ETV Bharat / state

ಎಂಎಲ್​ಸಿ ಡಿ.ಎಸ್.ಅರುಣ್​​ಗೆ ಜೀವ ಬೆದರಿಕೆ: ದೂರು ದಾಖಲು

ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣದ ಸಂಬಂಧ ನೀಡಿದ್ದ ಹೇಳಿಕೆ ಹಿನ್ನೆಲೆ ವಿಧಾನ ಪರಿಷತ್ ಸದಸ್ಯ ಡಿ.ಎಸ್. ಅರುಣ್‌ಗೆ ಜೀವ ಬೆದರಿಕೆ ಹಾಕಲಾಗಿದೆ. ಈ ಸಂಬಂಧ ಪ್ರಕರಣ ದಾಖಲಾಗಿದೆ.

MLC  DS Arun
ಎಂಎಲ್​ಸಿ ಡಿ.ಎಸ್.ಅರುಣ್
author img

By

Published : Mar 9, 2022, 12:56 PM IST

ಶಿವಮೊಗ್ಗ: ನೂತನ ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್ ಅವರಿಗೆ ಜೀವ ಬೆದರಿಕೆ ಹಾಕಲಾಗಿದೆ. ಅರುಣ್ ವಿಧಾನ ಪರಿಷತ್​​ನ ಮಾಜಿ ಸಭಾಪತಿ ಡಿ.ಎಸ್. ಶಂಕರಮೂರ್ತಿ ಅವರ ಮಗ. ಇವರಿಗೆ ಮುಸ್ತಾಕ್ ಅಲಿ ಎಂಬಾತ ಸಾಮಾಜಿಕ ಜಾಲತಾಣದಲ್ಲಿ ಬೆದರಿಕೆ ಸಂದೇಶವನ್ನು ಪ್ರಕಟಿಸಿದ್ದಾನೆ ಎಂದು ಆರೋಪಿಸಲಾಗಿದೆ.

ಶಿವಮೊಗ್ಗದಲ್ಲಿ ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ ಸಂಬಂಧ ಅರುಣ್ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದು, ಇದು ಅನ್ಯಕೋಮಿನವರ ಕೃತ್ಯ ಎಂದು ತಿಳಿಸಿದ್ದರು. "ನಿನ್ನೆ ಕೊಲೆಯಾದ ವ್ಯಕ್ತಿಯು ನಿಮ್ಮ ತಲೆಯಲ್ಲಿ ಒಬ್ಬ ಹಿಂದೂ ಕಾರ್ಯಕರ್ತ ಸತ್ತಿದ್ದಾನೆ ಅಷ್ಟೆ. ಆದರೆ, ಮುಂದಿನ ದಿನ ನಿಮ್ಮ ಹೆಂಡತಿ ಮಕ್ಕಳೇ ನಮ್ಮ ಟಾರ್ಗೆಟ್ ನೆನಪಿಡಿ. ಷಂಡ ಸರ್ಕಾರದ ಭಂಡರಂತೆ ವರ್ತಿಸುವ ಪ್ರಚಂಡರೇ," ಎಂದು ಎಂದು ಪೋಸ್ಟ್ ಮಾಡಿದ್ದರು.

ಈ ಬಗ್ಗೆ ಅರುಣ್ ಅವರ ಆಪ್ತ ಸಹಾಯಕ ವಾಗೀಶ್ ಎಸ್​ಪಿಗೆ ದೂರು ನೀಡಿದ್ದರು. ಈ ದೂರನ್ನು ಎಸ್​ಪಿ ಸಿಇಎನ್ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಿದ್ದಾರೆ.

ಇದನ್ನೂ ಓದಿ: ಗುಪ್ತಚರ ಇಲಾಖೆ ನಿವೃತ್ತ ಅಧಿಕಾರಿಯಿಂದ ಅಪ್ರಾಪ್ತೆ ಮೇಲೆ ರೇಪ್​.. ಪ್ರಕರಣ ದಾಖಲು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.