ETV Bharat / state

ಕಾಂಗ್ರೆಸ್ ಸರ್ಕಾರ 'ಹನಿಮೂನ್ ಪಿರಿಯಡ್​'ನಿಂದ ಇನ್ನೂ ಹೊರ ಬಂದಿಲ್ಲ: ಬಿ.ವೈ ವಿಜಯೇಂದ್ರ

ಒಂದು ಕಡೆ ಬೆಲೆ ಏರಿಕೆ, ಇನ್ನೊಂದೆಡೆ ಕಾನೂನು ಸುವ್ಯವಸ್ಥೆ ಹದಗೆಡುತ್ತಿದೆ. ಅಧಿವೇಶನದಲ್ಲಿ ಇದ್ಯಾವುದೂ ಚರ್ಚೆ ಆಗುತ್ತಿಲ್ಲ. ಕೆಲಸಕ್ಕೆ ಬಾರದ ವಿಷಯಗಳು ಚರ್ಚೆ ಆಗುತ್ತಿವೆ-ಸರ್ಕಾರದ ವಿರುದ್ಧ ಶಾಸಕ ಬಿ ವೈ ವಿಜಯೇಂದ್ರ ವಾಗ್ದಾಳಿ.

MLA B Y Vijayendra
ಬಿ.ವೈ ವಿಜಯೇಂದ್ರ
author img

By

Published : Jul 15, 2023, 7:37 PM IST

ರಾಜ್ಯ ಸರ್ಕಾರದ ವಿರುದ್ಧ ಬಿ.ವೈ ವಿಜಯೇಂದ್ರ ವಾಗ್ದಾಳಿ

ಶಿವಮೊಗ್ಗ: ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ 'ಹನಿಮೂನ್ ಪಿರಿಯಡ್​'ನಿಂದ ಇನ್ನೂ ಹೊರ ಬಂದಿಲ್ಲ ಎಂದು ಬಿಜೆಪಿ ಶಾಸಕ ಬಿ. ವೈ ವಿಜಯೇಂದ್ರ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದರು. ಶಿಕಾರಿಪುರದಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಎರಡು ತಿಂಗಳು ಪೂರ್ಣವಾಗುತ್ತಿದೆ. ಅಧಿವೇಶನದಲ್ಲಿ ಕೇವಲ ಗ್ಯಾರಂಟಿ ಕಾರ್ಡ್ ಬಗ್ಗೆ ಚರ್ಚೆಯಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ನಿರ್ಮಾಣವಾಗಿರುವ ಬರಗಾಲದ ಬಗ್ಗೆ ಶೂನ್ಯ ವೇಳೆಯಲ್ಲಿ ಚರ್ಚೆ ಮಾಡಿದ್ದೇನೆ. 21 ಜಿಲ್ಲೆಗಳಲ್ಲಿ ಬರಗಾಲದ ವಾತಾವರಣ ಇದೆ. ಇದರಿಂದ ರಾಜ್ಯದ ರೈತರು ಕಂಗಾಲಾಗಿದ್ದಾರೆ. ಮಲೆನಾಡಿನಲ್ಲೂ ಕುಡಿಯುವ ನೀರಿಗೆ ಹಾಹಾಕಾರ ಎದ್ದಿದೆ. ರಾಜ್ಯದ ಯಾವ ಡ್ಯಾಂನಲ್ಲಿಯೂ ನೀರಿಲ್ಲ. ಕಲಬುರಗಿ ಭಾಗದಲ್ಲಿ ತೊಗರಿ, ಹೆಸರು ಬೆಳೆದ ರೈತರು ಕಂಗಾಲಾಗಿದ್ದಾರೆ. ಒಂದು ಕಡೆ ಬೆಲೆ ಏರಿಕೆ, ಇನ್ನೊಂದೆಡೆ ಕಾನೂನು ಸುವ್ಯವಸ್ಥೆ ಹದಗೆಡುತ್ತಿದೆ. ರಾಜ್ಯದ ಜನರು ಚರ್ಚೆ ಮಾಡುತ್ತಿದ್ದಾರೆ. ಅಧಿವೇಶನದಲ್ಲಿ ಇದ್ಯಾವುದೂ ಚರ್ಚೆ ಆಗುತ್ತಿಲ್ಲ. ಕೆಲಸಕ್ಕೆ ಬಾರದ ವಿಷಯಗಳು ಚರ್ಚೆ ಆಗುತ್ತಿವೆ ಎಂದು ದೂರಿದರು.

ದ್ವೇಷದ ರಾಜಕಾರಣ: ರಾಜ್ಯ ಸರ್ಕಾರ ಇದನ್ನು ಗಂಭೀರವಾಗಿ ತೆಗೆದುಕೊಳ್ಳಬೇಕು‌. ಈ ಬಗ್ಗೆ ಸದನದಲ್ಲಿ ಮಾತನಾಡುತ್ತೇನೆ. ರಾಜ್ಯ ಸರ್ಕಾರದಿಂದ ದ್ವೇಷದ ರಾಜಕಾರಣ ನಡೆಯುತ್ತಿದೆ. ಹಿಂದಿನ ಸರ್ಕಾರದಲ್ಲಿ ಹಗರಣಗಳು ನಡೆದಿದೆ ಎಂಬುವ ರೀತಿಯಲ್ಲಿ ಬಿಂಬಿಸಲಾಗುತ್ತಿದೆ. ಚುನಾವಣೆ ಸಂದರ್ಭದಲ್ಲಿ ಈ ಬಗ್ಗೆ ಮಾತನಾಡಿದ್ದರು. ಮುಗಿದ ನಂತರವೂ ಅದೇ ದಾಟಿಯಲ್ಲಿ ಮಾತನಾಡುತ್ತಿದ್ದಾರೆ. ನಮ್ಮ ಪಕ್ಷ ಇದರ ಬಗ್ಗೆ ಹೆದರಿಕೊಳ್ಳುವ ಪ್ರಶ್ನೆ ಉದ್ಭವಿಸುವುದಿಲ್ಲ ಎಂದರು.

ಭೂಮಿ ಹಿಂಪಡೆಯುವ ನಿರ್ಧಾರ ದುರಂತ: ರಾಷ್ಟ್ರೋತ್ಥಾನ ಪರಿಷತ್ ಅಡಿ ಜನಸೇವಾ ವಿದ್ಯಾ ಕೇಂದ್ರ ಕಳೆದ 30-40 ವರ್ಷಗಳಿಂದ ರಾಜ್ಯದ ಬಡ ವಿದ್ಯಾರ್ಥಿಗಳಿಗೆ ಶಿಕ್ಷಣ ಕೊಡುತ್ತಿದೆ. ಸಾವಿರಾರು ಮಕ್ಕಳಿಗೆ ಅನುಕೂಲ ಮಾಡಿಕೊಟ್ಟಿದೆ. ಶಿಕ್ಷಣದಲ್ಲಿ ವ್ಯಾಪಾರೀಕರಣದ ಚರ್ಚೆಯಾಗುತ್ತಿದೆ. ಆದರೆ ನಮ್ಮ ಜನ ಸೇವಾ ವಿದ್ಯಾ ಕೇಂದ್ರದಲ್ಲಿ ಸಾವಿರಾರು ಬಡ ಮಕ್ಕಳು ಶಿಕ್ಷಣ ಪಡೆದಿದ್ದಾರೆ‌. ಅವರು ಸಮಾಜದಲ್ಲಿ ಉನ್ನತ ಸ್ಥಾನಕ್ಕೆ ಏರಿದ್ದಾರೆ. ಹೊಸ ಸರ್ಕಾರ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೊಟ್ಟ 35 ಎಕರೆ ಭೂಮಿ ಹಿಂಪಡೆಯುವ ಬಗ್ಗೆ ನಿರ್ಧಾರ ಮಾಡಿರುವುದು ದುರಂತ. ಶಿಕ್ಷಣದ ಕ್ಷೇತ್ರದ ಮೇಲೂ ಈ ಸರ್ಕಾರ ವಕ್ರ ದೃಷ್ಟಿ ಬೀರಿದೆ. ಇದು ಸಚಿವರಿಗೆ, ಸಿಎಂ ಅವರಿಗೆ ಶೋಭೆ ತರ ತಕ್ಕಂಥದ್ದಲ್ಲ. ವಿನಾಕಾರಣ ರಾಜಕಾರಣ ಮಾಡಬಾರದು. ಗುಣಮಟ್ಟದ ಶಿಕ್ಷಣವನ್ನು ಕೊಡುವಂತಹ ಶಿಕ್ಷಣ ಕೇಂದ್ರಕ್ಕೆ ಕೊಟ್ಟ ಭೂಮಿಯನ್ನು ಹಿಂಪಡೆಯಬಾರದು. ಯಾರ್ಯಾರಿಗೆ ಭೂಮಿ ಕೊಟ್ಟಿದ್ದಾರೆ ಎಂಬ ಬಗ್ಗೆ ಸದನದಲ್ಲಿ ಚರ್ಚೆ ಮಾಡಲಿ ಎಂದರು.

ಭೂಮಿಯನ್ನು ಪಡೆದ ಶಿಕ್ಷಣ ಸಂಸ್ಥೆಗಳು ಯಾವ ರೀತಿ ಉಪಯೋಗಿಸುತ್ತಿದ್ದಾರೆ ಎಂಬ ಬಗ್ಗೆ ಚರ್ಚೆಯಾಗಲಿ. ನ್ಯಾಯಯುತವಾಗಿ ಕೊಟ್ಟಂತಹ ಜಮೀನಿಗೂ ಕನ್ನ ಹಾಕುತ್ತಿದ್ದಾರೆ. ಮೂಗು ತೂರಿಸುತ್ತಿದ್ದಾರೆ. ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ಇದನ್ನು ದೇವರು ಮೆಚ್ಚುವುದಿಲ್ಲ. ಕಳೆದ 30 ವರ್ಷದಲ್ಲಿ ಯಾವ್ಯಾವ ಸರ್ಕಾರ ಯಾರ್ಯಾರಿಗೆ ಭೂಮಿ ಕೊಟ್ಟಿದೆ?, ಪರಭಾರೆ ಮಾಡಿದೆ?, ಆ ಬಗ್ಗೆ ಚರ್ಚೆಯಾಗಲಿ ಎಂದು ಅವರು ಆಗ್ರಹಿಸಿದರು.

ವಿಪಕ್ಷ ನಾಯಕನ ಆಯ್ಕೆ ವಿಚಾರ: ಶಾಸಕನಾಗಿ ನಮ್ಮ ತಾಲೂಕಿನ ಜನ ನನ್ನನ್ನು ಆಯ್ಕೆ ಮಾಡಿದ್ದಾರೆ. ಯಶಸ್ವಿ ಶಾಸಕನಾಗಿ ಕೆಲಸ ಮಾಡಬೇಕು ಎಂದುಕೊಂಡಿದ್ದೇನೆ ಎಂದು ಪರೋಕ್ಷವಾಗಿ ತಾವು ವಿರೋಧ ಪಕ್ಷದ ನಾಯಕ ಸ್ಥಾನದ ಆಕಾಂಕ್ಷಿ ಅಲ್ಲ ಎಂದು ಹೇಳಿದರು.

ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸುತ್ತಾ"ಸಚಿವರ ಹೇಳಿಕೆ ದುರಹಂಕಾರದ ಪರಮಾವಧಿಯಾಗಿದೆ. 136 ಸೀಟು ಬಂದಿದೆ ಅಂತ ಆನೆ ನಡೆದಿದ್ದೇ ದಾರಿ ಎಂಬಂತೆ ಸಚಿವರು, ಶಾಸಕರು ವರ್ತಿಸುತ್ತಿದ್ದಾರೆ. ಅದು ನಮ್ಮ ದುರಾದೃಷ್ಟ. ಇದಕ್ಕೆ ಉತ್ತರ ಸದನದ ಒಳಗೆ, ಕೊಡುತ್ತೇವೆ. ಯಾವುದೂ ಶಾಶ್ವತ ಅಲ್ಲ. ಈ ರೀತಿಯ ದೌರ್ಜನ್ಯ, ದಬ್ಬಾಳಿಕೆ ಮೆಟ್ಟಿ ನಿಲ್ಲುವಂತಹ ಶಕ್ತಿ ಬಿಜೆಪಿಗೆ ಇದೆ. ನಾವು ಅಧಿಕಾರಕ್ಕೆ ಬಂದಿಲ್ಲ ನಿಜ. ನಮ್ಮನ್ನು ರಾಜ್ಯದ ಜನ ಅಧಿಕೃತ ವಿಪಕ್ಷ ಸ್ಥಾನಕ್ಕೆ ಕೂರಿಸಿದ್ದಾರೆ. ಹಾಗಂತ ಮನಸೋ ಇಚ್ಚೆ ಆಡಳಿತ ನಡೆಸಬಾರದು ಎಂದು ವಿಜಯೇಂದ್ರ ಎಚ್ಚರಿಕೆ ನೀಡಿದರು.

ಇದನ್ನೂ ಓದಿ: ಜನಸೇವಾ ಟ್ರಸ್ಟ್​​ಗೆ ಕೊಟ್ಟಿದ್ದ ಭೂಮಿಗೆ ತಡೆ ನೀಡಿದ್ದು ಸೇಡಿನ ರಾಜಕಾರಣ: ಮಾಜಿ ಸಿಎಂ ಬೊಮ್ಮಾಯಿ ಕಿಡಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.