ಶಿವಮೊಗ್ಗ: ಇಲ್ಲಿನ ಟಿಪ್ಪು ನಗರದಲ್ಲಿ ಯುವಕನನ್ನು ಕೊಲೆ ಮಾಡಿ ಪರಾರಿಯಾಗಿದ್ದ ನಾಲ್ವರು ಆರೋಪಿಗಳನ್ನು ಒಂದೇ ದಿನದಲ್ಲಿ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಶನಿವಾರ ರಾತ್ರಿ ನಗರದ ಟಿಪ್ಪುನಗರ ನಿವಾಸಿ ಇರ್ಫಾನ್ (28) ಎಂಬಾತನನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಆರೋಪಿಗಳು ಮೃತದೇಹವನ್ನು ಚರಂಡಿಗೆ ಎಸೆದು ಪರಾರಿಯಾಗಿದ್ದರು. ಈ ಸಂಬಂಧ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದ ತುಂಗಾ ನಗರ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ.
ಘಟನೆಯ ವಿವರ:
ಗಾಂಜಾ ಪ್ರಕರಣಗಳ ವಿಚಾರದಲ್ಲಿ ಅಸಾದ್ ಮತ್ತು ಶಾಬೀರ್ ಎಂಬುವರ ನಡುವೆ ಗಲಾಟೆ ನಡೆದಿದ್ದು, ಆ ಸಮಯದಲ್ಲಿ ಸ್ಥಳದಲ್ಲೇ ಇದ್ದ 7ರಿಂದ 8 ಜನ ಯುವಕರು ಸಹ ಜಗಳದಲ್ಲಿ ಸೇರಿಕೊಂಡಿದ್ದಾರೆ. ಈ ವೇಳೆ ಇರ್ಫಾನ್ ತನ್ನ ಬಳಿ ಇದ್ದ ಚಾಕುವಿನಿಂದ ಒರ್ವನ ಮೇಲೆ ಹಲ್ಲೆ ಮಾಡಿದ್ದಾನೆ. ಆಗ ಎದುರಾಳಿಗಳು ಅದೇ ಚಾಕುವನ್ನು ಕಸಿದುಕೊಂಡು ಇರ್ಫಾನ್ ಎದೆಯ ಭಾಗಕ್ಕೆ ಚುಚ್ಚಿ ಕೊಲೆ ಮಾಡಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಇದನ್ನೂ ಓದಿ: ಭದ್ರಾವತಿ: ಹಲ್ಲು ತೆಗೆಸಲು ಹೋದ ವ್ಯಕ್ತಿ ಆಸ್ಪತ್ರೆಯಲ್ಲೇ ಸಾವು!!