ETV Bharat / state

ಸಚಿವ ಡಿ ಸುಧಾಕರ್ ರಾಜೀನಾಮೆ ಒತ್ತಾಯ : ಕಾನೂನು ಕ್ರಮಕ್ಕೆ ಬಿ ವೈ ವಿಜಯೇಂದ್ರ ಆಗ್ರಹ - BJP protest for resignation of D Sudhakar

ಸಚಿವ ಡಿ ಸುಧಾಕರ್ ಅವರು ಕೂಡಲೇ ರಾಜೀನಾಮೆ ನೀಡಬೇಕು. ಸಚಿವರ ವಿರುದ್ಧ ಸರ್ಕಾರ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಬಿ ವೈ ವಿಜಯೇಂದ್ರ ಒತ್ತಾಯಿಸಿದ್ದಾರೆ.

mla-by-vijayendra-urges-to-resignation-of-minister-d-sudhkar
ಸಚಿವ ಡಿ ಸುಧಾಕರ್ ರಾಜೀನಾಮೆ ಒತ್ತಾಯ : ಕಾನೂನು ಕ್ರಮಕ್ಕೆ ಬಿ ವೈ ವಿಜಯೇಂದ್ರ ಆಗ್ರಹ
author img

By ETV Bharat Karnataka Team

Published : Sep 13, 2023, 7:49 PM IST

ಸಚಿವ ಡಿ ಸುಧಾಕರ್ ರಾಜೀನಾಮೆ ಒತ್ತಾಯ : ಕಾನೂನು ಕ್ರಮಕ್ಕೆ ಬಿ ವೈ ವಿಜಯೇಂದ್ರ ಆಗ್ರಹ

ಶಿವಮೊಗ್ಗ: ರಾಜ್ಯ ಸರ್ಕಾರವು ಸಚಿವ ಡಿ ಸುಧಾಕರ್ ಅವರ ರಾಜೀನಾಮೆ ಪಡೆದು ಕಾನೂನು ಕ್ರಮವನ್ನು ಜರುಗಿಸಬೇಕೆಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಹಾಗೂ ಶಾಸಕ ಬಿ ವೈ ವಿಜಯೇಂದ್ರ ಆಗ್ರಹಿಸಿದ್ದಾರೆ. ಶಿಕಾರಿಪುರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಧಾಕರ್ ಅವರು ಜವಾಬ್ದಾರಿಯುತ ಮಂತ್ರಿಯಾಗಿದ್ದಾರೆ. ನನಗೆ ಸುಧಾಕರ್ ಸೇರಿದಂತೆ ಯಾವುದೇ ಮಂತ್ರಿಗಳ ಬಗ್ಗೆ ವೈಯಕ್ತಿಕ ದ್ವೇಷ ಇಲ್ಲ. ಗೌರವಾನ್ವಿತ ಸ್ಥಾನದಲ್ಲಿರುವ ಸುಧಾಕರ್ ದಲಿತ ಸಮಾಜದ ಬಗ್ಗೆ ಅಪಮಾನಕರವಾಗಿ ಮಾತನಾಡಿದ್ದಾರೆ. ಸುಧಾಕರ್ ಅವರ ಮಾತುಗಳು ಅವರಿಗೆ ಶೋಭೆ ತರುತ್ತದೆಯೇ ಎಂದು ಪ್ರಶ್ನಿಸಿದರು.

ಸಚಿವ ಸುಧಾಕರ್​ ವಿರುದ್ಧ ಎಫ್​ಐಆರ್ ದಾಖಲಾಗಿದ್ದರೂ ಡಿಸಿಎಂ ಡಿ.ಕೆ ಶಿವಕುಮಾರ್ ಸಮರ್ಥನೆ ಮಾಡಿ, ಕ್ಲೀನ್ ಚಿಟ್ ಕೊಡುತ್ತಿರುವುದು ಎಷ್ಟು ಸರಿ. ಕಾಂಗ್ರೆಸ್​ನವರು ದಲಿತರ ಬಗ್ಗೆ ಒಂದು ಕಡೆ ಮೊಸಳೆ ಕಣ್ಣೀರು ಹಾಕುತ್ತಾರೆ. ದಲಿತರ ಮತ ಪಡೆಯಲು ಎಲ್ಲಾ ನಾಟಕ ಮಾಡುತ್ತಾರೆ. ಈಗ ಡಿ.ಸುಧಾಕರ್ ಅವರಿಂದ ಕಾಂಗ್ರೆಸ್​ನವರ ನಿಜಬಣ್ಣ ದಲಿತರು ಸೇರಿದಂತೆ ರಾಜ್ಯದ ಜನರಿಗೆ ಗೊತ್ತಾಗಿದೆ. ಎಫ್​ಐಆರ್ ದಾಖಲಾದರೂ ಡಿಸಿಎಂ ಸಚಿವರ ಪರ ಮಾತನಾಡಿರುವುದು ದಲಿತರಿಗೆ ಮಾಡೋ ಅಪಮಾನ ಎಂದು ಕಿಡಿಕಾರಿದರು.

ಚೈತ್ರಾ ಕುಂದಾಪುರ ಬಂಧನ ವಿಚಾರವಾಗಿ ಮಾತನಾಡಿ, ಚೈತ್ರಾ ಕುಂದಾಪುರ ವಿರುದ್ಧ ಎಫ್​ಐಆರ್ ದಾಖಲಾಗಿದೆ. ಸದ್ಯ ಪೊಲೀಸರು ಅವರನ್ನು ಬಂಧಿಸಿದ್ದಾರೆ. ಅವರ ವಿರುದ್ಧ ಕಾನೂನು ರೀತಿ ಕ್ರಮ ತೆಗೆದುಕೊಳ್ಳಲಿ. ಇದಕ್ಕೆ ನಮ್ಮದೇನು ಅಭ್ಯಂತರವಿಲ್ಲ ಎಂದು ಶಾಸಕ ವಿಜಯೇಂದ್ರ ಸ್ಪಷ್ಟಪಡಿಸಿದರು.

ಕಾವೇರಿ ನೀರು ವಿಚಾರವಾಗಿ ವಾಗ್ದಾಳಿ ನಡೆಸಿದ ವಿಜಯೇಂದ್ರ, ಕಾವೇರಿ ವಿಚಾರದಲ್ಲಿ ರಾಜ್ಯ ಸರ್ಕಾರ ಚೆಲ್ಲಾಟ ಆಡುತ್ತಿದೆ. ಸರ್ಕಾರದಿಂದ ಮಾಡಬೇಕಾದ ಕೆಲಸವನ್ನು ರೈತ ಸಂಘ ಮಾಡುತ್ತಿದೆ. ಇಂದು ರೈತಸಂಘ ಸುಪ್ರೀಂ ಕೋರ್ಟ್​ಗೆ ಅರ್ಜಿ ಸಲ್ಲಿಸಿದೆ. ಸರ್ಕಾರದ ಬಗ್ಗೆ ರೈತರು ವಿಶ್ವಾಸ ಕಳೆದುಕೊಂಡಿದ್ದಾರೆ. ಕಾವೇರಿ ವಿಚಾರದಲ್ಲೂ ರೈತರು ವಿಶ್ವಾಸ ಕಳೆದುಕೊಂಡಿದ್ದಾರೆ ಎಂದು ಹೇಳಿದರು.

ರಾಜ್ಯದಲ್ಲಿ ಬರದ ಪರಿಸ್ಥಿತಿ ಬಗ್ಗೆ ಪ್ರತಿಕ್ರಿಯಿಸಿ, ರಾಜ್ಯದ ಹಲವು ಜಿಲ್ಲೆಗಳಲ್ಲಿ ಬರದ ಪರಿಸ್ಥಿತಿ ಇದೆ. ರೈತರು ಸಂಕಷ್ಟದಲ್ಲಿ ಇದ್ದಾರೆ. ರೈತರ ಕಷ್ಟಕ್ಕೆ ಸ್ಪಂದಿಸಬೇಕಾದ ಸರ್ಕಾರದ ಸಚಿವರು ಬೇಜವಾಬ್ದಾರಿ ಹೇಳಿಕೆ ನೀಡುತ್ತಿದ್ದಾರೆ. ಇದರಿಂದಲೇ ರೈತರ ಆತ್ಮವಿಶ್ವಾಸ ಕುಸಿಯುತ್ತಿದೆ. ಕಂದಾಯ ಸಚಿವರು ವಾರದಲ್ಲೇ ಬರ ಘೋಷಣೆ ಮಾಡುತ್ತೇವೆ ಎನ್ನುತ್ತಿದ್ದರು. ಆದರೆ, ಈವರೆಗೆ ಬರ ಘೋಷಣೆ ಮಾಡಿಲ್ಲ ಎಂದರು.

ಪರಿಹಾರಕ್ಕೆ ರೈತರು ಆತ್ಮಹತ್ಯೆ ಮಾಡಿಕೊಳ್ತಾರೆ ಎಂದು ಸಚಿವರೇ ಹೇಳುತ್ತಿದ್ದಾರೆ. ಬಾಯ್ತಪ್ಪಿನಿಂದಲೂ ಸಹ ಸಚಿವರು ಈ ರೀತಿ ಹೇಳಿಕೆ ಕೊಡಬಾರದು. ಮಳೆ ಇಲ್ಲದೆ ರೈತರು ಆಕಾಶ ನೋಡ್ತಿದ್ದಾರೆ. ಮಳೆ ಇಲ್ಲ, ಬಿತ್ತಿದ ಬೆಳೆ ನಾಶವಾಗಿದೆ. ಸರ್ಕಾರ ಹಾಗೂ ಸಚಿವರ ಹೇಳಿಕೆ ರೈತರನ್ನು ಆತಂಕಕ್ಕೆ ದೂಡಿದೆ. ಬರ ಪೀಡಿತ ಪ್ರದೇಶ ಎಂದು ಘೋಷಣೆಗೆ ಸರ್ಕಾರ ಮೀನಾಮೇಷ ಎಣಿಸುತ್ತಿದೆ. ರೈತರು ಬರ ಘೋಷಣೆಗೆ ಕಾಯುತ್ತಿದ್ದಾರೆ ಎಂದರು.

ಸುಧಾಕರ್ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಪ್ರತಿಭಟನೆ : ಜಾತಿ ನಿಂದನೆ ಹಾಗೂ ದಲಿತ ದೌರ್ಜನ್ಯ ಪ್ರಕರಣ ಆರೋಪ ಸಂಬಂಧ ಯೋಜನೆ ಮತ್ತು ಸಾಂಖ್ಯಿಕ ಖಾತೆ ಸಚಿವ ಡಿ‌‌.ಸುಧಾಕರ್ ಕೂಡಲೇ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಜಿಲ್ಲಾ ಬಿಜೆಪಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿತು. ಮುಖ್ಯಮಂತ್ರಿಗಳು ಸಚಿವ ಸುಧಾಕರ ಅವರನ್ನು ಕೂಡಲೇ ಸಚಿವ ಸಂಪುಟದಿಂದ ಕೈಬಿಡಬೇಕು ಹಾಗೂ ಪೊಲೀಸರು ಅವರನ್ನು ಬಂಧಿಸಬೇಕು ಎಂದು ಆಗ್ರಹಿಸಿದರು.

ಈ ವೇಳೆ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ ಮೇಘರಾಜ್, ಬೇಲಿಯೇ ಎದ್ದು ಹೊಲ ಮೇಯ್ದಂತೆ ರಾಜ್ಯದಲ್ಲಿ ಆಡಳಿತ ನಡೆಯುತ್ತಿದೆ. ಸರ್ಕಾರ ರಾಜ್ಯದ ಹಿತವನ್ನು ಪರಿಗಣಿಸಿ ಆಡಳಿತವನ್ನು ನಡೆಸುತ್ತಿಲ್ಲ. ರಾಜ್ಯದ ದುರ್ಬಲ, ಶೋಷಿತ ವರ್ಗಗಳ ಮೇಲೆ ದೌರ್ಜನ್ಯವನ್ನು ಸರ್ಕಾರದ ಮಂತ್ರಿಯೊಬ್ಬರು ಮಾಡಿದ್ದಾರೆ. ಕೂಡಲೇ ಸರ್ಕಾರ ಅವರ ರಾಜೀನಾಮೆ ಪಡೆಯಬೇಕು ಎಂದು ಆಗ್ರಹಿಸಿದರು.

ಇನ್ನು ರೈತರು ಹಣಕ್ಕಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ ಎಂದು ಸಚಿವರೊಬ್ಬರು ದುರಹಂಕಾರದ ಹೇಳಿಕೆ ನೀಡಿದ್ದಾರೆ. ಇದನ್ನು ಎಲ್ಲರೂ ಖಂಡಿಸಬೇಕು. ಕಾವೇರಿ ನೀರಿನ ವಿಚಾರದಲ್ಲಿಯೂ ಈ ಸರ್ಕಾರ ರಾಜ್ಯಕ್ಕೆ ವಂಚನೆ ಮಾಡಿದೆ ಎಂದು ಆರೋಪಿಸಿದರು. ಪ್ರತಿಭಟನೆಯಲ್ಲಿ ರತ್ನಾಕರ್ ಶೆಣೈ, ಜಗದೀಶ್ ಸೇರಿದಂತೆ ಮತ್ತಿತರರು ಪಾಲ್ಗೊಂಡಿದ್ದರು.

ಇದನ್ನೂ ಓದಿ : ಗಂಗಾ ಕಲ್ಯಾಣ: ಬಾಕಿ ಇರುವ ಅರ್ಜಿಗಳನ್ನು ಎರಡು ತಿಂಗಳಲ್ಲಿ ಪೂರ್ಣಗೊಳಿಸಿ: ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.