ಶಿವಮೊಗ್ಗ: ಬಜರಂಗ ದಳದ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ ಸಂಬಂಧ ರಾಷ್ಟ್ರೀಯ ತನಿಖಾ ತಂಡ(ಎನ್ಐಎ)ದ ಹಿರಿಯ ಅಧಿಕಾರಿಗಳು ಶಿವಮೊಗ್ಗಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಒಟ್ಟು 8 ವಾಹನಗಳಲ್ಲಿ ಬುಧವಾರ ಸಂಜೆ ಹೊತ್ತಿಗೆ ಶಿವಮೊಗ್ಗ ನಗರಕ್ಕೆ ರಾಷ್ಟ್ರೀಯ ತನಿಖಾ ದಳದ ಹಿರಿಯ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಇಂದು ಪ್ರಕರಣದ ಆರೋಪಿಗಳ ಮನೆ ಸೇರಿದಂತೆ ಒಟ್ಟು 18 ಕಡೆಗಳಿಗೆ ಭೇಟಿ ನೀಡಲಿದ್ದಾರೆ. ಈಗಾಗಲೇ ಕೆಲವೆಡೆ ಭೇಟಿ ನೀಡಿದ್ದು, ಮಾಹಿತಿ ಕಲೆ ಹಾಕುತ್ತಿದ್ದಾರೆ.
ಈ ತಂಡದಲ್ಲಿ ಕೇರಳ, ಆಂಧ್ರ ಪ್ರದೇಶ, ತಮಿಳುನಾಡಿನ ಹಿರಿಯ ಅಧಿಕಾರಿಗಳು ಇದ್ದಾರೆ. ಹರ್ಷ ಹತ್ಯೆಯಲ್ಲಿ ವಿವಿಧ ಸಂಘಟನೆಗಳ ಕೈವಾಡ ಇದೆ ಎಂಬ ಆರೋಪ ಕೇಳಿ ಬಂದಿತ್ತು ಹಾಗೂ ರಾಷ್ಟ್ರೀಯ ತನಿಖಾ ದಳದಿಂದ ಈ ಪ್ರಕರಣದ ತನಿಖೆ ಆಗಬೇಕು ಎಂದು ಆಗ್ರಹಿಸಲಾಗಿತ್ತು. ಈ ಹಿನ್ನೆಲೆ ಸರ್ಕಾರ ಪ್ರಕರಣವನ್ನು ಎನ್ಐಎಗೆ ನೀಡಿತ್ತು.
ಇದನ್ನೂ ಓದಿ: ಬೆಳಗಾವಿಯಲ್ಲಿ ರಸ್ತೆ ಬದಿಯೇ ನೇತಾಡಿದ ಶವ: ಬೆಚ್ಚಿಬಿದ್ದ ವಾಯುವಿಹಾರಿಗಳು