ETV Bharat / state

ಶೀಘ್ರವೇ ಶರಾವತಿ ಮುಳುಗಡೆ ಸಂತ್ರಸ್ತರ ಸಮಸ್ಯೆ ಬಗೆಹರಿಸಲಾಗುವುದು: ಸಂಸದ ಬಿ ವೈ ರಾಘವೇಂದ್ರ

ಸಾಗುವಳಿ ಮಾಡುತ್ತಿರುವ ಸಂತ್ರಸ್ತ ರೈತರ ಜಮೀನನ್ನು ಕಸಿದುಕೊಳ್ಳುವ ಹಕ್ಕು ಯಾರಿಗೂ ಇಲ್ಲ. ತಪ್ಪಾಗಿದೆ ನಿಜ. ಅದನ್ನು ಸರಿಪಡಿಸಿಕೊಡುತ್ತೇನೆ. ಯಾರೂ ದೃತಿಗೇಡಬೇಡಿ-ಶರಾವತಿ ಮುಳುಗಡೆ ಸಂತ್ರಸ್ತರಿಗೆ ಅಭಯ ನೀಡಿದ ಸಂಸದ ಬಿ.ವೈ ರಾಘವೇಂದ್ರ.

MP BY Raghavendra
ಸಂಸದ ಬಿ.ವೈ. ರಾಘವೇಂದ್ರ
author img

By

Published : Oct 19, 2022, 8:54 AM IST

ಶಿವಮೊಗ್ಗ: ಶರಾವತಿ ಮುಳುಗಡೆ ಸಂತ್ರಸ್ತರ ಸಮಸ್ಯೆಯನ್ನು ಶೀಘ್ರವೇ ಬಗೆಹರಿಸಲಾಗುವುದು. ಸಂತ್ರಸ್ತರು ಭಯಪಡಬೇಕಾದ ಅಗತ್ಯವಿಲ್ಲ ಎಂದು ಸಂಸದ ಬಿ ವೈ ರಾಘವೇಂದ್ರ ಭರವಸೆ ನೀಡಿದರು.

ಜಿಲ್ಲಾ ಪಂಚಾಯಿತಿ ಕಚೇರಿ ಎದುರು ಶರಾವತಿ ಮುಳುಗಡೆ ಪ್ರದೇಶದ ಸಂತ್ರಸ್ತರರ ಸಮಸ್ಯೆಗಳನ್ನು ಆಲಿಸಿ, ಯಾವುದೇ ಕಾರಣಕ್ಕೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನಿಮ್ಮನ್ನು ಕೈಬಿಡುವುದಿಲ್ಲ ಎಂದು ಸಾಂತ್ವನ ಹೇಳಿದರು.

ನ್ಯಾಯಾಲಯ ಶರಾವತಿ ಸಂತ್ರಸ್ತರ ಜಮೀನಿನ ಡಿನೋಟಿಫಿಕೇಷನ್​​ಗೆ ಸಂಬಂಧಿಸಿದಂತೆ ಗಿರೀಶ್ ಆಚಾರ್ ಎಂಬುವವರು ಸಲ್ಲಿಸಿದ್ದ ರಿಟ್ ಪಿಟಿಷನ್​ಗೆ ರೈತರ ವಿರುದ್ಧವಾಗಿ ತೀರ್ಪು ನೀಡಿದೆ. ಇದಕ್ಕೆ ಸಣ್ಣ ಕಾರಣವಿದೆ. ಕೇಂದ್ರದ ಒಪ್ಪಿಗೆ ಪಡೆದು ನ್ಯಾಯಾಲಯಕ್ಕೆ ಹೋಗಬೇಕಿತ್ತು. ಆದರೆ ಆ ರೀತಿ ಮಾಡಲಿಲ್ಲ. ಅಧಿಕಾರಿಗಳ ತಪ್ಪಿನಿಂದ ಈ ರೀತಿ ಆಗಿದ್ದು, ಇದನ್ನು ಸರಿಪಡಿಸಲಾಗುವುದು ಎಂದರು.

ಶರಾವತಿ ಭಾಗದ ರೈತರು ತಮ್ಮ ಜಮೀನುಗಳನ್ನು ನೀಡಿ ಕತ್ತಲೆಯಲ್ಲಿರುವುದು ನಿಜ. ಇವರಿಗೆ ಭೂಮಿ ಹಕ್ಕನ್ನು ಆಗಿನ ಸರ್ಕಾರ ಕೊಡಬೇಕಿತ್ತು. ಈ ಸಮಸ್ಯೆ ದಶಕಗಳಿಂದ ಇದೆ. 1980ರ ಒಳಗೆ ಅರಣ್ಯ ಸಂರಕ್ಷಣೆ ಕಾಯ್ದೆಯಡಿಯಲ್ಲಿಯೇ ಸಂತ್ರಸ್ತರ ಸಮಸ್ಯೆಯನ್ನು ಬಗೆಹರಿಸಬಹುದಿತ್ತು. ಆದರೆ ಹಾಗೇ ಮಾಡಲಿಲ್ಲ. ಸರ್ಕಾರ ಸಂತ್ರಸ್ತರ ಪರವಾಗಿ ತೀರ್ಮಾನ ತೆಗೆದುಕೊಂಡರೂ ಅದನ್ನು ಗೆಜೆಟ್​​ಗೆ ತರಲಿಲ್ಲ. ಪುನಃ 2016ರಲ್ಲಿ ಡಿನೋಟಿಫೈ ಮಾಡಿತ್ತು. ಆದರೆ ಕೇಂದ್ರ ಸರ್ಕಾರದ ಅನುಮತಿ ಪಡೆಯದೇ ಇರುವುದರಿಂದ ಈಗ ಡಿನೋಟಿಫಿಕೇಷನ್​​ ರದ್ದಾಗಿದೆ ಎಂದು ತಿಳಿಸಿದರು.

ಶರಾವತಿ ಮುಳುಗಡೆ ಸಂತ್ರಸ್ತರಿಗೆ ಅಭಯ ನೀಡಿದ ಸಂಸದ ಬಿ.ವೈ ರಾಘವೇಂದ್ರ

ಈಗಿನ ಅಧಿಕಾರಿಗಳ, ಆಗಿನ ಕಾಂಗ್ರೆಸ್ ಸರ್ಕಾರದ ನಿರ್ಲಕ್ಷ್ಯದಿಂದ ಈ ಆದೇಶ ಬಂದಿದೆ. ಇದಕ್ಕಾಗಿ ರೈತರು ಭಯಪಡುವ ಅಗತ್ಯವಿಲ್ಲ. ಇಂದು ನಾನು ಸಂತ್ರಸ್ತರ ಪರವಾಗಿ ದೆಹಲಿಯಲ್ಲಿ ಕೃಷಿ ಮತ್ತು ಅರಣ್ಯ ಸಚಿವರ ಜೊತೆ ಮಾತನಾಡುತ್ತೇನೆ. ಕೇಂದ್ರದ ಒಪ್ಪಿಗೆ ಪಡೆದು ಸಂತ್ರಸ್ತರ ಜಾಗ ಉಳಿಸಿಕೊಡುತ್ತೇನೆ. ಸಾಗುವಳಿ ಮಾಡುತ್ತಿರುವ ಸಂತ್ರಸ್ತ ರೈತರ ಜಮೀನನ್ನು ಕಸಿದುಕೊಳ್ಳುವ ಹಕ್ಕು ಯಾರಿಗೂ ಇಲ್ಲ. ತಪ್ಪಾಗಿದೆ ನಿಜ. ಅದನ್ನು ಸರಿಪಡಿಸಿಕೊಡುತ್ತೇನೆ. ಯಾರೂ ದೃತಿಗೇಡಬೇಡಿ ಎಂದು ಧೈರ್ಯ ತುಂಬಿದರು.

ಇದನ್ನೂ ಓದಿ: ಶರಾವತಿ ಮುಳುಗಡೆ ಸಂತ್ರಸ್ತರಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ..

ETV Bharat Logo

Copyright © 2024 Ushodaya Enterprises Pvt. Ltd., All Rights Reserved.