ETV Bharat / state

ವಿಜಯೇಂದ್ರ ತನ್ನ ಪಾಡಿಗೆ ತಾನು ಸಂಘಟನೆಯ ಕೆಲಸ ಮಾಡುತ್ತಿದ್ದಾರೆ : ಸಂಸದ ಬಿ ವೈ ರಾಘವೇಂದ್ರ

author img

By

Published : Oct 12, 2021, 3:21 PM IST

ಒಂದು ವಿಧಾನಸಭಾ ಕ್ಷೇತ್ರಕ್ಕೆ ಸೀಮಿತವಾಗದೆ ಎಂಟು ತಾಲೂಕಿಗೆ ಸೇವೆ ಮಾಡುವ ಅವಕಾಶ ಹಾಗೂ ಆಶೀರ್ವಾದ ಜನ ಮಾಡಿದ್ದಾರೆ. ಹಾಗಾಗಿ, ನಾನು ಲೋಕಸಭಾ ಸದಸ್ಯನಾಗಿಯೇ ಸೇವೆ ಮುಂದುವರಿಸಿಕೊಂಡು ಹೋಗುತ್ತೇನೆ..

mp by raghavendra statement on by vijayendra
ಸಂಸದ ಬಿವೈ ರಾಘವೇಂದ್ರ

ಶಿವಮೊಗ್ಗ : ವಿಜಯೇಂದ್ರ ಜನಪ್ರತಿನಿಧಿಯಾಗಿ ಗುರುತಿಸಿಕೊಳ್ಳದೇ ತನ್ನ ಪಾಡಿಗೆ ತಾನು ಸಂಘಟನೆಯ ಕೆಲಸ ಮಾಡುತ್ತಿದ್ದಾನೆ ಎಂದು ಸಂಸದ ಹಾಗೂ ವಿಜಯೇಂದ್ರ ಅಣ್ಣನಾಗಿರುವ ಬಿ ವೈ ರಾಘವೇಂದ್ರ ಹೇಳಿದರು.

ಬಿಜೆಪಿ ಸರ್ಕಾರದಲ್ಲಿ ವಿಜಯೇಂದ್ರ ಅವರಿಗೆ ಸ್ಥಾನಮಾನ ಕೊಡುವ ಬಗ್ಗೆ ಚರ್ಚೆಯಾಗುತ್ತಿರುವ ಕುರಿತು ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದ್ರು. ಯಡಿಯೂರಪ್ಪನವರಾಗಿರಲಿ, ವಿಜಯೇಂದ್ರ ಆಗಲಿ ಎಲ್ಲಿಯೂ ಈ ಕುರಿತು ಹೇಳಿಕೊಂಡಿಲ್ಲ. ಅಪೇಕ್ಷೇನೂ ಪಟ್ಟಿಲ್ಲ, ವಿಜಯೇಂದ್ರ ಅವನ ಪಾಡಿಗೆ ಅವನು ಸಂಘಟನೆಯಲ್ಲಿ ಸಂಘಟನೆಯ ಚೌಕಟ್ಟಿನಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದರು.

ಪಕ್ಷದಲ್ಲಿ ಸೋದರ ವಿಜಯೇಂದ್ರ ಸ್ಥಾನಮಾನದ ಕುರಿತು ಸಂಸದ ಬಿ ವೈ ರಾಘವೇಂದ್ರ ಪ್ರತಿಕ್ರಿಯೆ ನೀಡಿರುವುದು..

ನಿನ್ನೆ ಶಿರಸಿಯಲ್ಲಿ ರಾಜ್ಯ ರಾಜಕಾರಣಕ್ಕೆ ಮರಳುವ ಇಂಗಿತ ವ್ಯಕ್ತಪಡಿಸಿದ್ದರ ಕುರಿತು ಮಾತನಾಡಿದ ಅವರು, ಲೋಕಸಭಾ ಕ್ಷೇತ್ರದ ಜನ ನನಗೆ ಆಶೀರ್ವಾದ ಮಾಡಿ ಮೂರು ಬಾರಿ ಸಂಸತ್​​ ಸದಸ್ಯನಾಗಿ ಸೇವೆ ಸಲ್ಲಿಸುವ ಅವಕಾಶ ಮಾಡಿಕೊಟ್ಟಿದ್ದಾರೆ.

ಹಾಗಾಗಿ, ಆ ದಿಕ್ಕಿನಲ್ಲಿಯೇ ಮುಂದುವರಿಯುವ ಅಪೇಕ್ಷೆ ಇದೆ ಎಂದರು. ಒಂದು ವಿಧಾನಸಭಾ ಕ್ಷೇತ್ರಕ್ಕೆ ಸೀಮಿತವಾಗದೆ ಎಂಟು ತಾಲೂಕಿಗೆ ಸೇವೆ ಮಾಡುವ ಅವಕಾಶ ಹಾಗೂ ಆಶೀರ್ವಾದ ಜನ ಮಾಡಿದ್ದಾರೆ. ಹಾಗಾಗಿ, ನಾನು ಲೋಕಸಭಾ ಸದಸ್ಯನಾಗಿಯೇ ಸೇವೆ ಮುಂದುವರಿಸಿಕೊಂಡು ಹೋಗುತ್ತೇನೆ ಎಂದರು.

ಐಟಿ ದಾಳಿಗೂ ನಮ್ಮ ಕುಟುಂಬಕ್ಕೂ ಯಾವುದೇ ಸಂಬಂಧ ಇಲ್ಲ : ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರ ಆಪ್ತ ಉಮೇಶ ಮನೆಯ ಮೇಲಿನ ಐಟಿ ದಾಳಿಯ ಕುರಿತು ಮಾತನಾಡಿದ ಸಂಸದ ರಾಘವೇಂದ್ರ ಅವರು, ಐಟಿ ದಾಳಿಗೂ ನಮ್ಮ ಕುಟುಂಬಕ್ಕೂ ಯಾವುದೇ ಸಂಬಂಧ ಇಲ್ಲ. ಉಮೇಶ್ ಅವರು ಅನೇಕ ವರ್ಷಗಳಿಂದ ಮುಖ್ಯಮಂತ್ರಿ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದರು. ತನಿಖೆ ನಡೆಯುತ್ತಿದೆ, ಐಟಿ ಅಧಿಕಾರಿಗಳು ಅವರ ಕೆಲಸವನ್ನು ಅವರು ಮಾಡುತ್ತಿದ್ದಾರೆ ಎಂದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.