ETV Bharat / state

ನಿರಂತರ ಜ್ಯೋತಿ ಯೋಜನೆ ಸಮರ್ಪಕವಾಗಿ ಅನುಷ್ಠಾನಗೊಳಿಸಿ; ಸಚಿವ ಕೆ.ಎಸ್. ಈಶ್ವರಪ್ಪ - minister ks Ishwarappa reaction about nirantara jyothi scheme

ಗ್ರಾಮೀಣ ಪ್ರದೇಶಗಳಲ್ಲಿ ಮನೆಗಳಿಗೆ ನಿರಂತರ ವಿದ್ಯುತ್ ಸಂಪರ್ಕ ಕಲ್ಪಿಸುವ ನಿರಂತರ ಜ್ಯೋತಿ ಯೋಜನೆ ಅನುಷ್ಠಾನದಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ಅವ್ಯವಹಾರ ನಡೆದಿರುವುದು ಮೇಲ್ನೋಟಕ್ಕೆ ಕಂಡು ಬಂದಿದ್ದು, ಈ ಕುರಿತು ಸೂಕ್ತ ಕ್ರಮ ಜರುಗಿಸಲು ಸೂಚಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ತಿಳಿಸಿದ್ದಾರೆ.

minister ks Iswarappa meeting in shimogha
ಶಿವಮೊಗ್ಗ
author img

By

Published : Jan 18, 2021, 4:24 PM IST

ಶಿವಮೊಗ್ಗ: ನಿರಂತರ ಜ್ಯೋತಿ ಯೋಜನೆ ಅನುಷ್ಠಾನ ಕುರಿತು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಹಿರಿಯ ಅಧಿಕಾರಿಗಳೊಂದಿಗೆ ಸಚಿವ ಕೆಎಸ್​ ಈಶ್ವರಪ್ಪ ಸಭೆ ನಡೆಸಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಈಶ್ವರಪ್ಪ, ಗ್ರಾಮೀಣ ಪ್ರದೇಶಗಳಲ್ಲಿ ಮನೆಗಳಿಗೆ ನಿರಂತರ ವಿದ್ಯುತ್ ಸಂಪರ್ಕ ಕಲ್ಪಿಸುವ ನಿರಂತರ ಜ್ಯೋತಿ ಯೋಜನೆ ಅನುಷ್ಠಾನದಲ್ಲಿ ಜಿಲ್ಲೆಯಲ್ಲಿ ಅವ್ಯವಹಾರ ನಡೆದಿರುವುದು ಮೇಲ್ನೋಟಕ್ಕೆ ಕಂಡು ಬಂದಿದ್ದು, ಈ ಕುರಿತು ಸೂಕ್ತ ಕ್ರಮ ಜರುಗಿಸಲು ಸೂಚಿಸಲಾಗಿದೆ ಎಂದು ತಿಳಿಸಿದರು.

ಶಿವಮೊಗ್ಗ

ಜಿಲ್ಲೆಯಲ್ಲಿ ನಿರಂತರ ಜ್ಯೋತಿ ಯೋಜನೆಯಡಿ 68 ಫೀಡರ್​ಗಳ ಬಲವರ್ಧನೆಗೆ ಮಂಜೂರಾತಿ ದೊರೆತು ಕಾಮಗಾರಿ ಪ್ರಗತಿಯಲ್ಲಿದೆ. ಇದುವರೆಗೆ ಶಿವಮೊಗ್ಗ ವಿಭಾಗದಲ್ಲಿ 17 ಫೀಡರ್​ಗಳ ಪೈಕಿ 10, ಭದ್ರಾವತಿಯಲ್ಲಿ 18 ಫೀಡರ್​ಗಳ ಪೈಕಿ 14, ಸಾಗರದಲ್ಲಿ 9 ಫೀಡರ್​ಗಳ ಪೈಕಿ 5 ಮತ್ತು ಶಿಕಾರಿಪುರದಲ್ಲಿ 24 ಫೀಡರ್​ಗಳ ಪೈಕಿ 23 ಕಾಮಗಾರಿಗಳು ಪೂರ್ಣಗೊಂಡು ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ. ಶಿವಮೊಗ್ಗದಲ್ಲಿ ಬಾಕಿ ಉಳಿದಿರುವ 7 ಕಾಮಗಾರಿಗಳ ಪೈಕಿ 4 ಕಾಮಗಾರಿ ಈ ತಿಂಗಳ ಅಂತ್ಯದ ಒಳಗಾಗಿ ಪೂರ್ಣಗೊಳ್ಳಲಿದೆ. ಒಟ್ಟು ಯೋಜನೆಯ ವೆಚ್ಚ 226 ಕೋಟಿ ರೂ. ಅದರಲ್ಲಿ 148 ಕೋಟಿ ರೂ. ಪಾವತಿ ಮಾಡಲಾಗಿದೆ ಎಂದು ಮೆಸ್ಕಾಂ ಎಕ್ಸಿಕ್ಯೂಟಿವ್ ಇಂಜಿನಿಯರ್ ವೀರೇಂದ್ರ ಮಾಹಿತಿ ನೀಡಿದರು.

ಕಾಮಗಾರಿ ಅನುಷ್ಠಾನದ ಬಗ್ಗೆ ಹಿರಿಯ ಅಧಿಕಾರಿಗಳು ನಿಗಾ ವಹಿಸಬೇಕು. ಫೀಡರ್​ಗಳಲ್ಲಿ ಅಳವಡಿಸಿರುವ ಕಂಬಗಳ ಬಗ್ಗೆ ಸರಿಯಾಗಿ ಲೆಕ್ಕ ಇರುವುದಿಲ್ಲ. ಪ್ರತಿ ಕಂಬಗಳಿಗೂ ಸಂಖ್ಯೆಯನ್ನು ನಮೂದಿಸಬೇಕು. ಅಧಿಕಾರಿಗಳು ಎಲ್ಲಾ ಕಾಮಗಾರಿಗಳ ಸ್ಥಳ ಪರಿಶೀಲನೆ ನಡೆಸಬೇಕು. ಕೆಲಸ ನಿರ್ವಹಿಸಿದ ಕಾರ್ಮಿಕರಿಗೆ ಸರಿಯಾದ ವೇತನ ಮತ್ತು ಭವಿಷ್ಯ ನಿಧಿ ಸೌಲಭ್ಯ ನೀಡದಿರುವ ಬಗ್ಗೆ ದೂರುಗಳು ಬಂದಿದ್ದು, ಈ ಕುರಿತು ಪರಿಶೀಲಿಸಿ ಎಲ್ಲಾ ಕಾರ್ಮಿಕರಿಗೆ ಸರಿಯಾಗಿ ವೇತನ ಮತ್ತಿತರ ಸೌಲಭ್ಯ ಒದಗಿಸಬೇಕು. ಮಾರ್ಗಸೂಚಿಯನ್ನು ಉಲ್ಲಂಘಿಸಿ ಕಾಮಗಾರಿ ಅನುಷ್ಠಾನಗೊಳಿಸಿದವರ ವಿರುದ್ಧ ಶಿಸ್ತುಕ್ರಮ ಜರುಗಿಸುವಂತೆ ಸಚಿವರು ಅಧಿಕಾರಿಗಳಿಗೆ ತಾಕೀತು ಮಾಡಿದರು.

ಲೋಕಸಭಾ ಸದಸ್ಯ ಬಿವೈ ರಾಘವೇಂದ್ರ ಮಾತನಾಡಿ, ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಈ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳಬೇಕು. ಅಳವಡಿಸುವ ವಿದ್ಯುತ್ ಕಂಬಗಳು ಮಾತ್ರವಲ್ಲದೆ ಟ್ರಾನ್ಸ್​ಫಾರ್ಮರ್​ಗಳ ಬಗ್ಗೆ ಸರಿಯಾದ ಮಾಹಿತಿ ಒದಗಿಸಬೇಕು. ವಿದ್ಯುತ್ ಅಪಘಾತದಿಂದ ಸಾವಿಗೀಡಾಗುವವರಿಗೆ ತಕ್ಷಣ ಪರಿಹಾರ ಒದಗಿಸಲು ಕ್ರಮ ಕೈಗೊಳ್ಳಬೇಕು. ಮಾರ್ಗಸೂಚಿ ಪ್ರಕಾರ ಪ್ರಧಾನ ಮಂತ್ರಿ ಅವರ ಭಾವಚಿತ್ರವನ್ನು ಜಾಹೀರಾತಿನಲ್ಲಿ ಕಡ್ಡಾಯವಾಗಿ ಅಳವಡಿಸಬೇಕು ಎಂದು ತಿಳಿಸಿದರು.

ಶಾಸಕ ಅಶೋಕ ನಾಯ್ಕ, ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ, ಮೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಲ್. ವೈಶಾಲಿ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.