ಶಿವಮೊಗ್ಗ: ಕೇಂದ್ರದಲ್ಲಿ ಮತ್ತೊಮ್ಮೆ ಮೋದಿ ನೇತೃತ್ವದ ಸರ್ಕಾರ ಆಡಳಿತಕ್ಕೆ ಬರುತ್ತದೆ . ಹಾಗೇ ರಾಜ್ಯದಲ್ಲಿ ಯಡಿಯೂರಪ್ಪ ನವರು ಮತ್ತೊಮ್ಮೆ ಮುಖ್ಯಮಂತ್ರಿಯಾಗುತ್ತಾರೆ ಎಂದು ಬೈಂದೂರು ಶಾಸಕ ಸುಕುಮಾರ್ ಶೆಟ್ಟಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಸುಕುಮಾರ್ ಶೆಟ್ಟಿ ಈಗಾಗಲೇ ರಾಘವೇಂದ್ರ ಅವರು ಭಾರಿ ಬಹುಮತಗಳ ಅಂತರದಲ್ಲಿ ಮುನ್ನಡೆ ಸಾಧಿಸುತ್ತಿದ್ದಾರೆ. ಅದರಲ್ಲಿ ಬೈಂದೂರು ಕ್ಷೇತ್ರದಲ್ಲಿಯೇ ಅತಿ ಹೆಚ್ಚು ಬಹುಮತ ನೀಡಿರುವುದು ಸಂಸತ ತಂದಿದೆ. ಹಾಗಾಗಿ ಕೇಂದ್ರದಲ್ಲಿ ಮೋದಿ ಮತ್ತೊಮ್ಮೆ ಪ್ರಧಾನಿ ಆಗುತ್ತಾರೆ. ಹಾಗೆ ರಾಜ್ಯದಲ್ಲಿ ಬಿ.ಎಸ್ ಯಡಿಯೂರಪ್ಪನವರು ಮುಖ್ಯಮಂತ್ರಿಗಳಾಗುತ್ತಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.