ETV Bharat / state

ಶಿವಮೊಗ್ಗ: ಮಕ್ಕಳ ದೈಹಿಕ, ಮಾನಸಿಕ ವಿಕಾಸಕ್ಕೆ ಕ್ರೀಡೆ ಸಹಕಾರಿ- ಮಧು ಬಂಗಾರಪ್ಪ - ​ ETV Bharat Karnataka

ಸೊರಬದ ಪದವಿಪೂರ್ವ ಕಾಲೇಜಿನ ಮೈದಾನದಲ್ಲಿ ಆಯೋಜಿಸಲಾಗಿದ್ದ ರಾಜ್ಯ ಮಟ್ಟದ ಬಾಲಕ, ಬಾಲಕಿಯರ ಥ್ರೋ ಬಾಲ್ ಪಂದ್ಯಾವಳಿ ಉದ್ಘಾಟಿಸಿದ ಬಳಿಕ ಸಚಿವ ಮಧು ಬಂಗಾರಪ್ಪ ಮಾತನಾಡಿದರು.

ಸಚಿವ ಮಧು ಬಂಗಾರಪ್ಪ
ಸಚಿವ ಮಧು ಬಂಗಾರಪ್ಪ
author img

By ETV Bharat Karnataka Team

Published : Dec 26, 2023, 9:06 PM IST

ಶಿವಮೊಗ್ಗ: ಪ್ರತಿ ತಾಲೂಕಿಗೆ 4-6ರಂತೆ ರಾಜ್ಯದ ಎಲ್ಲಾ ತಾಲೂಕುಗಳಲ್ಲಿ ಸುಮಾರು 3,000 ಕೆಪಿಎಸ್ ಮಾದರಿ ಶಾಲೆಗಳನ್ನು ಆರಂಭಿಸಲು ಉದ್ದೇಶಿಸಲಾಗಿದೆ ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಎಸ್.ಬಂಗಾರಪ್ಪ ಹೇಳಿದ್ದಾರೆ.

ಶಿಕ್ಷಣ ಇಲಾಖೆ, ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿಯ ಸಹಯೋಗದೊಂದಿಗೆ ಇಂದು ಸೊರಬದ ಪದವಿಪೂರ್ವ ಕಾಲೇಜಿನ ಮೈದಾನದಲ್ಲಿ ಆಯೋಜಿಸಲಾಗಿದ್ದ ರಾಜ್ಯ ಮಟ್ಟದ 14 ಮತ್ತು 17ವರ್ಷ ವಯೋಮಿತಿಯೊಳಗಿನ ಬಾಲಕ,ಬಾಲಕಿಯರ ಥ್ರೋ ಬಾಲ್ ಪಂದ್ಯಾವಳಿಯನ್ನು ಮಧು ಬಂಗಾರಪ್ಪ ಉದ್ಘಾಟಿಸಿದರು. ಬಳಿಕ ಮಾತನಾಡುತ್ತಾ, ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ದೈಹಿಕ ಮತ್ತು ಮಾನಸಿಕ ವಿಕಾಸಕ್ಕೆ ಕ್ರೀಡೆ ಸಹಕಾರಿ. ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲೂ ಸಕ್ರಿಯವಾಗಿ ಭಾಗವಹಿಸಬೇಕು ಎಂದರು.

ಮಕ್ಕಳಲ್ಲಿನ ಸುಪ್ತ ಪ್ರತಿಭೆಯ ಅನಾವರಣಕ್ಕೆ ಅವಕಾಶ ಕಲ್ಪಿಸಿಕೊಡುವುದರ ಜೊತೆಗೆ ಸರ್ಕಾರ ಹಾಗೂ ಸ್ಥಳೀಯರ ಪ್ರೋತ್ಸಾಹವೂ ಅತ್ಯಗತ್ಯ. ಹಿಂದೆ ಇದ್ದ ಹಳೆಯ ಜನಪದ ಕ್ರೀಡೆಗಳು ಕಣ್ಮರೆಯಾಗಿವೆ. ಮಕ್ಕಳು ದೇಶದ ಸಾಧಕರ ಸಾಲಿನಲ್ಲಿ ನಿಲ್ಲುವಂತಾಗಲು ಸಕಾಲಿಕ ಪ್ರೋತ್ಸಾಹ ಅಗತ್ಯ. ಸ್ಥಳೀಯವಾಗಿಯೂ ಜಗತ್ತಿಗೆ ಪ್ರೇರಣೆಯಾಗಬಹುದಾದ ಪ್ರತಿಭೆಗಳಿವೆ. ಈ ಶಾಲೆಗಳಲ್ಲಿ ಪಠ್ಯ ವಿಷಯಗಳಲ್ಲದೆ ಕಲೆ, ಸಾಹಿತ್ಯ, ಸಂಗೀತ, ನೃತ್ಯ ಸೇರಿದಂತೆ ಎಲ್ಲಾ ಪ್ರಕಾರದ ಶಿಕ್ಷಣ ಒದಗಿಸಲು ಕ್ರಮ ಕೈಗೊಳ್ಳಲಾಗುವುದು. ಪ್ರಾಥಮಿಕ ಹಂತದಿಂದ ದ್ವಿತೀಯ ಪಿಯುಸಿ ವರೆಗಿನ ಶಿಕ್ಷಣ ಪಡೆಯುವ ಮಕ್ಕಳಿಗೆ ಸಮಾಜದ ಎಲ್ಲಾ ಕ್ಷೇತ್ರಗಳ ಪರಿಚಯವಾಗಲಿದೆ ಮಾತ್ರವಲ್ಲ, ಅವರ ಸರ್ವಾಂಗೀಣ ವಿಕಾಸಕ್ಕೆ ಅವಕಾಶವಾಗಲಿದೆ ಎಂದು ಮಧು ಬಂಗಾರಪ್ಪ ಅಭಿಪ್ರಾಯ ವ್ಯಕ್ತಪಡಿಸಿದರು.

ರಾಜ್ಯ ಮಟ್ಟದ ಬಾಲಕ-ಬಾಲಕಿಯರ ತ್ರೋಬಾಲ್ ಪಂದ್ಯಾವಳಿ ಉದ್ಘಾಟನೆ

ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಕೊರತೆ ಇರುವ 5,500 ದೈಹಿಕ ಶಿಕ್ಷಕರು ಹಾಗೂ 40,000ಕ್ಕೂ ಹೆಚ್ಚಿನ ಶಿಕ್ಷಕರ ನೇಮಕಾತಿಗೆ ಆರ್ಥಿಕ ಇಲಾಖೆಯ ಅನುಮತಿ ಪಡೆದು ಹಂತ ಹಂತವಾಗಿ ಕ್ರಮ ಕೈಗೊಳ್ಳಲಾಗುವುದು. ರಾಜ್ಯದ 1.80 ಲಕ್ಷ ಮಕ್ಕಳಿಗೆ ರಾಗಿ ಮಾಲ್ಟ್ ನೀಡುವ ಯೋಜನೆಯನ್ನು ಮುಂದಿನ ಶೈಕ್ಷಣಿಕ ವರ್ಷದಿಂದಲೇ ಆರಂಭಿಸಲಾಗುವುದು. ಮುಂದಿನ ವರ್ಷದ ಡಿಸೆಂಬರ್ 31ರೊಳಗಾಗಿ ರಾಜ್ಯದ ಎಲ್ಲಾ ಪ್ರಾಥಮಿಕ ಶಾಲೆಗಳಲ್ಲಿನ ಮಕ್ಕಳು ನೆಲದ ಮೇಲೆ ಕೂರದಂತೆ ಅಗತ್ಯ ಬೆಂಚು ಕುರ್ಚಿ ಟೇಬಲ್‌ಗಳನ್ನು ಒದಗಿಸಲಾಗುವುದು ಎಂದು ಸಚಿವರು ಭರವಸೆ ನೀಡಿದರು.

ಇದೇ ಸಂದರ್ಭದಲ್ಲಿ ರಾಜ್ಯದ ಬೆಳಗಾವಿ, ಕಲಬುರ್ಗಿ, ಮೈಸೂರು ಮತ್ತು ಬೆಂಗಳೂರು ವಿಭಾಗಗಳಿಂದ ಆಗಮಿಸಿದ ಕ್ರೀಡಾಪಟುಗಳಿಗೆ ಉತ್ತಮ ಗುಣಮಟ್ಟದ ಶೂ ಮತ್ತು ಎರಡು ಜೊತೆ ಸಾಕ್ಸ್​ಗಳನ್ನು ನೀಡುವುದಾಗಿ ಅವರು ಘೋಷಿಸಿದರು.

ಕಾರ್ಯಕ್ರಮದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಸಿ.ಆರ್.ಪರಮೇಶ್ವರಪ್ಪ, ಡಯಟ್ ಪ್ರಾಚಾರ್ಯ ಬಸವರಾಜಪ್ಪ ಬಿ.ಆರ್., ತಹಶೀಲ್ದಾರ್, ತಾಲೂಕು ಕಾರ್ಯನಿರ್ವಾಹಕ ಅಧಿಕಾರಿ ಡಾ. ಪ್ರದೀಪ್ ಕುಮಾರ್ ಎನ್.ಆರ್., ಪುರಸಭಾ ಸದಸ್ಯರಾದ ಆಫ್ರಿನ್ ಮೆಹಬೂಬ್ ಬಾಷಾ, ಪ್ರೇಮ ಟೋಕಪ್ಪ, ಅನ್ಸರ್ ಅಹಮದ್, ಸುಲ್ತಾನ ಬೇಗಂ, ಶಿವರಂಜಿನಿ ಪ್ರವೀಣ್ ಕುಮಾರ್ ಮತ್ತಿತರರಿದ್ದರು.

ಇದನ್ನೂ ಓದಿ: ಯುವನಿಧಿ ನೋಂದಣಿಗೆ ಚಾಲನೆ: ಐದೂ ಗ್ಯಾರಂಟಿ ಜಾರಿ ಮಾಡಿದ್ದೇವೆ, ರಾಜ್ಯ ದಿವಾಳಿಯಾಗಿಲ್ಲ; ಸಿದ್ದರಾಮಯ್ಯ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.