ಶಿವಮೊಗ್ಗ: ಮೂರು ದಿನಗಳ ಕಾಲ ಶಿವಮೊಗ್ಗ ಜಿಲ್ಲಾ ಟೂರ್‌ನಲ್ಲಿರುವ ರಾಷ್ಟ್ರೀಯ ಸ್ವಯಂ ಸೇವಕ ಸಂಘದ(ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ಮೊದಲ ದಿನವಾದ ಇಂದು ಆರ್‌ಎಸ್‌ಎಸ್ ದಕ್ಷಿಣ ಪ್ರಾಂತ್ಯ ಪ್ರಮುಖರೊಂದಿಗೆ ಸಭೆ ನಡೆಸಿದ ಬಳಿಕ ಅನಾರೋಗ್ಯದಿಂದ ಮೃತಪಟ್ಟ ಆರ್‌ಎಸ್‌ಎಸ್ ಪ್ರಮುಖ ದಿನೇಶ್ ಪೈ ಅವರ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ಬಳಿಕ ನಗರದ ಕೋಟೆ ಆಂಜನೇಯ ದೇವಾಲಯಕ್ಕೆ ಭೇಟಿ ನೀಡಿದರು. ಈ ವೇಳೆ ದೇವಾಲಯದ ಅರ್ಚಕರು ಪೂರ್ಣಕುಂಭ ಸ್ವಾಗತ ಕೋರಿದರು. ನಂತರ ಭಾಗವತ್ ಅವರು ಶ್ರೀರಾಮ ಹಾಗೂ ಆಂಜನೇಯನ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.
ಇದನ್ನೂ ಓದಿ: ಹಳೆ ಮೈಸೂರು ಭಾಗದಲ್ಲಿ ಬಿಜೆಪಿ ಬೆಂಬಲಿಸುವಂತೆ ಅಮಿತ್ ಶಾ ಕರೆ