ಶಿವಮೊಗ್ಗ : ಜಿಲ್ಲಾ ವೀರಶೈವ ಸರ್ಕಾರಿ ನೌಕರರ ಸಂಘದ ವತಿಯಿಂದ ನಗರದ ಕೃಷಿ ನಗರದಲ್ಲಿ ನಿರ್ಮಾಣವಾಗುತ್ತಿರುವ ವಿದ್ಯಾರ್ಥಿ ನಿಲಯದ ಗುದ್ದಲಿ ಪೂಜೆಯನ್ನು ಸಚಿವ ಕೆ ಎಸ್ ಈಶ್ವರಪ್ಪ ನೆರವೇರಿಸಿದರು.
ಕಾರ್ಯಕ್ರಮದಲ್ಲಿ ಮಹಾನಗರ ಪಾಲಿಕೆ ಮೇಯರ್ ಸುವರ್ಣ ಶಂಕರ್, ನೌಕರರ ಸಂಘದ ರಾಜ್ಯಾಧ್ಯಕ್ಷ ಎಸ್. ಷಡಕ್ಷರಿ, ಜಿಲ್ಲಾಧಿಕಾರಿ ಕೆ ಬಿ ಶಿವಕುಮಾರ್ ಹಾಗೂ ಪ್ರಮುಖರು ಉಪಸ್ಥಿತರಿದ್ದರು.