ETV Bharat / state

ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಶಿವಮೊಗ್ಗದಲ್ಲಿ ರಾಷ್ಟ್ರೀಯ ಲೋಕ ಅದಾಲತ್ - ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಶಿವಮೊಗ್ಗದಲ್ಲಿ ರಾಷ್ಟ್ರೀಯ ಲೋಕ ಅದಾಲತ್

ಕಾನೂನು ಸೇವೆಗಳ ಪ್ರಾಧಿಕಾರವು, ಪ್ರಸಕ್ತ ಸಾಲಿನ ಫೆಬ್ರವರಿ, ಏಪ್ರೀಲ್, ಜುಲೈ, ಸೆಪ್ಟೆಂಬರ್ ಹಾಗೂ ಡಿಸೆಂಬರ್ ತಿಂಗಳ 2ನೇ ಶನಿವಾರದಂದು, ರಾಷ್ಟ್ರೀಯ ಲೋಕ್ ಅದಾಲತ್‍ ಏರ್ಪಡಿಸಲಿದೆ.

national-lok-adalat-in-shimoga
ಶಿವಮೊಗ್ಗದಲ್ಲಿ ರಾಷ್ಟ್ರೀಯ ಲೋಕ ಅದಾಲತ್
author img

By

Published : Jan 22, 2020, 5:29 PM IST

ಶಿವಮೊಗ್ಗ: ಕಾನೂನು ಸೇವೆಗಳ ಪ್ರಾಧಿಕಾರವು, ಪ್ರಸಕ್ತ ಸಾಲಿನ ಫೆಬ್ರವರಿ, ಏಪ್ರೀಲ್, ಜುಲೈ, ಸೆಪ್ಟೆಂಬರ್ ಹಾಗೂ ಡಿಸೆಂಬರ್ ತಿಂಗಳ 2ನೇ ಶನಿವಾರದಂದು, ರಾಷ್ಟ್ರೀಯ ಲೋಕ್ ಅದಾಲತ್‍ ಏರ್ಪಡಿಸಲಿದೆ ಎಂದು ಜಿಲ್ಲಾ ಪ್ರಧಾನ ಹಾಗೂ ಸತ್ರ ನ್ಯಾಯಾಧೀಶ ಮಾಸ್ಟರ್. ಆರ್.ಕೆ. ಜಿ. ಎಂ. ಎಂ. ಮಹಾಸ್ವಾಮೀಜಿ ಹೇಳಿದರು.

ಜಿಲ್ಲಾ ನ್ಯಾಯಾಲಯದ ಸಭಾಂಗಣದಲ್ಲಿ ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಷ್ಟ್ರೀಯ ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಲೋಕ್ ಅದಾಲತ್‍ ಏರ್ಪಡಿಸುತ್ತಿದ್ದು, ಈ ಅದಾಲತ್‍ನಲ್ಲಿ ಜಿಲ್ಲೆಯ ನ್ಯಾಯಾಲಯಗಳಲ್ಲಿ ಹಲವು ವರ್ಷಗಳಿಂದ ಬಾಕಿ ಇರುವಂತಹ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಕಕ್ಷಿದಾರರಿಗೆ ಸಹಕಾರಿಯಾಗಲಿದೆ ಎಂದು ತಿಳಿಸಿದರು.

ಶಿವಮೊಗ್ಗದಲ್ಲಿ ರಾಷ್ಟ್ರೀಯ ಲೋಕ ಅದಾಲತ್

ಪ್ರಸ್ತುತ ಶಿವಮೊಗ್ಗ ಜಿಲ್ಲಾ ನ್ಯಾಯಾಲಯದಲ್ಲಿ 45,000ಕ್ಕೂ ಅಧಿಕ ಪ್ರಕರಣಗಳು ವಿಚಾರಣೆ ಹಂತದಲ್ಲಿವೆ. ಇದರಲ್ಲಿ ಶೇ. 20ರಷ್ಟು ಪ್ರಕರಣಗಳು ಲೋಕ್‍ ಅದಾಲತ್‍ನಲ್ಲಿ ಇತ್ಯರ್ಥಪಡಿಸಿಕೊಳ್ಳಲು ಸಾಧ್ಯವಾಗಲಿದೆ ಎಂದರು. ಚೆಕ್ ಬೌನ್ಸ್, ವೈವಾಹಿಕ, ಮೋಟಾರು ವಾಹನ ಪರಿಹಾರ ಪ್ರಕರಣ ಸೇರಿದಂತೆ ಹಲವು ಪ್ರಕರಣಗಳಲ್ಲಿ ಉಭಯ ಕಕ್ಷಿದಾರರ ಒಪ್ಪಿಗೆ ಪಡೆದು, ರಾಜಿಸಂಧಾನದ ಮೂಲಕ ಇತ್ಯರ್ಥಪಡಿಸಲಾಗುವುದು ಎಂದರು.

ಬ್ಯಾಂಕ್‍ಗಳಿಗೆ ಸಂಬಂಧಿಸಿದ ಸಾಲ ವಸೂಲಾತಿ ಪ್ರಕರಣಗಳು, ವಿದ್ಯುತ್ಛಕ್ತಿ ಸೇರಿದಂತೆ ಇತರ ಯಾವುದೇ ನ್ಯಾಯಾಲಯಕ್ಕೆ ಬರಬಹುದಾದ ಪ್ರಕರಣಗಳನ್ನು, ಪೂರ್ವವ್ಯಾಜ್ಯ ಪ್ರಕರಣಗಳೆಂದು ಪರಿಗಣಿಸಿ ಇವುಗಳನ್ನೂ ಸಹ ರಾಜಿ ಸಂಧಾನದ ಮೂಲಕ ವಿವಾದಗಳನ್ನು ಬಗೆಹರಿಸಲಾಗುವುದು ಎಂದರು.

ಲೋಕ್‍ ಅದಾಲತ್‍ನಿಂದ ಪ್ರಕರಣವನ್ನು ಶೀಘ್ರವಾಗಿ ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ. ಕಕ್ಷಿದಾರರು ನೇರವಾಗಿ ಅಥವಾ ತಮ್ಮ ವಕೀಲರ ಮುಖಾಂತರ ಅದಾಲತ್‍ನಲ್ಲಿ ಭಾಗವಹಿಸಬಹುದಾಗಿದೆ. ಇಬ್ಬರಿಗೂ ಒಪ್ಪಿಗೆಯಾಗುವಂತೆ ಪ್ರಕರಣವನ್ನು ತೀರ್ಮಾನಿಸಲಾಗುವುದು. ಇದರಿಂದ ಉಭಯ ಪಕ್ಷಗಾರರ ನಡುವೆ ಬಾಂಧವ್ಯವೂ ಸಹ ಉಳಿಯಲಿದೆ ಎಂದರು.

ಈವರೆಗೆ ನ್ಯಾಯಾಲಯದಲ್ಲಿ ದಾಖಲಾಗದಿರುವ ಪ್ರಕರಣಗಳನ್ನೂ ರಾಜಿ ಸಂಧಾನದ ಮೂಲಕ ಬಗೆಹರಿಸಿಕೊಳ್ಳಲು ಅವಕಾಶವಿದೆ. ವ್ಯಾಜ್ಯ ಪೂರ್ವ ಪ್ರಕರಣಗಳಲ್ಲಿ ನ್ಯಾಯಾಲಯದ ಶುಲ್ಕ ಪಾವತಿಯಿಂದ ವಿನಾಯಿತಿ ನೀಡಲಾಗಿದೆ. ರಾಜಿ ಸಂಧಾನದ ಮೂಲಕ ಪ್ರಕರಣ ಇತ್ಯರ್ಥವಾದರೆ ನ್ಯಾಯಾಲಯಕ್ಕೆ ಪಾವತಿಸಿದ ಶುಲ್ಕವನ್ನು ಮರು ಪಾವತಿಸಲಾಗುವುದು ಎಂದರು.

2020ರ ಫೆಬ್ರವರಿ 8, ಏಪ್ರೀಲ್ 4, ಜುಲೈ 11, ಸೆಪ್ಟೆಂಬರ್ 12 ಹಾಗೂ ಡಿಸೆಂಬರ್ 12ರಂದು ಲೋಕ್‍ ಅದಾಲತ್ ನಡೆಯಲಿದೆ. ಈ ಅದಾಲತ್‍ನ ಕುರಿತಾದ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಅಥವಾ ಸಹಾಯವಾಣಿ ಸಂಖ್ಯೆ 1800-425-90900ಗೆ ಸಂಪರ್ಕಿಸಬಹುದಾಗಿದೆ ಎಂದರು. ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾ. ಕೆ.ಎನ್.ಸರಸ್ವತಿ, ವಕೀಲರ ಸಂಘದ ಅಧ್ಯಕ್ಷ ದೇವೇಂದ್ರಪ್ಪ, ಕಾರ್ಯದರ್ಶಿ ಕಾಂತರಾಜ್ ಇದ್ದರು.

Intro:ಶಿವಮೊಗ್ಗ,

ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ರಾಷ್ಟ್ರೀಯ ಲೋಕ ಅದಾಲತ್

ಕಾನೂನು ಸೇವೆಗಳ ಪ್ರಾಧಿಕಾರವು ಪ್ರಸಕ್ತ ಸಾಲಿನ ಫೆಬ್ರವರಿ, ಏಪ್ರಿಲ್, ಜುಲೈ, ಸೆಪ್ಟೆಂಬರ್ ಹಾಗೂ ಡಿಸೆಂಬರ್ ತಿಂಗಳ 2ನೇ ಶನಿವಾರಗಳಂದು ರಾಷ್ಟ್ರೀಯ ಲೋಕ್ ಅದಾಲತ್‍ನ್ನು ಏರ್ಪಡಿಸಲಿದೆ ಎಂದು ಜಿಲ್ಲಾ ಪ್ರಧಾನ ಹಾಗೂ ಸತ್ರ ನ್ಯಾಯಾಧೀಶ ಮಾಸ್ಟರ್ ಆರ್.ಕೆ.ಜಿ.ಎಂ.ಎಂ. ಮಹಾಸ್ವಾಮೀಜಿ ಹೇಳಿದರು.

ಜಿಲ್ಲಾ ನ್ಯಾಯಾಲಯದ ಸಭಾಂಗಣದಲ್ಲಿ ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ರಾಷ್ಟ್ರೀಯ ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಲೋಕ್ ಅದಾಲತ್‍ನ್ನು ಏರ್ಪಡಿಸುತ್ತಿದ್ದು, ಈ ಅದಾಲತ್‍ನಲ್ಲಿ ಜಿಲ್ಲೆಯ ನ್ಯಾಯಾಲಯಗಳಲ್ಲಿ ಹಲವು ವರ್ಷಗಳಿಂದ ಬಾಕಿ ಇರುವಂತಹ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಕಕ್ಷಿದಾರರಿಗೆ ಸಹಕಾರಿಯಾಗಲಿದೆ ಎಂದವರು ತಿಳಿಸಿದರು. ಪ್ರಸ್ತುತ ಶಿವಮೊಗ್ಗ ಜಿಲ್ಲಾ ನ್ಯಾಯಾಲಯದಲ್ಲಿ 45,000ಕ್ಕೂ ಅಧಿಕ ಪ್ರಕರಣಗಳು ವಿಚಾರಣೆ ಹಂತದಲ್ಲಿವೆ. ಇದರಲ್ಲಿ ಶೇ.20ರಷ್ಟು ಪ್ರಕರಣಗಳು ಲೋಕ್‍ಅದಾಲತ್‍ನಲ್ಲಿ ಇತ್ಯರ್ಥಪಡಿಸಿಕೊಳ್ಳಲು ಸಾಧ್ಯವಾಗಲಿದೆ ಎಂದ ಅವರು, ಚೆಕ್ ಬೌನ್ಸ್, ವೈವಾಹಿಕ, ಮೋಟಾರು ವಾಹನ ಪರಿಹಾರ ಪ್ರಕರಣ ಸೇರಿದಂತೆ ಹಲವು ಪ್ರಕರಣಗಳಲ್ಲಿ ಉಭಯ ಕಕ್ಷಿದಾರರ ಒಪ್ಪಿಗೆಯನ್ನು ಪಡೆದು, ರಾಜಿಸಂಧಾನದ ಮೂಲಕ ಇತ್ಯರ್ಥಪಡಿಸಲಾಗುವುದು ಎಂದರು. ಬ್ಯಾಂಕ್‍ಗಳಿಗೆ ಸಂಬಂಧಿಸಿದ ಸಾಲ ವಸೂಲಾತಿ ಪ್ರಕರಣಗಳು, ವಿದ್ಯುತ್ಛಕ್ತಿ ಸೇರಿದಂತೆ ಇತರೆ ಯಾವುದೇ ನ್ಯಾಯಾಲಯಕ್ಕೆ ಬರಬಹುದಾದ ಪ್ರಕರಣಗಳನ್ನು ಪೂರ್ವವ್ಯಾಜ್ಯ ಪ್ರಕರಣಗಳೆಂದು ಪರಿಗಣಿಸಿ ಇವುಗಳನ್ನೂ ಸಹ ರಾಜಿಸಂಧಾನದ ಮೂಲಕ ವಿವಾದಗಳನ್ನು ಬಗೆಹರಿಸಲಾಗುವುದು ಎಂದರು.

ಲೋಕ್‍ಅದಾಲತ್‍ನಿಂದ ಪ್ರಕರಣವನ್ನು ಶೀಘ್ರವಾಗಿ ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ. ಕಕ್ಷಿದಾರರು ನೇರವಾಗಿ ಅಥವಾ ತಮ್ಮ ವಕೀಲರ ಮುಖಾಂತರ ಅದಾಲತ್‍ನಲ್ಲಿ ಭಾಗವಹಿಸಬಹುದಾಗಿದೆ. ಇಬ್ಬರಿಗೂ ಒಪ್ಪಿಗೆಯಾಗುವಂತೆ ಪ್ರಕರಣವನ್ನು ತೀರ್ಮಾನಿಸಲಾಗುವುದು. ಇದರಿಂದ ಉಭಯ ಪಕ್ಷಗಾರರ ನಡುವೆ ಬಾಂಧವ್ಯವೂ ಸಹ ಉಳಿಯಲಿದೆ. ಈವರೆಗೆ ನ್ಯಾಯಾಲಯದಲ್ಲಿ ದಾಖಲಾಗದಿರುವ ಪ್ರಕರಣಗಳನ್ನೂ ಸಹ ರಾಜಿಸಂಧಾನದ ಮೂಲಕ ಬಗೆಹರಿಸಿಕೊಳ್ಳಲು ಅವಕಾಶವಿದೆ. ವ್ಯಾಜ್ಯಪೂರ್ವ ಪ್ರಕರಣಗಳಲ್ಲಿ ನ್ಯಾಯಾಲಯದ ಶುಲ್ಕ ಪಾವತಿಯಿಂದ ವಿನಾಯಿತಿ ನೀಡಲಾಗಿದೆ. ರಾಜಿಸಂಧಾನದ ಮೂಲಕ ಪ್ರಕರಣ ಇತ್ಯರ್ಥವಾದರೆ ನ್ಯಾಯಾಲಯಕ್ಕೆ ಪಾವತಿಸಿದ ಶುಲ್ಕವನ್ನು ಮರುಪಾವತಿಸಲಾಗುವುದು ಎಂದರು.
2020ರ ಫೆ.8, ಏ.4, ಜು.11, ಸೆ.12 ಹಾಗೂ ಡಿ.12ರಂದು ಲೋಕ್‍ಅದಾಲತ್ ನಡೆಯಲಿದೆ. ಈ ಅದಾಲತ್‍ನ ಕುರಿತಾದ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಅಥವಾ ಸಹಾಯವಾಣಿ ಸಂಖ್ಯೆ : 1800-425-90900ಗೆ ಸಂಪರ್ಕಿಸಬಹುದಾಗಿದೆ ಎಂದರು. ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾ|| ಕೆ.ಎನ್.ಸರಸ್ವತಿ, ವಕೀಲರ ಸಂಘದ ಅಧ್ಯಕ್ಷ ದೇವೇಂದ್ರಪ್ಪ, ಕಾರ್ಯದರ್ಶಿ ಕಾಂತರಾಜ್ ಮೊದಲಾದವರಿದ್ದರು.

ಭೀಮಾನಾಯ್ಕ ಎಸ್ ಶಿವಮೊಗ್ಗBody:ಭೀಮಾನಾಯ್ಕ ಎಸ್ ಶಿವಮೊಗ್ಗConclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.