ಶಿವಮೊಗ್ಗ: ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಪತ್ರಿಕಾ ವಿತರಕ ಸ್ಥಳದಲ್ಲೇ ಸಾವಿಗೀಡಾದ ಘಟನೆ ಸಾಗರದಲ್ಲಿ ನಡೆದಿದೆ. ಸಾಗರದ ಬೆಳಲಮಕ್ಕಿಯ ನಿವಾಸಿ ಗಣೇಶ್ (25) ಮೃತರು.
ಇಂದು ಮುಂಜಾನೆ ಗಣೇಶ್ ಸೈಕಲ್ನಲ್ಲಿ ಪೇಪರ್ ಹಾಕಲು ಹೋಗುವಾಗ ಕೆಎಸ್ಆರ್ಟಿಸಿ ಬಸ್ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಪರಿಣಾಮ ಗಣೇಶ್ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಹಿಂಬದಿ ಸವಾರ ರಾಹುಲ್ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಬೆಂಗಳೂರಿನಿಂದ ಸಾಗರ ಮಾರ್ಗವಾಗಿ ಕೆಎಸ್ಆರ್ಟಿಸಿ ಬಸ್ ಯಲ್ಲಾಪುರ ಕಡೆ ಹೋಗುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದೆ. ಮೃತರ ಆತ್ಮಕ್ಕೆ ಶಾಂತಿ ಸಿಗಲೆಂದು ಜಿಲ್ಲಾ ಪತ್ರಕರ್ತರು ಸಂತಾಪ ಸೂಚಿಸಿದ್ದಾರೆ.
ಇದನ್ನೂ ಓದಿ: ದಾವಣಗೆರೆ: ಒಂದೇ ಮನೆಗೆ ಎರಡು ಬಾರಿ ನುಗ್ಗಿ ನಾಯಿ ಹೊತ್ತೊಯ್ದ ಚಿರತೆ - ವಿಡಿಯೋ