ETV Bharat / state

ವಿದ್ಯಾರ್ಥಿಗಳು ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಲು ಸರ್ವ ಸಿದ್ಧತೆ: ಶಿಕ್ಷಣ ಸಚಿವ ಸುರೇಶ್ ಕುಮಾರ್​

author img

By

Published : Jun 9, 2020, 8:58 PM IST

Updated : Jun 9, 2020, 11:42 PM IST

ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಶಿರಸಿ ಶೈಕ್ಷಣಿಕ ಜಿಲ್ಲೆಗಳ ಶಿಕ್ಷಣ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆ ನಡೆಸಲು ಕೈಗೊಂಡಿರುವ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಿದರು.

ಶಿಕ್ಷಣ ಸಚಿವ ಸುರೇಶ್ ಕುಮಾರ್​
ಶಿಕ್ಷಣ ಸಚಿವ ಸುರೇಶ್ ಕುಮಾರ್​

ಶಿವಮೊಗ್ಗ: ಜೂನ್ 25 ರಿಂದ ಆರಂಭವಾಗಲಿರುವ ಎಸ್‍ಎಸ್‍ಎಲ್‍ಸಿ ಪರೀಕ್ಷೆಯನ್ನು ವಿದ್ಯಾರ್ಥಿಗಳು ಆತ್ಮವಿಶ್ವಾಸದಿಂದ ಎದುರಿಸಲು ಎಲ್ಲಾ ವ್ಯವಸ್ಥೆಗಳನ್ನು ಮಾಡಲಾಗಿದ್ದು, ವಿದ್ಯಾರ್ಥಿಗಳು ನಿರಾತಂಕವಾಗಿ ಪರೀಕ್ಷೆಗೆ ಸಿದ್ಧತೆ ನಡೆಸುವಂತೆ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ ಕುಮಾರ್ ತಿಳಿಸಿದರು.

ಶಿಕ್ಷಣ ಸಚಿವ ಸುರೇಶ್ ಕುಮಾರ್​

ಮಕ್ಕಳ ಸುರಕ್ಷತೆ ಸರ್ಕಾರದ ಪ್ರಮುಖ ಆದ್ಯತೆ. ರಾಜ್ಯ ಹೈಕೋರ್ಟ್‍ಗೆ ಈ ಕುರಿತು ಸರ್ಕಾರ ಹೇಳಿಕೆಯನ್ನು ಸಲ್ಲಿಸಿದ್ದು, ಅದರ ಪ್ರಕಾರ ಪರೀಕ್ಷೆಯನ್ನು ಆಯೋಜಿಸಲು ಎಲ್ಲಾ ಕ್ರಮಗಳನ್ನು ಕೈಗೊಳ್ಳಬೇಕು. ಪರೀಕ್ಷಾ ಹಾಲ್‍ನಲ್ಲಿ 18ಕ್ಕಿಂತ ಹೆಚ್ಚು ಮಕ್ಕಳು ಇರಬಾರದು. ಮಾರ್ಗಸೂಚಿ ಪ್ರಕಾರ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕು. ಪ್ರತಿ ಮಕ್ಕಳು ಹಾಲ್​ ಟಿಕೆಟ್ ಪಡೆಯಲು ಬರುವ ಸಂದರ್ಭದಲ್ಲಿಯೇ ಮಾಸ್ಕ್ ಒದಗಿಸಬೇಕು. ಪರೀಕ್ಷೆ ಮುಗಿದ ಬಳಿಕ ಮಕ್ಕಳು ಗುಂಪಾಗಿ ಸೇರದಂತೆ ಮುನ್ನೆಚ್ಚರಿಕೆ ವಹಿಸಬೇಕು. ಪ್ರತಿ ವಿದ್ಯಾರ್ಥಿಗಳ ಆರೋಗ್ಯ ತಪಾಸಣೆಯನ್ನು ಪ್ರತಿ ದಿನ ಮಾಡಲಾಗುವುದು. ಅನಾರೋಗ್ಯ ಲಕ್ಷಣ ಇರುವ ಮಕ್ಕಳನ್ನು ಮೊದಲೇ ನಿಗದಿಪಡಿಸಿದ ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡಬೇಕು. ಎಲ್ಲಾ ಶಾಲೆಗಳಿಗೆ ಈಗಾಗಲೇ ಸ್ಯಾನಿಟೈಸರ್ ಒದಗಿಸಲಾಗಿದೆ ಎಂದು ಮಾಹಿತಿ ನೀಡಿದರು.

ಪರೀಕ್ಷೆ ಆರಂಭವಾಗುವ ಎರಡು ದಿನಗಳ ಮೊದಲು ಇಡೀ ಪರೀಕ್ಷಾ ಕೇಂದ್ರದ ಸ್ಯಾನಿಟೈಜೇಶನ್ ಮಾಡಬೇಕು. ಪರೀಕ್ಷೆ ಮುಗಿದ ಬಳಿಕ ಪ್ರತಿದಿನ ಇದನ್ನು ಪುನರಾವರ್ತಿಸಬೇಕು. ಪರೀಕ್ಷಾ ಕೊಠಡಿಯ ಮೇಲ್ವಿಚಾರಕರು ಸಹ ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಬೇಕು. ಅವರು ಹೆಚ್ಚುವರಿಯಾಗಿ ಕೈ ಗವಸು ಧರಿಸಬೇಕು. ವಿದ್ಯಾರ್ಥಿಗಳು ಕಡ್ಡಾಯವಾಗಿ ಮನೆಯಿಂದಲೇ ಕುಡಿಯುವ ನೀರು ತೆಗೆದುಕೊಂಡು ಬರುವಂತೆ ಸೂಚನೆ ನೀಡಬೇಕು. ಮಧ್ಯಾಹ್ನ ಬಿಸಿಯೂಟ ಒದಗಿಸುವ ಕುರಿತು ಸ್ಥಳೀಯವಾಗಿಯೇ ನಿರ್ಧಾರ ಕೈಗೊಳ್ಳಬಹುದಾಗಿದೆ. ಆದರೆ ಯಾವುದೇ ಕಾರಣಕ್ಕೂ ಶಾಲಾ ಕೊಠಡಿಯಲ್ಲಿ ಬಿಸಿಯೂಟ ನೀಡಬಾರದು. ಒಟ್ಟು ಯಾವುದೇ ಕಾರಣಕ್ಕೂ ಲೋಪವಾಗದಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದರು.

ಆನ್‍ಲೈನ್ ತರಗತಿ:

ಈಗ ಕೆಲವು ಖಾಸಗಿ ಶಿಕ್ಷಣ ಸಂಸ್ಥೆಗಳು ಆನ್‍ಲೈನ್ ತರಗತಿಗಳನ್ನು ಆರಂಭಿಸಿವೆ. ಈ ಕುರಿತು ಸ್ಪಷ್ಟ ಮಾರ್ಗಸೂಚಿ ಸಿದ್ಧಪಡಿಸುವ ಉದ್ದೇಶದಿಂದ ನಿಮಾನ್ಸ್ ತಜ್ಞರೊಂದಿಗೆ ಸಮಾಲೋಚನೆ ನಡೆಸಲಾಗುತ್ತಿದೆ. ನಾಳೆ ಅಂತಿಮ ಹಂತದ ಸಮಾಲೋಚನೆ ನಡೆಯಲಿದ್ದು, ಆ ಬಳಿಕ ಸ್ಪಷ್ಟ ನಿರ್ಧಾರ ಪ್ರಕಟಿಸಲಾಗುವುದು. ಎಲ್‍ಕೆಜಿ ಮತ್ತು ಯುಕೆಜಿ ಮಕ್ಕಳಿಗೆ ಆನ್‍ಲೈನ್ ತರಗತಿ ನಡೆಸುವುದು ಅವೈಜ್ಞಾನಿಕ ಮಾತ್ರವಲ್ಲ ಅಮಾನವೀಯವಾಗಿದೆ ಎಂದು ಸಚಿವರು ಅಭಿಪ್ರಾಯ ಪಟ್ಟರು.

ಕಂಟೈನ್ಮೆಂಟ್ ವಲಯ:

ಕಂಟೈನ್ಮೆಂಟ್ ವಲಯದಲ್ಲಿ ಯಾವುದೇ ಪರೀಕ್ಷಾ ಕೇಂದ್ರ ಇಲ್ಲದಂತೆ ನೋಡಿಕೊಳ್ಳಲಾಗಿದೆ. ಒಂದು ವೇಳೆ ಪರೀಕ್ಷೆ ಆರಂಭವಾದ ಬಳಿಕ ಕಂಟೈನ್ಮೆಂಟ್ ವಲಯ ಘೋಷಣೆಯಾದರೆ, ಅಂತಹ ವಿದ್ಯಾರ್ಥಿಗಳಿಗೆ ಜುಲೈ ತಿಂಗಳಲ್ಲಿ ನಡೆಯುವ ಪೂರಕ ಪರೀಕ್ಷೆ ಸಂದರ್ಭದಲ್ಲಿ ಅವಕಾಶ ನೀಡಲಾಗುವುದು. ಅವರನ್ನು ಹೊಸ ವಿದ್ಯಾರ್ಥಿಗಳೆಂದು ಪರಿಗಣಿಸಲಾಗುವುದು ಎಂದರು.

Last Updated : Jun 9, 2020, 11:42 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.