ಶಿವಮೊಗ್ಗ : ಭದ್ರಾವತಿಯ ಕೆಎಸ್ಆರ್ಟಿಸಿ ಬಸ್ ನಿಲ್ದಾಣಕ್ಕೆ ಮಾಜಿ ಶಾಸಕ ದಿವಂಗತ ಎಂ ಜಿ ಅಪ್ಪಾಜಿ ಗೌಡರ ಹೆಸರು ನಾಮಕರಣ ಮಾಡಬೇಕೆಂದು ಮಾನವ ಹಕ್ಕುಗಳ ಹೋರಾಟ ಸಮಿತಿ ಜಿಲ್ಲಾಧ್ಯಕ್ಷ ಬಿ ಎನ್ ರಾಜು ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಭದ್ರಾವತಿಯ ರಾಜಕೀಯ ಇತಿಹಾಸದಲ್ಲಿ ಅತ್ಯಂತ ಪ್ರಭಾವಿ ನಾಯಕ ಹಾಗೂ ಧೀನ-ದಲಿತರ ಆಶಾಕಿರಣವಾಗಿದ್ದ ಮಾಜಿ ಶಾಸಕ ಅಪ್ಪಾಜಿ ಗೌಡರು ನಿಧನರಾಗಿದ್ದಾರೆ. ಅವರು ಬದುಕಿದ್ದಷ್ಟು ಕಾಲ ಹೋರಾಟದ ಮೂಲಕ ಬಡವರು ಮತ್ತು ಸಂಕಷ್ಟಕ್ಕೊಳಗಾದವರ ನೆರವಿಗೆ ಧಾವಿಸುತ್ತಿದ್ದರು.
ಅವರ ಆಡಳಿತಾವಧಿಯಲ್ಲಿ ಅನೇಕ ಜನಪರ ಕಾರ್ಯಗಳನ್ನು ಮಾಡುವ ಮೂಲಕ ಭದ್ರಾವತಿ ತಾಲೂಕಿನ ಅಭಿವೃದ್ಧಿಗೆ ಮುನ್ನುಡಿ ಬರೆದಿದ್ದಾರೆ. ಹೀಗಾಗಿ, ಭದ್ರಾವತಿಯ ಕೆಎಸ್ಆರ್ಟಿಸಿ ಬಸ್ ನಿಲ್ದಾಣಕ್ಕೆ ಅವರ ಹೆಸರಿಡಬೇಕು ಎಂದು ಒತ್ತಾಯಿಸಿದರು.