ETV Bharat / state

ಜಿಲೆಟಿನ್ ಸ್ಫೋ​​ಟ ಸ್ಥಳಕ್ಕೆ ಸಚಿವ ನಿರಾಣಿ ಭೇಟಿ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮದ ಎಚ್ಚರಿಕೆ

ಜಿಲೆಟಿನ್ ಸ್ಫೋಟ ಪ್ರಕರಣದಲ್ಲಿ ಯಾರೇ ಭಾಗಿಯಾಗಿದ್ದರೂ ಅವರನ್ನು ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ. ಅವರು ಎಷ್ಟೇ ಪ್ರಭಾವಿಗಳೇ ಇರಲಿ, ಯಾವುದೇ ರಾಜಕೀಯ ಪಕ್ಷಕ್ಕೆ ಸೇರಿದ್ದರೂ ಅವರ ವಿರುದ್ಧ ಕ್ರಮ ಜರುಗಿಸಲು ಹಿಂಜರಿಯುವುದಿಲ್ಲ ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ್ ನಿರಾಣಿ ಎಚ್ಚರಿಸಿದ್ದಾರೆ.

ಮುರುಗೇಶ್ ನಿರಾಣಿ
ಮುರುಗೇಶ್ ನಿರಾಣಿ
author img

By

Published : Jan 22, 2021, 5:51 PM IST

ಶಿವಮೊಗ್ಗ: ತಾಲೂಕಿನ ಹುಣಸೋಡು ಗ್ರಾಮಕ್ಕೆ ಭೇಟಿ ನೀಡಿ, ಕಳೆದ ರಾತ್ರಿ ಸಂಭವಿಸಿದ ಸ್ಫೋಟದಿಂದ ಹಾನಿಯಾದ ಮನೆಗಳನ್ನು ವೀಕ್ಷಣೆ ಮಾಡಿ ಸಮಸ್ಯೆ ಆಲಿಸಿದ ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ್ ನಿರಾಣಿ, ತನಿಖಾ ಸಮಿತಿ ರಚಿಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಿದ್ದೇವೆ ಎಂದು ಭರವಸೆ ನೀಡಿದರು.

ಘಟನಾ ಸ್ಥಳಕ್ಕೆ ಸಚಿವ ಮುರುಗೇಶ್ ನಿರಾಣಿ ಭೇಟಿ, ಪರಿಶೀಲನೆ

ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಮುಖ್ಯಮಂತ್ರಿ ಯಡಿಯೂರಪ್ಪನವರು ಉನ್ನತ ಮಟ್ಟದ ತನಿಖೆಗೆ ಆದೇಶಿಸಿದ್ದಾರೆ. ಇದಕ್ಕಾಗಿ ತನಿಖಾ ಸಮಿತಿಯನ್ನು ಶೀಘ್ರದಲ್ಲೇ ರಚನೆ ಮಾಡುತ್ತೇವೆ ಎಂದರು.

ಈ ಘಟನೆ ಹೇಗೆ ನಡೆಯಿತು?, ರಾಜ್ಯಕ್ಕೆ ಜಿಲೆಟಿನ್ ಕಡ್ಡಿಗಳು ಎಲ್ಲಿಂದ ಬಂದವು?, ಇದರ ಹಿಂದೆ ಯಾರಿದ್ದಾರೆ? ಎನ್ನುವುದೂ ಸೇರಿದಂತೆ ಎಲ್ಲಾ ಆಯಾಮಗಳಲ್ಲೂ ತನಿಖೆ ಮಾಡಲಾಗುವುದು. ಪ್ರಕರಣದಲ್ಲಿ ಯಾರೇ ಭಾಗಿಯಾಗಿದ್ದರೂ ಅವರನ್ನು ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ. ಅವರು ಎಷ್ಟೇ ಪ್ರಭಾವಿಗಳೇ ಇರಲಿ, ಯಾವುದೇ ರಾಜಕೀಯ ಪಕ್ಷಕ್ಕೆ ಸೇರಿದ್ದರೂ ಅವರ ವಿರುದ್ಧ ಕ್ರಮ ಜರುಗಿಸಲು ಹಿಂಜರಿಯುವುದಿಲ್ಲ ಎಂದು ಎಚ್ಚರಿಸಿದರು.

ರಾಜ್ಯದಲ್ಲಿ ಕಾನೂನು ಬಾಹಿರವಾಗಿ ಎಲ್ಲೆಲ್ಲಿ ಅಕ್ರಮ ಕ್ವಾರಿಗಳು ನಡೆಯುತ್ತವೆ ಎಂಬುದನ್ನು ಶೀಘ್ರ ಪತ್ತೆಹಚ್ಚಿ ಕ್ರಮ ಜರುಗಿಸಲು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗುವುದು. ಭವಿಷ್ಯದಲ್ಲಿ ಇಂತಹ ಘಟನೆ ನಡೆಯದಂತೆ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು.

ಸ್ಫೋಟಕ್ಕೆ ಬಳಸುವ ರಾಸಾಯನಿಕ ವಸ್ತುಗಳನ್ನು ಪರಿಶೀಲಿಸಿದ ಬಳಿಕ ಗುತ್ತಿಗೆ ನೀಡಲಾಗುವುದು. ಇದನ್ನು ತರುವುದಕ್ಕಾಗಿ ಪ್ರತ್ಯೇಕ ವಾಹನ, ಸಂಗ್ರಹಿಸಡಲು ಸ್ಥಳ ಪ್ರತಿಯೊಂದಕ್ಕೂ ನಿಯಮಗಳಿವೆ. ಇದನ್ನು ಇಲ್ಲಿಯವರು ಪಾಲನೆ ಮಾಡಿದ್ದಾರೆಯೇ ಎಂಬುದನ್ನು ಪರಿಶೀಲನೆ ಮಾಡುತ್ತೇವೆ ಎಂದು ಹೇಳಿದರು.

ಕೆಲವು ಸಂದರ್ಭಗಳಲ್ಲಿ ಅಭಿವೃದ್ಧಿ ಕಾರ್ಯಗಳಿಗಾಗಿ ಕಲ್ಲು ಗಣಿಗಾರಿಕೆ ಅಗತ್ಯವಾಗಿರುತ್ತದೆ. ಅಧಿಕಾರಿಗಳು ಪರಿಶೀಲನೆ ಮಾಡಿ ಅನುಮತಿ ನೀಡಿರುತ್ತಾರೆ. ಈಗ ಎಲ್ಲೆಲ್ಲಿ ಅನಧಿಕೃತವಾಗಿ ಇಂತಹ ಚಟುವಟಿಕೆಗಳನ್ನು ನಡೆಸಿರುತ್ತಾರೋ ಅವುಗಳ ವಿರುದ್ಧ ಕ್ರಮ ಕೈಗೊಳ್ಳಲು ನೋಟೀಸ್ ನೀಡಲಾಗಿದೆ ಎಂದು ಸಚಿವರು ತಿಳಿಸಿದರು.

ಈವರೆಗೂ ಘಟನೆಯಲ್ಲಿ 5 ಮಂದಿ ಮೃತಪಟ್ಟಿದ್ದಾರೆ. ಒಬ್ಬ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾನೆ. ಘಟನೆಯಲ್ಲಿ ಗಾಯಗೊಂಡವರಿಗೆ ಸೂಕ್ತ ವೈದ್ಯಕೀಯ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿಸಿದರು.

ಪರಿಹಾರ: ಈಗಾಗಲೇ ಘಟನೆಯಲ್ಲಿ ಮೃತಪಟ್ಟ ಕುಟುಂಬಗಳಿಗೆ ಮುಖ್ಯಮಂತ್ರಿ ಯಡಿಯೂರಪ್ಪನವರು 5 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾರೆ. ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಹಾಗೂ ಕಾರ್ಮಿಕ ಇಲಾಖೆಯಿಂದಲೂ ಪರಿಹಾರ ನೀಡುವ ಬಗ್ಗೆ ಚಿಂತನೆ ಮಾಡುತ್ತೇವೆ. ಸದ್ಯದಲ್ಲೇ ಅಧಿಕಾರಿಗಳ ಸಭೆ ಕರೆದು ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಆಶ್ವಾಸನೆ ಕೊಟ್ಟರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.