ಶಿವಮೊಗ್ಗ: ಸೊರಬ ಶಾಸಕ ಕುಮಾರ ಬಂಗಾರಪ್ಪ ಅವರು ಇಂದು ತಮ್ಮ ವಿಧಾನಸಭಾ ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ವೀಕ್ಷಿಸಿದರು.

ಸೊರಬ ವಿಧಾನಸಭೆ ಕ್ಷೇತ್ರದ ತಾಳಗುಪ್ಪ ಹೋಬಳಿಯ ಕುಗ್ವೆ ಹಾಗೂ ಬರದವಳ್ಳಿ ಗ್ರಾಮದಿಂದ ಜನ್ನೆಹಕ್ಲು ಗ್ರಾಮಕ್ಕೆ ಸಂಪರ್ಕಿಸುವ ರಸ್ತೆಯ ಮರು ಡಾಂಬರೀಕರಣ ಕಾಮಗಾರಿ ಹಾಗೂ ಖಂಡಿಕದಿಂದ ಗೀಜಗಾರು ಗ್ರಾಮದವರೆಗೆ ನಡೆಯುತ್ತಿರುವ ಮುಖ್ಯ ರಸ್ತೆಯ ಕಾಮಗಾರಿಗಳನ್ನ ವೀಕ್ಷಿಸಿದ್ರು.
ಈ ವೇಳೆ ಜಿಲ್ಲಾ ಪಂಚಾಯತ್ ಸದಸ್ಯರು, ತಾ.ಪಂ. ಸದಸ್ಯರು ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು.