ETV Bharat / state

ಶಾಲೆಗಳಲ್ಲಿ ಕಲಿಕೆ ಗುಣಮಟ್ಟ ಸುಧಾರಿಸಲು ಅಗತ್ಯ ಕ್ರಮ : ಸಚಿವ ಬಿ.ಸಿ.ನಾಗೇಶ್

ಶಾಲೆಗಳಲ್ಲಿ ಮಕ್ಕಳ ಕಲಿಕಾ ಗುಣಮಟ್ಟವನ್ನು ಗಮನಿಸಲು ಡಿಡಿಪಿಐ ಮತ್ತು ಬಿಇಒಗಳು ಶಾಲೆಗಳಿಗೆ ಭೇಟಿ ನೀಡಬೇಕು. ಜೊತೆಗೆ ಶಿಕ್ಷಕರ ಬೋಧನಾ ಮಟ್ಟವನ್ನು ಗಮನಿಸಿ ಸೂಕ್ತ ಸಲಹೆಗಳನ್ನು ನೀಡುವಂತೆ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

author img

By

Published : Jun 15, 2022, 9:14 PM IST

necessary-action-will-be-taken-to-improve-the-quality-of-learning-in-schools-says-bc-nagesh
ಶಾಲೆಗಳಲ್ಲಿ ಕಲಿಕೆ ಗುಣಮಟ್ಟ ಸುಧಾರಿಸಲು ಅಗತ್ಯ ಕ್ರಮ : ಸಚಿವ ಬಿ.ಸಿ.ನಾಗೇಶ್

ಶಿವಮೊಗ್ಗ: ಶಾಲೆಗಳಲ್ಲಿ ಕಲಿಕೆಯ ಗುಣಮಟ್ಟವನ್ನು ಉತ್ತಮಪಡಿಸಲು ಬಿಇಒ ಸೇರಿದಂತೆ ಇಲಾಖೆಯ ಅಧಿಕಾರಿಗಳು ಶಾಲೆಗಳಿಗೆ ನಿರಂತರ ಭೇಟಿ ನೀಡಿ ಪರಿಶೀಲಿಸಬೇಕು ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶಿಕ್ಷಣ ಇಲಾಖೆಯ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನೆ ಸಭೆ ನಡೆಸಿ ಮಾತನಾಡಿದರು.

ಡಿಡಿಪಿಐ ಮತ್ತು ಬಿಇಒಗಳು ಶಾಲೆಗಳಿಗೆ ಭೇಟಿ ನೀಡಿ ಮಕ್ಕಳ ಕಲಿಕೆಯ ಗುಣಮಟ್ಟವನ್ನು ನಿರಂತರವಾಗಿ ಗಮನಿಸಬೇಕು. ತರಗತಿಯಲ್ಲಿ ಕುಳಿತುಕೊಂಡು ಶಿಕ್ಷಕರ ಬೋಧನಾ ಮಟ್ಟವನ್ನು ಗಮನಿಸಿ ಅವರಿಗೆ ಸೂಕ್ತ ಸಲಹೆ ಸೂಚನೆಗಳನ್ನು ನೀಡಬೇಕು. ಸರ್ಕಾರಿ ಶಾಲೆಗಳಲ್ಲಿ ಈ ವರ್ಷ ಮಾಡಿದ ರೀತಿಯಲ್ಲಿ ಕಲಿಕಾ ಚೇತರಿಕೆ ಕಾರ್ಯಕ್ರಮವನ್ನು ಖಾಸಗಿ ಶಾಲೆಗಳಲ್ಲೂ ಮಾಡಬೇಕು ಎಂದು ಹೇಳಿದರು.

ಶಾಲೆಗಳಲ್ಲಿ ಲಭ್ಯವಿರುವ ಮೂಲಸೌಲಭ್ಯಗಳನ್ನು ಅನುಸರಿಸಿ ಶಾಲೆಗಳನ್ನು ಎ, ಬಿ ಮತ್ತು ಸಿ ವಿಭಾಗಗಳಲ್ಲಿ ಗುರುತಿಸಲಾಗುತ್ತಿದೆ. ಜಿಲ್ಲೆಯ ಹಿರಿಯ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಸಹಕಾರದೊಂದಿಗೆ ಮುಂದಿನ ಒಂದು ವರ್ಷದ ಒಳಗಾಗಿ ಬಿ ವಿಭಾಗದಲ್ಲಿರುವ ಎಲ್ಲಾ ಶಾಲೆಗಳನ್ನು ಎ ವಿಭಾಗ ಸೇರುವಂತೆ ಮೇಲ್ದರ್ಜೆಗೇರಿಸಬೇಕು. ಇಲಾಖಾ ಅನುದಾನ ಮಾತ್ರವಲ್ಲದೆ ಉದ್ಯೋಗ ಖಾತ್ರಿ ಯೋಜನೆ, ಜೆಎಂಎಂ ಯೋಜನೆಯ ಲಾಭವನ್ನು ಪಡೆದುಕೊಂಡು ಪ್ರತಿ ಶಾಲೆಗೆ ಕುಡಿಯುವ ನೀರು, ಶೌಚಾಲಯ, ಕಾಂಪೌಂಡ್, ಆಟದ ಮೈದಾನವನ್ನು ಒದಗಿಸುವ ವ್ಯವಸ್ಥೆಯನ್ನು ಮಾಡಬೇಕು.

ಶಾಲೆಗೆ ದಾಖಲಾಗುವ ಮಕ್ಕಳು ವಿದ್ಯಾಭ್ಯಾಸ ಮೊಟಕುಗೊಳಿಸುವ ಪ್ರಕರಣಗಳ ಮೇಲೆ ನಿಗಾ ವಹಿಸಬೇಕು. ವಿಶೇಷವಾಗಿ 5ನೇ ತರಗತಿ ಬಳಿಕ ಹಲವು ಮಕ್ಕಳು ವಿದ್ಯಾಭ್ಯಾಸ ಮುಂದುವರೆಸದೇ ಇರುವ ಬಗ್ಗೆ ಪರಿಶೀಲಿಸಬೇಕು. ಅಂತಹ ಮಕ್ಕಳನ್ನು ಮತ್ತೆ ಶಾಲೆಗೆ ಕರೆತರಲು ವಿಶೇಷ ದಾಖಲಾತಿ ಅಭಿಯಾನ ನಡೆಸಬೇಕು. ಇದೇ ರೀತಿ ಎಸ್‍ಎಸ್‍ಎಲ್‍ಸಿಯಲ್ಲಿ ಪರೀಕ್ಷೆಗೆ ಹೆಸರು ನೋಂದಾಯಿಸಿದ ಬಳಿಕ ಪರೀಕ್ಷೆಗೆ ಹಲವಾರು ವಿದ್ಯಾರ್ಥಿಗಳು ಹಾಜರಾಗದಿರಲು ಕಾರಣ ಪತ್ತೆ ಮಾಡಬೇಕು. ಜಿಲ್ಲೆಯಲ್ಲಿ ಪ್ರಸ್ತುತ ವರ್ಷ ಸಾವಿರಕ್ಕೂ ಅಧಿಕ ಮಕ್ಕಳು ಈ ರೀತಿ ಪರೀಕ್ಷೆಗೆ ಗೈರು ಹಾಜರಾಗಿರುವುದು ಕಳವಳಕಾರಿ ಎಂದರು.

ಜಿಲ್ಲೆಯಲ್ಲಿರುವ ಎಲ್ಲಾ ಶಾಲೆಗಳ ಆರ್‍ಟಿಸಿ ಸರಿಪಡಿಸಲು ಕ್ರಮ ಕೈಗೊಳ್ಳಬೇಕು. ಒಂದು ತಿಂಗಳ ಒಳಗಾಗಿ ಶಾಲೆಗಳ ಆರ್‍ಟಿಸಿ ಕುರಿತು ಮಾಹಿತಿಯನ್ನು ಸಲ್ಲಿಸುವಂತೆ ಜಿಲ್ಲಾಧಿಕಾರಿ ಡಾ. ಆರ್.ಸೆಲ್ವಮಣಿ ಅವರು ಸೂಚಿಸಿದರು.ಈ ಸಂದರ್ಭ ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಲ್.ವೈಶಾಲಿ, ಆಪ್ತ ಕಾರ್ಯದರ್ಶಿ ಎ.ಆರ್.ರವಿ, ಇಲಾಖೆಯ ಜಂಟಿ ನಿರ್ದೇಶಕ ಕೆಂಚೇಗೌಡ ಇಲಾಖೆಯ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

ಇದನ್ನೂ ಓದಿ: ಕುವೆಂಪು ವಿಶ್ವವಿದ್ಯಾಲಯ ಘಟಿಕೋತ್ಸವ : ಮಾಜಿ ಸಭಾಪತಿ ಡಿ.ಎಚ್. ಶಂಕರಮೂರ್ತಿ ಸೇರಿ ಆರು ಜನರಿಗೆ ಗೌರವ ಡಾಕ್ಟರೇಟ್

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.