ETV Bharat / state

ಶಿವಮೊಗ್ಗ: ಎದೆ ಹಾಲು ಇಲ್ಲವೆಂದು ಬೇಸರ.. ಮಗು ಜತೆ ತಾಯಿ ಆತ್ಮಹತ್ಯೆ - ಆತ್ಮಹತ್ಯೆ

ಎದೆ ಹಾಲು ಇಲ್ಲದೆ ಮಗು ಸೊರಗುತ್ತಿದೆ ಎಂಬ ಕಾರಣಕ್ಕೆ ಮನನೊಂದಿದ್ದ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ತಾಲೂಕಿನಲ್ಲಿ ನಡೆದಿದೆ.

representative image
ಪ್ರಾತಿನಿಧಿಕ ಚಿತ್ರ
author img

By

Published : Apr 10, 2023, 12:14 PM IST

Updated : Apr 10, 2023, 1:19 PM IST

ಶಿವಮೊಗ್ಗ: ತಾಯಿಯೊಬ್ಬರು ಮಗುವಿನೊಂದಿಗೆ ಆತ್ಮಹತ್ಯೆಗೆ ಶರಣಾಗಿರುವ ಹೃದಯವಿದ್ರಾವಕ ಘಟನೆ ತಾಲೂಕಿನ ಕುಪ್ಪಗಡ್ಡೆ ಗ್ರಾಮದಲ್ಲಿ ಭಾನುವಾರ ತಡರಾತ್ರಿ ನಡೆದಿದೆ. ಮೃತರನ್ನು ಕುಪ್ಪಗಡ್ಡೆ ಗ್ರಾಮದ ಶಾಂತಾ (28) ಹಾಗೂ ಒಂದೂವರೆ ತಿಂಗಳ ಮಗು ಎಂದು ಗುರುತಿಸಲಾಗಿದೆ.

ಶಾಂತ ಅವರನ್ನು ಸಮೀಪದ ಜಡ್ಡೆಹಳ್ಳಿ ಗ್ರಾಮಕ್ಕೆ ವಿವಾಹ ಮಾಡಿಕೊಡಲಾಗಿತ್ತು. ಹೆರಿಗೆಗೆ ಎಂದು ತವರು ಮನೆ ಕುಪ್ಪಗಡ್ಡೆಗೆ ಬಂದಿದ್ದು, ಇತ್ತೀಚೆಗೆ ಮಗುವಿಗೆ ಜನ್ಮ ನೀಡಿದ್ದರು. ಆದರೆ ಮಗುವಿಗೆ ಎದೆ ಹಾಲು ಕಡಿಮೆಯಾಗಿತ್ತು. ತಾಯಿ ಹಾಲು ಇಲ್ಲದೆ ಮಗು ಸೊರಗುತ್ತಿದೆ. ಇದರಿಂದ ತನ್ನ ಮಗು ಸರಿಯಾಗಿ ಬೆಳವಣಿಗೆ ಆಗುತ್ತಿಲ್ಲ ಎಂದು ಮಾನಸಿಕವಾಗಿ ನೊಂದಿದ್ದರು. ಹಾಗಾಗಿ ಒಂದೂವರೆ ತಿಂಗಳ ಮಗು ಸಮೇತ ಗ್ರಾಮದ ತುಂಬೆಹೊಂಡಕ್ಕೆ ಬಿದ್ದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ದೂರು ದಾಖಲಾಗಿದೆ.

ಮಗು ಹೊಂಡದಲ್ಲಿ ತೇಲುವುದನ್ನು ಸ್ಥಳೀಯರು ಗಮನಿಸಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಠಾಣೆ ಸಿಬ್ಬಂದಿ ಶೋಧಕಾರ್ಯ ನಡೆಸಿ ಮಹಿಳೆ ಹಾಗೂ ಮಗುವನ್ನು ಹೊಂಡದಿಂದ ಮೇಲೆತ್ತಿದ್ದಾರೆ. ಈ ಸಂಬಂಧ ಆನವಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರೈಲು ನಿಲ್ದಾಣದಲ್ಲಿ ವ್ಯಕ್ತಿ ಆತ್ಮಹತ್ಯೆ: ಶಿವಮೊಗ್ಗ ರೈಲು ನಿಲ್ದಾಣದಲ್ಲಿ ಅಪರಿಚಿತ ವ್ಯಕ್ತಿಯೋರ್ವ ಆತ್ಮಹತ್ಯೆಗೆ ಶರಣಾಗಿದ ಘಟನೆ ಇತ್ತೀಚೆಗೆ ನಡೆದಿತ್ತು. ಶಿವಮೊಗ್ಗದಿಂದ ಚಿಕ್ಕಮಗಳೂರಿಗೆ ರೈಲು ಹೊರಟ ಬಳಿಕ ಕೊನೆಯ ಪ್ಲಾಟ್ ಫಾರಂನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದರು. ಪ್ಲಾಟ್ ಫಾರಂನ‌ ಮೇಲ್ಛಾವಣಿಗೆ ನೇಣು ಹಾಕಿಕೊಂಡಿದ್ದು, ಈ ಭಾಗದಲ್ಲಿ ಕೆಲಸ ಮಾಡುವವರು ಶವವನ್ನು ನೋಡಿ ರೈಲ್ವೆ ಪೊಲೀಸರಿಗೆ ವಿಷಯ ತಿಳಿಸಿದ್ದರು. ಸ್ಥಳಕ್ಕೆ ಆಗಮಿಸಿದ ಪೊಲೀಸರು ಸ್ಥಳ ಮಹಜರು ಮಾಡಿ ಶವವನ್ನು ಕೆಳಗೆ ಇಳಿಸಿ, ಮೆಗ್ಗಾನ್ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಿದ್ದರು. ಮೃತ ವ್ಯಕ್ತಿಯನ್ನು ಸುಮಾರು 30 ವರ್ಷ ವಯಸ್ಸಿನ ಯುವಕ ಎಂದು ಅಂದಾಜಿಸಲಾಗಿದೆ. ಈತ‌ ಯಾರು, ಯಾವ ಕಾರಣಕ್ಕೆ ಆತ್ಮಹತ್ಯೆಗೆ ಶರಣಾದರು ಎಂಬ ಬಗ್ಗೆ ಮಾಹಿತಿ ಇನ್ನೂ ಲಭ್ಯವಾಗಿಲ್ಲ.

ಇದನ್ನೂ ಓದಿ: ಶಿವಮೊಗ್ಗ ರೈಲು ನಿಲ್ದಾಣದಲ್ಲಿ ವ್ಯಕ್ತಿ ಆತ್ಮಹತ್ಯೆ

ಆತ್ಮಹತ್ಯೆಗೆ ಶರಣಾದ ದಂಪತಿ: ಕೌಟುಂಬಿಕ ಕಲಹದ ಕಾರಣಕ್ಕಾಗಿ ಗಂಡ- ಹೆಂಡತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪೀಣ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಚೊಕ್ಕಸಂದ್ರದ ಮನೆಯೊಂದರಲ್ಲಿ ಇತ್ತೀಚೆಗೆ ನಡೆದಿತ್ತು. ತುಮಕೂರು ಮೂಲದ ಜಗದೀಶ್(37), ನಂದಿನಿ (40) ಆತ್ಮಹತ್ಯೆಗೆ ಶರಣಾದ ದಂಪತಿ. ಸ್ಥಳಕ್ಕೆ ಪೀಣ್ಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಮೃತದೇಹಗಳನ್ನು ವಿಕ್ಟೋರಿಯ ಆಸ್ಪತ್ರೆಗೆ ದಾಖಲಿಸಿ ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ದಂಪತಿ ಮೂಲತಃ ತುಮಕೂರಿನವರಾಗಿದ್ದು ಮೂರು ವರ್ಷದ ಹಿಂದೆ ವಿವಾಹವಾಗಿದ್ದರು. ಪೀಣ್ಯದ ಚೊಕ್ಕಸಂದ್ರದ ಮನೆಯೊಂದರಲ್ಲಿ ವಾಸವಾಗಿದ್ದರು. ಜಗದೀಶ ಚಾಲಕನಾಗಿ ಕೆಲಸ ಮಾಡಿಕೊಂಡಿದ್ದರು. ನಂದಿನಿ ಗಾರ್ಮೆಂಟ್ಸ್ ಕೆಲಸ ಮಾಡುತ್ತಿದ್ದರು. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದರು. ಘಟನೆ ಸಂಬಂದ ಪೀಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಕೌಟುಂಬಿಕ ಕಲಹ: ಆತ್ಮಹತ್ಯೆಗೆ ಶರಣಾದ ದಂಪತಿ

Last Updated : Apr 10, 2023, 1:19 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.