ಶಿವಮೊಗ್ಗ: ದೇಶದಲ್ಲಿ ಕೊರೊನಾ ಹಾಗೂ ಪ್ರವಾಹ ಎದುರಾಗಿದೆ. ಈ ಎರಡೂ ವಿಪತ್ತುಗಳನ್ನು ಎದುರಿಸುವ ಶಕ್ತಿಯನ್ನು ದೇಶದ ಜನತೆಗೆ ಶ್ರೀಕೃಷ್ಣ ನೀಡಲೆಂದು ಬೇಡಿಕೊಳ್ಳುವುದಾಗಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.
ಜನರ ಮಧ್ಯೆ, ಜಾತಿ-ಜಾತಿಗಳ ಮಧ್ಯೆ ವಿಷಬೀಜ ಬಿತ್ತುತ್ತಿರುವ ಈ ಸಂದರ್ಭದಲ್ಲಿ ಎಲ್ಲಾ ಧರ್ಮ, ಜಾತಿಯವರನ್ನು ಒಟ್ಟಿಗೆ ಕರೆದುಕೊಂಡು ಹೋಗುವ ಹಿಂದೂ ಧರ್ಮದ ಶ್ರೇಷ್ಠ ನಾಯಕ ಶ್ರೀಕೃಷ್ಣ. ಆತನ ತತ್ವ ಸಿದ್ಧಾಂತಗಳನ್ನು ಎಲ್ಲರೂ ಜೀವನದಲ್ಲಿ ಅಳವಡಿಸೋಣ ಎಂದರು.
ಮಥುರಾದಲ್ಲಿ ಶ್ರೀಕೃಷ್ಣನ ದೇವಸ್ಥಾನ ಒಡೆದು ಮಸೀದಿ ಕಟ್ಟಲಾಗಿದೆ. ಮುಂದಿನ ದಿನಗಳಲ್ಲಿ ಅಯೋಧ್ಯೆಯ ರಾಮ ಮಂದಿರದಂತೆ ಶ್ರೀಕೃಷ್ಣನ ಮಂದಿರವೂ ಅಡೆತಡೆಗಳಿಲ್ಲದೆ ನಿರ್ಮಾಣವಾಗಲಿ ಎಂದರು.
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಪಾಲಿಕೆ ಮೇಯರ್ ಸುವರ್ಣ ಶಂಕರ್, ಉಪಮೇಯರ್ ಸುರೇಖಾ ಮುರುಳೀಧರ್ ಇದ್ದರು.