ETV Bharat / state

Textbook Revision:ಶಿಕ್ಷಣ ತಜ್ಞರೊಂದಿಗೆ ಚರ್ಚಿಸಿ ಪುಸ್ತಕಗಳ ಹೊರೆ ಇಳಿಸಲಾಗುವುದು: ಸಚಿವ ಮಧು ಬಂಗಾರಪ್ಪ

ಪಠ್ಯಪುಸ್ತಕ ಪರಿಷ್ಕರಣೆ- ಶಿಕ್ಷಣ ತಜ್ಞರ ಸಲಹೆ ಪಡೆದು ಮುಂದುವರೆಯಲಾಗುತ್ತದೆ. ಯಾವುದೇ ಪಕ್ಷದ ಸಿದ್ದಾಂತವನ್ನು ಪಠ್ಯದ ಮೇಲೆ ಹೇರುವುದಿಲ್ಲ ಎಂದು ಸಚಿವ ಮಧು ಬಂಗಾರಪ್ಪ ಸ್ಪಷ್ಟಪಡಿಸಿದ್ದಾರೆ.

Madhu Bangarappa
ಸಚಿವ ಮಧು ಬಂಗಾರಪ್ಪ
author img

By

Published : Jul 15, 2023, 5:47 PM IST

ಪಠ್ಯಪುಸ್ತಕ ಪರಿಷ್ಕರಣೆ- ಸಚಿವ ಮಧು ಬಂಗಾರಪ್ಪ ಪ್ರತಿಕ್ರಿಯೆ

ಶಿವಮೊಗ್ಗ: ವಿದ್ಯಾರ್ಥಿಗಳಿಗೆ ಹೊರೆಯಾಗದಂತೆ ಶಿಕ್ಷಣ ತಜ್ಞರ ಜೊತೆ ಮಾತನಾಡಿ ಪುಸ್ತಕರ ಹೊರೆ ಕಡಿಮೆ ಮಾಡಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಶಿವಮೊಗ್ಗ ಜಿಲ್ಲೆ ಸಾಗರದಲ್ಲಿ ಮಾತನಾಡಿದ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಪಠ್ಯಪುಸ್ತಕ ಪರಿಷ್ಕರಣೆ ಮಾಡಲಾಗಿದೆ ಎಂದರು.

ಸಪ್ಲಿಮೆಂಟರಿ ಪುಸ್ತಕಗಳನ್ನು ಈಗಾಗಲೇ ವಿದ್ಯಾರ್ಥಿಗಳಿಗೆ ತಲುಪಿಸಲಾಗಿದೆ. ಈಗಾಗಲೇ ಶಿಕ್ಷಕರ ಕೌನ್ಸೆಲಿಂಗ್ ಪ್ರಕ್ರಿಯೆ ಮುಕ್ತಾಯ ಹಂತದಲ್ಲಿದೆ. ವಿದ್ಯಾರ್ಥಿಗಳಿಗೆ ಶಿಕ್ಷಣಕ್ಕೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲಾಗಿದೆ. ಹೆಚ್ಚುವರಿ ಅತಿಥಿ ಶಿಕ್ಷಕರ ನೇಮಕಾತಿಗೂ ಕ್ರಮ ಕೈಗೊಳ್ಳಲಾಗಿದೆ. ರಾಜ್ಯದ ಅನೇಕ ಕಡೆಗಳಲ್ಲಿ ಶಾಲಾ ಕಟ್ಟಡಗಳ ದುರಸ್ತಿಗೂ ಕ್ರಮ ವಹಿಸಲಾಗಿದೆ ಎಂದು ಸಚಿವರು ತಿಳಿಸಿದರು. 1ರಿಂದ 8ನೇ ತರಗತಿವರೆಗೆ ಇದ್ದ ಮೊಟ್ಟೆ ವಿತರಣೆಯನ್ನು 10ನೇ ತರಗತಿಯ ವಿದ್ಯಾರ್ಥಿಗಳಿಗೂ ವಿಸ್ತರಿಸಲಾಗಿದೆ. ಪ್ರಸ್ತುತ ವಾರಕ್ಕೆ 2 ಮೊಟ್ಟೆಗಳಂತೆ ವರ್ಷಕ್ಕೆ ಒಟ್ಟು 84(ಒಬ್ಬ ವಿದ್ಯಾರ್ಥಿಗೆ) ಮೊಟ್ಟೆಗಳನ್ನು ವಿತರಿಸಲಾಗುತ್ತಿದೆ ಎಂದರು.

ಅನ್ನಭಾಗ್ಯ ಯೋಜನೆಯಡಿ ಅಕ್ಕಿ ಬದಲು ಹಣ: ಅನ್ನಭಾಗ್ಯ ಯೋಜನೆಯಡಿ ಅಕ್ಕಿಯ ಬದಲು ಹಣ ನೀಡಲಾಗುತ್ತಿದೆ. ಹಲವು ಫಲಾನುಭವಿಗಳ ಬ್ಯಾಂಕ್ ಖಾತೆ ಮತ್ತು ಆಧಾರ್ ಕಾರ್ಡ್​ಗಳಲ್ಲಿನ ಹೆಸರಿನ ವ್ಯತ್ಯಾಸ ಬಗ್ಗೆ ಕ್ರಮ ವಹಿಸಿ ಹಣ ತಲುಪಿಸಲಾಗುವುದು. ಕೇಂದ್ರ ಸರ್ಕಾರದವರು ಅಕ್ಕಿಯನ್ನು ನೀಡಿದ್ದರೆ ಈ ರೀತಿಯ ಸಮಸ್ಯೆಯ ಪ್ರಶ್ನೆ ಇರುತ್ತಿರಲಿಲ್ಲ. ಅವರು(ಕೇಂದ್ರ) ಅಕ್ಕಿ ನೀಡದಿದ್ದ ಹಿನ್ನೆಲೆ ಹಣ ಕೊಡುವ ಸಮಸ್ಯೆ ಉದ್ಭವಿಸಿದೆ. ಇದು ತಾತ್ಕಾಲಿಕವಾಗಿದ್ದು, ಶೀಘ್ರವೇ ಪರಿಹಾರವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಶರಾವತಿ ನದಿ ಮುಳುಗಡೆ ಸಂತ್ರಸ್ತರ ಭೂಮಿ ಹಕ್ಕು ಸಮಸ್ಯೆ ಬಗ್ಗೆ ಪ್ರತಿಕ್ರಿಯಿಸುತ್ತಾ ಪರಿಹಾರಕ್ಕೆ ಕ್ರಮ ಕೈಗೊಳ್ಳಲಾಗುತ್ತಿದೆ. ಈಗಾಗಲೇ ಅರಣ್ಯ ಸಚಿವರು, ಕಂದಾಯ ಸಚಿವರು ಎಲ್ಲರ ಸಭೆ ಕರೆಯಲು ಮನವಿ ಮಾಡಲಾಗಿದೆ ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದರು.

ಇದನ್ನೂ ಓದಿ: Textbook Revision: ಪಠ್ಯಪುಸ್ತಕ ತಿದ್ದುಪಡಿಗೊಳಿಸಿ ಸರ್ಕಾರದ ಆದೇಶ: ಹೆಡ್ಗೇವಾರ್ ಗದ್ಯಕ್ಕೆ ಕೊಕ್​, ಹಲವು ಪಾಠಗಳಿಗೆ ಕತ್ತರಿ

ಹೆಡ್ಗೇವಾರ್, ಸಾವರ್ಕರ್ ಕುರಿತಾದ ಪಠ್ಯ ಹಿಂತೆಗೆತ: ಇತ್ತೀಚೆಗೆ ರಾಜ್ಯ ಸರ್ಕಾರ ಪಠ್ಯಪುಸ್ತಕ ಪರಿಷ್ಕರಣೆ ಮಾಡಿತ್ತು. ಆರ್‌ಎಸ್‌ಎಸ್‌ ಸಂಸ್ಥಾಪಕ ಹೆಡ್ಗೇವಾರ್‌, ಹಿಂದೂ ಮಹಾಸಭಾ ಮುಖಂಡ ವಿ.ಡಿ ಸಾವರ್ಕರ್‌ ಹಾಗೂ ಚಿಂತಕ ಸೂಲಿಬೆಲೆ ಚಕ್ರವರ್ತಿ ಕುರಿತಾದ ಪಾಠ ತೆಗೆಯಲು ತೀರ್ಮಾನಿಸಿತ್ತು. ಈ ಹಿಂದಿನ ಬಿಜೆಪಿ ಸರ್ಕಾರ ಶಾಲಾ ಪಠ್ಯದಲ್ಲಿ ಸೇರಿಸಿದ್ದ ಆರ್‌ಎಸ್‌ಎಸ್‌ ಮುಖಂಡ ಹೆಡ್ಗೇವಾರ್‌, ಹಿಂದೂ ಮಹಾಸಭಾ ಮುಖಂಡ ವಿ.ಡಿ ಸಾವರ್ಕರ್‌ ಹಾಗೂ ಚಿಂತಕ ಸೂಲಿಬೆಲೆ ಚಕ್ರವರ್ತಿಯವರ ಪಠ್ಯವನ್ನು ಕೈಬಿಡಲು ಸಚಿವ ಸಂಪುಟದಲ್ಲಿ ತೀರ್ಮಾನ ಮಾಡಲಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದ ಸಚಿವರು, ಈ ಹಿಂದೆ ಇದ್ದ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಯು ಸಾವಿತ್ರಿ ಪುಲೆ ಅವರ ವಿಷಯವನ್ನು ತೆಗೆದಿತ್ತು, ಅದನ್ನು ಮರಳಿ ಸೇರಿಸಲಾಗಿದೆ. ನೀ ಹೋದ ಮರುದಿನ ಅಂಬೇಡ್ಕರ್ ಅವರ ಬಗೆಗಿನ ಕವನ, ಮಗಳಿಗೆ ಬರೆದ ಪತ್ರ ಎಂಬ ನೆಹರೂ ಅವರದ್ದನ್ನೂ ಸಹ ಮರಳಿ ಸೇರಿಸಲಾಗುತ್ತಿದೆ. ಹಾಗೆಯೇ ಮುಂದಿನ ದಿನಗಳಲ್ಲಿ ರಾಜಪ್ಪ ದಳವಾಯಿ, ರಮೇಶ್ ಕುಮಾರ್, ಪಿ.ಆರ್. ಚಂದ್ರಶೇಖರ್, ಅಶ್ವತ್ಥನಾರಾಯಣ ಹಾಗೂ ರಾಜೇಶ್ ಸೇರಿದಂತೆ ಐದು ಮಂದಿಯ ಸಮಿತಿಯನ್ನು ರಚಿಸಲು ತೀರ್ಮಾನಿಸಲಾಗಿದೆ. ಈ ಸಮಿತಿ ಮುಂದಿನ ದಿನಗಳಲ್ಲಿ ಪಠ್ಯಪುಸ್ತಕಗಳ ಪರಿಷ್ಕರಣೆಗೆ ಸಂಬಂಧಿಸಿದಂತೆ ವರದಿ ನೀಡಲಿದೆ ಎಂದು ಅವರು ತಿಳಿಸಿದ್ದರು.

ಇದನ್ನೂ ಓದಿ: Textbook Revision: ಹೆಡ್ಗೇವಾರ್, ಸಾವರ್ಕರ್ ಕುರಿತಾದ ಪಠ್ಯ ಹಿಂತೆಗೆತ.. ಶಾಲಾ, ಕಾಲೇಜುಗಳಲ್ಲಿ ಸಂವಿಧಾನ ಪೀಠಿಕೆ ಓದಲು ತೀರ್ಮಾನ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.