ಶಿವಮೊಗ್ಗ : ಭದ್ರಾವತಿಯ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಯನ್ನು ಪುನರುಜ್ಜೀವನಗೊಳಿಸಿ ದುಡಿಯುವ ಕೈಗಳಿಗೆ ಕೆಲಸ ನೀಡುವಂತೆ ಸಂಸದ ಬಿ.ವೈ ರಾಘವೇಂದ್ರ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತರಾಮನ್ ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ.
ಭದ್ರಾವತಿಯ ವಿಐಎಸ್ಎಲ್ ಕಾರ್ಖಾನೆಯನ್ನು ಪುನರುಜ್ಜೀವನಗೊಳಿಸಲು ಹಾಗೂ ಜಿಲ್ಲೆಯ ವಿವಿಧ ಆದ್ಯತಾ ಕ್ಷೇತ್ರಗಳಲ್ಲಿ ಕೈಗಾರಿಕೆಗಳನ್ನು ಪ್ರಾರಂಭಿಸುವ ಮೂಲಕ ಹೆಚ್ಚಿನ ಯುವ ಜನರಿಗೆ ಉದ್ಯೋಗಾವಕಾಶಗಳನ್ನು ಕಲ್ಪಿಸುವಂತೆ ಕ್ರಮ ತೆಗೆದುಕೊಳ್ಳಬೇಕೆಂದು ಮನವಿ ಮಾಡಿದ್ದರು.
ಓದಿ : ಸಾಹುಕಾರನ ವಿರುದ್ಧ ಷಡ್ಯಂತ್ರ ರೂಪಿಸಿದವರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಪ್ರತಿಭಟನೆ
ಭದ್ರಾವತಿಯಲ್ಲಿ ಸ್ಥಗಿತವಾಗಿರುವ ಕಾರ್ಖಾನೆಯು ಹೆಚ್ಚಿನ ಮೌಲ್ಯವುಳ್ಳ ಅತ್ಯಾಧುನಿಕ ತಂತ್ರಜ್ಞಾನಧಾರಿತ ಉಕ್ಕನ್ನು ಉತ್ಪಾದಿಸುವ ಸಾಮರ್ಥ್ಯ ಹೊಂದಿದೆ. ಈ ಕೈಗಾರಿಕೆಯನ್ನು ಲಾಭದಾಯಕವಾಗಿ ನಡೆಸಲು ಇನ್ನಷ್ಟು ಅತ್ಯಾಧುನಿಕ ಯಂತ್ರೋಪಕರಣಗಳು ಸೇರಿದಂತೆ ವಿವಿಧ ಅವಶ್ಯಕ ಸೌಲಭ್ಯ ಒದಗಿಸುವ ಅವಶ್ಯಕತೆ ಇದೆ. ಅಂತೆಯೇ ಜಿಲ್ಲೆಯಲ್ಲಿ ಎಲ್ಇಡಿ ಬಲ್ಬ್ ತಯಾರಿಕಾ ಘಟಕ, ಟೆಕ್ಸ್ ಟೈಲ್ಸ್ ಪಾರ್ಕ್, ಆಹಾರ ಸಂಸ್ಕರಣಾ ಘಟಕಗಳು ಮತ್ತು ಇಎಸ್ಡಿಎಂ ಕೈಗಾರಿಕಾ ಕೇಂದ್ರಗಳ ಮೂಲಕ ಉದ್ಯೋಗ ಅವಕಾಶಗಳನ್ನು ಸೃಷ್ಟಿ ಮಾಡಲು ಕೋರಿದ್ದಾರೆ.