ಶಿವಮೊಗ್ಗ : ನಗರದ ಮೆಗ್ಗಾನ್ ಆಸ್ಪತ್ರೆಯ ಆವರಣದಲ್ಲಿ ಐಎಂಎ, ಸೇವಾ ಭಾರತಿ ಹಾಗೂ ಕೋವಿಡ್ ಸುರಕ್ಷಾ ಪಡೆ ವತಿಯಿಂದ ಕೋವಿಡ್ ಪೀಡಿತ ರೋಗಿಗಳಿಗೆ ಮತ್ತು ಅವರ ಜೊತೆ ಆಗಮಿಸುವ ಸಂಬಂಧಿಗಳಿಗೆ ವಸತಿ, ಊಟ ವ್ಯವಸ್ಥೆ ಮಾಡಲು ಸೇವಾ ಸಂಸ್ಥೆಗಳು ಮುಂದೆ ಬಂದಿದೆ.
ಹಾಗಾಗಿ, ಇಂದು ಸಚಿವ ಕೆ.ಎಸ್ ಈಶ್ವರಪ್ಪ ನಗರದ ಮೆಗ್ಗಾನ್ ಆಸ್ಪತ್ರೆಯ ಆವರಣದಲ್ಲಿ ಊಟ, ವಸತಿ ವ್ಯವಸ್ಥೆಯ ಸ್ಥಳ ವೀಕ್ಷಣೆ ಮಾಡಿ, ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸಿಇಒ ವೈಶಾಲಿ, ಜಿಲ್ಲಾ ಪಂಚಾಯತ್ ಸದಸ್ಯ ಕೆ.ಇ ಕಾಂತೇಶ್ ಮತ್ತು ಮೆಗ್ಗಾನ್ ಆಸ್ಪತ್ರೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.