ETV Bharat / state

ಕೇಂದ್ರ ಸರ್ಕಾರದ ಯೋಜನೆಗಳ ಸೌಲಭ್ಯ ಜನಸಾಮಾನ್ಯರಿಗೆ ತ್ವರಿತವಾಗಿ ತಲುಪಿಸಬೇಕು: ಬಿ.ವೈ.ರಾಘವೇಂದ್ರ - ಶಿವಮೊಗ್ಗ ಲೇಟೆಸ್ಟ್​ ನ್ಯೂಸ್

ಬ್ಯಾಂಕುಗಳು ರೈತರು ಸ್ವಾವಲಂಬಿಗಳಾಗುವ ನಿಟ್ಟಿನಲ್ಲಿ ಕೃಷಿ ಕ್ಷೇತ್ರಕ್ಕೆ ಹೆಚ್ಚಿನ ಸಾಲ ಸೌಲಭ್ಯಗಳನ್ನು ಒದಗಿಸಲು ಮುಂದಾಗಬೇಕು. ಕೇಂದ್ರ ಸರ್ಕಾರದ ವಿಮಾ ಯೋಜನೆಗಳು, ಆವಾಸ್ ಯೋಜನೆ, ನಿರುದ್ಯೋಗಿಗಳಿಗೆ ಸಾಲ ಸೌಲಭ್ಯ ಒದಗಿಸುವ ಮುದ್ರಾ ಯೋಜನೆ ಮೊದಲಾದ ಯೋಜನೆಗಳ ಅನುಷ್ಠಾನಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಸಂಸದ ಬಿ.ವೈ.ರಾಘವೇಂದ್ರ ಅಧಿಕಾರಿಗಳಿಗೆ ಸೂಚಿಸಿದರು.

MP BY Raghavendra  Meeting
ಕೇಂದ್ರ ಸರ್ಕಾರದ ಯೋಜನೆಗಳ ಸೌಲಭ್ಯ ಜನಸಾಮಾನ್ಯರಿಗೆ ತ್ವರಿತವಾಗಿ ತಲುಪಿಸಬೇಕು: ಸಂಸದ ಬಿ.ವೈ.ರಾಘವೇಂದ್ರ
author img

By

Published : Apr 6, 2021, 7:28 PM IST

ಶಿವಮೊಗ್ಗ: ಆತ್ಮ ನಿರ್ಭರ ಯೋಜನೆ ಸೇರಿದಂತೆ ಕೇಂದ್ರ ಸರ್ಕಾರದ ಯೋಜನೆಗಳ ಅರ್ಜಿಗಳನ್ನು ತ್ವರಿತಗತಿಯಲ್ಲಿ ವಿಲೇವಾರಿಗೊಳಿಸಿ ಯೋಜನೆಗಳ ಲಾಭ ಜನಸಾಮಾನ್ಯರಿಗೆ ದೊರಕುವಂತೆ ಮಾಡಬೇಕು ಎಂದು ಸಂಸದ ಬಿ.ವೈ.ರಾಘವೇಂದ್ರ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಡಿಸಿಸಿ ಮತ್ತು ಡಿಎಲ್‌ಆರ್‌ಸಿ ಯೋಜನೆಗಳ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿದ ಅವರು, ಬ್ಯಾಂಕುಗಳು ರೈತರು ಸ್ವಾವಲಂಬಿಗಳಾಗುವ ನಿಟ್ಟಿನಲ್ಲಿ ಕೃಷಿ ಕ್ಷೇತ್ರಕ್ಕೆ ಹೆಚ್ಚಿನ ಸಾಲ ಸೌಲಭ್ಯಗಳನ್ನು ಒದಗಿಸಲು ಮುಂದಾಗಬೇಕು. ಕೇಂದ್ರ ಸರ್ಕಾರದ ವಿಮಾ ಯೋಜನೆಗಳು, ಆವಾಸ್ ಯೋಜನೆ, ನಿರುದ್ಯೋಗಿಗಳಿಗೆ ಸಾಲ ಸೌಲಭ್ಯ ಒದಗಿಸುವ ಮುದ್ರಾ ಯೋಜನೆ ಮೊದಲಾದ ಯೋಜನೆಗಳ ಅನುಷ್ಠಾನಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದರು.

ಬೀದಿಬದಿ ವ್ಯಾಪಾರಿಗಳಿಗೆ 10 ಸಾವಿರ ರೂ. ಸಹಾಯಧನ ಒದಗಿಸುವ ಪ್ರಧಾನಮಂತ್ರಿ ಆತ್ಮ ನಿರ್ಭರ ಯೋಜನೆಯಡಿ ಜಿಲ್ಲೆಯಲ್ಲಿ 5,692 ಅರ್ಜಿಗಳನ್ನು ಸ್ವೀಕರಿಸಲಾಗಿದ್ದು, ಇದುವರೆಗೆ 3,293 ಮಂದಿಗೆ ನೆರವು ಒದಗಿಸಲಾಗಿದೆ. ವಿಲೇವಾರಿಗೆ ಬಾಕಿಯಿರುವ ಎಲ್ಲಾ ಅರ್ಜಿಗಳನ್ನು ಮುಂದಿನ ಮೂರು ತಿಂಗಳ ಒಳಗಾಗಿ ವಿಲೇವಾರಿಗೊಳಿಸಿ, ಯೋಜನೆಯ ಲಾಭ ಪ್ರತಿಯೊಬ್ಬರಿಗೂ ಸಿಗುವುದನ್ನು ಖಾತ್ರಿಪಡಿಸಬೇಕು ಎಂದು ಹೇಳಿದರು.

ಪ್ರಧಾನಮಂತ್ರಿ ಆವಾಸ್ ಯೋಜನೆ:

ಶಿವಮೊಗ್ಗ ನಗರದ ಗೋವಿಂದಪುರದಲ್ಲಿ 3 ಸಾವಿರ ಆಶ್ರಯ ಮನೆಗಳನ್ನು ನಿರ್ಮಿಸಲಾಗುತ್ತಿದ್ದು, ಈಗಾಗಲೇ ಮಾದರಿ ಮನೆಗಳನ್ನು ನಿರ್ಮಿಸಲಾಗಿದೆ. ಈಗಾಗಲೇ 2,882 ಮಂದಿ ಅರ್ಜಿ ಸಲ್ಲಿಸಿದ್ದು, ತಮ್ಮ ಪಾಲಿನ ಮೊತ್ತವನ್ನು ಪಾವತಿಸಿದ್ದಾರೆ. ಇವರಿಗೆ ಮನೆಗಳನ್ನು ನಿರ್ಮಿಸಲು ಬ್ಯಾಂಕುಗಳು ಸಾಲ ನೀಡುವ ಪ್ರಕ್ರಿಯೆಯನ್ನು ಆದಷ್ಟು ಬೇಗನೆ ಪೂರ್ಣಗೊಳಿಸಬೇಕು. ಅಗತ್ಯವಿರುವ ದಾಖಲೆಗಳನ್ನು ಪಡೆದು ಸಾಲ ಸೌಲಭ್ಯ ಒದಗಿಸಿ, 2024ರ ಒಳಗಾಗಿ ಎಲ್ಲರಿಗೂ ಮನೆ ನಿರ್ಮಾಣ ಎಂಬ ಪ್ರಧಾನಮಂತ್ರಿ ಅವರ ಕನಸನ್ನು ನನಸಾಗಿಸಬೇಕು ಎಂದು ಹೇಳಿದರು.

ಜೀವ ವಿಮೆ ಪ್ರಯೋಜನ ಹೆಚ್ಚಿನವರಿಗೆ ಸಿಗಬೇಕು:

ಪ್ರಧಾನಮಂತ್ರಿ ಜೀವನ ಜ್ಯೋತಿ ಭಿಮಾ ಯೋಜನೆ ಮತ್ತು ಸುರಕ್ಷಾ ಭಿಮಾ ಯೋಜನೆಯಡಿ ಪ್ರಯೋಜನ ಹೆಚ್ಚಿನ ಜನರಿಗೆ ಸಿಗುವಂತೆ ಕ್ರಮ ಕೈಗೊಳ್ಳಬೇಕು. ಇದುವರೆಗೆ ಜಿಲ್ಲೆಯಲ್ಲಿ ಕೇವಲ 162 ಮಂದಿ ಮಾತ್ರ ಡೆತ್ ಕ್ಲೇಮ್​ ಮಾಡಿ ತಲಾ ಎರಡು ಲಕ್ಷ ರೂ. ಪಡೆದುಕೊಂಡಿದ್ದಾರೆ. ಮರಣ ಹೊಂದುವವರ ಸಂಖ್ಯೆ ಇದಕ್ಕಿಂತ ಹೆಚ್ಚಾಗಿದ್ದು, ಯೋಜನೆಯ ವ್ಯಾಪ್ತಿಗೆ ಇನ್ನಷ್ಟು ಫಲಾನುಭವಿಗಳನ್ನು ಸೇರಿಸಬೇಕು. ಈ ಕುರಿತು ಗ್ರಾಮೀಣ ಭಾಗಗಳಲ್ಲಿ ಅರಿವು ಮೂಡಿಸಬೇಕು ಎಂದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.