ಶಿವಮೊಗ್ಗ: ನಮ್ಮೂರಿಗೆ ಎಂಎಸ್ಐಎಲ್ ಮದ್ಯದಂಗಡಿ ಬೇಡ ಎಂದು ಆಗ್ರಹಿಸಿ ಶಿಕಾರಿಪುರ ತಾಲೂಕಿನ ಮುಡುಬ ಸಿದ್ದಾಪುರ ಗ್ರಾಮಸ್ಥರು ಜಿಲ್ಲಾಧಿಕಾರಿ ಕಚೇರಿ ಎದುರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ.
ಮದ್ಯದಂಗಡಿ ತೆರೆಯಲು ಹೊರಟಿರುವ ಅಬಕಾರಿ ಇಲಾಖೆ ಕ್ರಮ ಖಂಡಿಸಿ ಹಲವಾರು ಬಾರಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದ್ದೇವೆ. ಆದರೂ ಮನವಿಗೆ ಸ್ಪಂದಿಸದೇ ಮದ್ಯದಂಗಡಿ ತೆರೆಯಲು ಅನುಮತಿ ನೀಡಲಾಗಿದೆ. ಇದರಿಂದ ನೆಮ್ಮದಿಯಿಂದ ಬದುಕುತ್ತಿರುವ ಗ್ರಾಮಸ್ಥರು ದುಶ್ಚಟಗಳಿಗೆ ಬಲಿಯಾಗುವ ಸಾಧ್ಯತೆಯಿದೆ. ಹಾಗಾಗಿ ಜಿಲ್ಲಾಡಳಿತ ಯಾವುದೇ ಕಾರಣಕ್ಕೂ ಮುಡುಬ ಸಿದ್ದಾಪುರ ಗ್ರಾಮದಲ್ಲಿ ಮದ್ಯದಂಗಡಿ ತೆರೆಯಬಾರದು ಎಂದರು.
ಒಂದು ವೇಳೆ, ಮದ್ಯದಂಗಡಿ ತೆರೆಯಲು ಅವಕಾಶ ನೀಡಿದರೆ ಜಿಲ್ಲಾಧಿಕಾರಿ ಕಚೇರಿ ಎದುರು ಗ್ರಾಮಸ್ಥರು ಧರಣಿ ನಡೆಸಬೇಕಾಗುತ್ತದೆ. ಹಾಗಾಗಿ ಅವಕಾಶ ನೀಡಬಾರದು ಎಂದು ಒತ್ತಾಯಿಸಿದರು.