ಶಿವಮೊಗ್ಗ: ಗಾಂಧಿ ಬಜಾರ್ನಲ್ಲಿ ಬೆಂಕಿ ಅವಘಡ ಸಂಭವಿಸಿದ ಹಿನ್ನೆಲೆ ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರಪ್ಪ ಭೇಟಿ ನೀಡಿ, ಪರಿಶೀಲಿಸಿದರು.
ನಿನ್ನೆ ತಡರಾತ್ರಿ ನಗರದ ಗಾಂಧಿ ಬಜಾರ್ನ ಕನ್ನಿಕಾ ಪರಮೇಶ್ವರಿ ದೇವಾಲಯದ ಮುಂಭಾಗದಲ್ಲಿರುವ ಭರತ್ ಮತ್ತು ಮೋಹನ್ ಸಹೋದರರ ಮಾಲೀಕತ್ವದ ಮಾತೃಶ್ರೀ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡು ಲಕ್ಷಾಂತರ ರೂ. ಮೌಲ್ಯದ ಸೌಂದರ್ಯ ವರ್ಧಕ ಸಾಮಗ್ರಿಗಳು ನಾಶವಾಗಿದ್ದವು.
ಇಂದು ಬೆಳಗ್ಗೆ ಸಚಿವ ಕೆ.ಎಸ್. ಈಶ್ವರಪ್ಪ ಸ್ಥಳಕ್ಕೆ ಭೇಟಿ ನೀಡಿ, ಪರೀಶಿಲನೆ ನಡೆಸಿ ಕಟ್ಟಡದ ಮಾಲೀಕರಿಗೆ ಧೈರ್ಯ ತುಂಬಿದರು.
ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಮಾಜಿ ಉಪ ಮೇಯರ್ ಚೆನ್ನಬಸಪ್ಪ ಸೇರಿದಂತೆ ಪಾಲಿಕೆ ಸದಸ್ಯರು ಉಪಸ್ಥಿತರಿದ್ದರು.