ETV Bharat / state

ಸಿದ್ದರಾಮಯ್ಯನವರು ಕುರುಬರಿಗೆ ಮೀಸಲಾತಿ ಕೊಡಿಸುವುದನ್ನು ಬಿಟ್ಟು ಮಂಡಕ್ಕಿ ತಿನ್ನುತ್ತಿದ್ರಾ: ಈಶ್ವರಪ್ಪ

ಸಿದ್ದರಾಮಯ್ಯನವರು ಯಾಕೆ ರಾಜ್ಯದಲ್ಲಿ ಹಾಗೂ ಕೇಂದ್ರದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದ್ದಾಗ ಕುರುಬರಿಗೆ ಎಸ್ಟಿ ಮೀಸಲಾತಿ ಕೊಡಿಸಲಿಲ್ಲ. ಆ ಸಮಯದಲ್ಲಿ ಸಿದ್ದರಾಮಯ್ಯನವರು ಏನು ಮಂಡಕ್ಕಿ ತಿನ್ನುತ್ತಿದ್ರಾ. ಟೀಕೆ ಮಾಡುವುದು ತುಂಬಾ ಸುಲಭ, ಅವರು ಟೀಕೆ ಮಾಡಿದ್ದಕ್ಕೆ ಉತ್ತರ ಕೊಡುತ್ತಿದ್ದೇನೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.

author img

By

Published : Jan 5, 2021, 6:20 PM IST

ಸಚಿವ ಕೆ.ಎಸ್. ಈಶ್ವರಪ್ಪ ಪ್ರಶ್ನೆ
ಸಚಿವ ಕೆ.ಎಸ್. ಈಶ್ವರಪ್ಪ ಪ್ರಶ್ನೆ

ಶಿವಮೊಗ್ಗ: ಕೇಂದ್ರ ಹಾಗೂ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತದಲ್ಲಿದ್ದಾಗ ಸಿದ್ದರಾಮಯ್ಯನವರು ಕುರುಬರಿಗೆ ಮೀಸಲಾಗಿ ಕೊಡಿಸುವುದನ್ನು ಬಿಟ್ಟು ಮಂಡಕ್ಕಿ ತಿನ್ನುತ್ತಿದ್ರಾ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಪ್ರಶ್ನೆ ಮಾಡಿದ್ದಾರೆ.

ಸಚಿವ ಕೆ.ಎಸ್.ಈಶ್ವರಪ್ಪ

ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರದಲ್ಲಿ ಹಾಗೂ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಆಡಳಿತದಲ್ಲಿದೆ. ಯಾಕೆ ಈಶ್ವರಪ್ಪನವರು ಕುರುಬರಿಗೆ ಎಸ್ಟಿ ಮೀಸಲಾತಿ ಕೊಡಿಸುತ್ತಿಲ್ಲ ಎಂದು ಕೆಲವರು ಟೀಕೆ ಮಾಡುತ್ತಿದ್ದಾರೆ. ಆದರೆ ಸಿದ್ದರಾಮಯ್ಯನವರು ಯಾಕೆ ರಾಜ್ಯದಲ್ಲಿ ಹಾಗೂ ಕೇಂದ್ರದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದ್ದಾಗ ಕುರುಬರಿಗೆ ಎಸ್ಟಿ ಮೀಸಲಾತಿ ಕೊಡಿಸಲಿಲ್ಲ. ಯಾಕೆ ಆ ಸಮಯದಲ್ಲಿ ಸಿದ್ದರಾಮಯ್ಯನವರು ಏನು ಮಂಡಕ್ಕಿ ತಿನ್ನುತ್ತಿದ್ರಾ. ಟೀಕೆ ಮಾಡುವುದು ತುಂಬಾ ಸುಲಭ, ಅವರು ಟೀಕೆ ಮಾಡಿದ್ದಕ್ಕೆ ಉತ್ತರ ಕೊಡುತ್ತಿದ್ದೇನೆ. ಇಲ್ಲವಾದರೆ ಹೇಳುತ್ತಿರಲಿಲ್ಲ. ಅರ್ಹ ಕುರುಬರಿಗೆ ಎಸ್ಟಿ ಮೀಸಲಾತಿ ಕೊಡಿಸುವ ಕುರಿತು ರಾಜ್ಯದಲ್ಲಿ ಸಮಾವೇಶಗಳು ನಡೆಯುತ್ತಿವೆ. ನಮ್ಮ ನೀರಿಕ್ಷೆ ಮೀರಿ ಸಮಾವೇಶಗಳು ಯಶಸ್ವಿಯಾಗುತ್ತಿವೆ ಎಂದರು.

ಓದಿ:ಈ ಜನ್ಮದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲ್ಲ: ಸಚಿವ ಈಶ್ವರಪ್ಪ

ಇದೇ ತಿಂಗಳ 15ರಿಂದ ಕಾಗಿನೆಲೆ ಪೀಠದ ಇಬ್ಬರೂ ಸ್ವಾಮಿಗಳು ಕಾಗಿನೆಲೆಯಿಂದ ಬೆಂಗಳೂರಿನವರೆಗೂ ಪಾದಯಾತ್ರೆ ಮಾಡುತ್ತಿದ್ದಾರೆ. ಫೆ. 7ರಂದು ಬೆಂಗಳೂರಿನಲ್ಲಿ 10 ಲಕ್ಷಕ್ಕೂ ಹೆಚ್ಚು ಜನರನ್ನು ಸೇರಿಸುವ ಮೂಲಕ ಬಹೃತ್ ಸಮಾವೇಶ ಹಮ್ಮಿಕೊಳ್ಳಲಾಗುತ್ತಿದೆ. ಕುರುಬ ಸಮುದಾಯವನ್ನು ಎಸ್ಟಿ ಮೀಸಲಾತಿಗೆ ಸೇರಿಸಲು ಕೇಂದ್ರ ಸಚಿವ ಅರುಣ್ ಸಿಂಗ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದೇವೆ. ಅವರು ಸಹ ನಮ್ಮ ಮನವಿಗೆ ಸ್ಪಂದಿಸಿ ಪತ್ರ ಬರೆದಿದ್ದಾರೆ. ನಿಮ್ಮ ಮನವಿ ಪರೀಶಿಲಿಸಿ ಕ್ರಮ ಕೈಗೊಳ್ಳುತ್ತೇವೆ ಎಂದು ಪತ್ರ ಕಳುಹಿಸಿದ್ದಾರೆ. ಕುಲಶಾಸ್ತ್ರ ಅಧ್ಯಯನ ನಡೆಯುತ್ತಿದೆ. ಈ ವರದಿ ಬಂದ ನಂತರ ಪ್ರಧಾನಿಗಳಿಗೆ ಹಾಗೂ ಅಮಿತ್​​ ಶಾ ಹಾಗೂ ಮುಖ್ಯಮಂತ್ರಿಗೆ ಮನವಿ ಮಾಡಿ ಕುರುಬ ಸಮಾಜಕ್ಕೆ ಅನುಕೂಲ ಮಾಡಿಕೊಡಲಾಗುತ್ತದೆ ಎಂದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.