಿನಗಳಲ್ಲಿ ಶಿವಮೊಗ್ಗ ಭಾರತದ ಪ್ರಮುಖ ಕ್ರೀಡಾ ಕೇಂದ್ರವಾಗಿ ಪರಿವರ್ತನೆಯಾಗಲಿದೆ ಎಂದು ಕಿರಣ್ ರಿಜಿಜು ತಿಳಿಸಿದರು.
ಕ್ರೀಡಾಪಟುಗಳನ್ನ ಪ್ರೋತ್ಸಾಹಿಸಲು ಪ್ರೋತ್ಸಾಹ ಧನ ಸಹ ನೀಡಲಾಗುತ್ತಿದೆ. ಗ್ರಾಮೀಣ ಭಾಗದ ಪ್ರತಿಭೆಗಳನ್ನು ಸಹ ಗುರುತಿಸುವ ಕೆಲಸವನ್ನು ಕ್ರೀಡಾ ಇಲಾಖೆಯಿಂದ ನಡೆಯುತ್ತಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಸಂಸದ ಬಿ.ವೈ ರಾಘವೇಂದ್ರ, ಸಚಿವರುಗಳಾದ ಕೆ.ಎಸ್ ಈಶ್ವರಪ್ಪ, ನಾರಾಯಣಗೌಡ, ಜಿಲ್ಲಾಧಿಕಾರಿ ಕೆ.ಬಿ ಶಿವಕುಮಾರ್, ಮಹಾನಗರ ಪಾಲಿಕೆ ಆಯುಕ್ತ ಚಿದಾನಂದ ವಠಾರೆ ಸೇರಿ ಅಧಿಕಾರಿಗಳು ಹಾಗೂ ರಾಜಕೀಯ ಮುಖಂಡರು ಉಪಸ್ಥಿತರಿದ್ದರು.