ETV Bharat / state

ಕೆಎಸ್​ಆರ್​ಟಿಸಿ ಬಸ್​- ಕಾರು ಮುಖಾಮುಖಿ ಡಿಕ್ಕಿ.. 9 ಜನರಿಗೆ ಗಂಭೀರ ಗಾಯ - ಅಪಘಾತ

Road accident: ಚಿಕ್ಕಮಗಳೂರು ಜಿಲ್ಲೆ ಬೇಲೇನಹಳ್ಳಿ ಗ್ರಾಮದ ಬಳಿ ಕೆಎಸ್​ಆರ್​ಟಿಸಿ ಬಸ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಹಲವರು ಗಾಯಗೊಂಡಿದ್ದಾರೆ.

road accident
ಕೆಎಸ್​ಆರ್​ಟಿಸಿ ಬಸ್​- ಕಾರು ಮುಖಾಮುಖಿ ಡಿಕ್ಕಿ
author img

By ETV Bharat Karnataka Team

Published : Sep 12, 2023, 12:00 PM IST

ಶಿವಮೊಗ್ಗ/ಚಿಕ್ಕಮಗಳೂರು: ಕೆಎಸ್​ಆರ್​ಟಿಸಿ ಬಸ್ ಹಾಗೂ ಕಾರು ಮುಖಾಮುಖಿ ಡಿಕ್ಕಿಯಾಗಿ 9 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ಬೇಲೇನಹಳ್ಳಿ ಗ್ರಾಮದ ಬಳಿ ಇಂದು ಬೆಳಗಿನ ಜಾವ ಈ ಘಟನೆ ನಡೆದಿದೆ. ತರಿಕೆರೆಯಿಂದ ಭದ್ರಾವತಿ ಕಡೆಗೆ ಬರುತ್ತಿದ್ದ ಕಾರಿಗೆ ಬೆಂಗಳೂರು ಕಡೆ ಹೊರಟಿದ್ದ ಸಾರಿಗೆ ಬಸ್ ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ.

ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಕಾರಿನಲ್ಲಿದ್ದ 9 ಜನರಿಗೆ ಗಂಭೀರ ಗಾಯಗಳಾಗಿವೆ. ಇದರಿಂದ ರಾಷ್ಟ್ರೀಯ ಹೆದ್ದಾರಿ‌ 206ರಲ್ಲಿ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು. ಗಾಯಾಳುಗಳನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಗಾಯಾಳುಗಳು ಭದ್ರಾವತಿ ನಿವಾಸಿಗಳಾಗಿದ್ದು, ತರಿಕೆರೆಯಿಂದ ಭದ್ರಾವತಿಗೆ ವಾಪಸ್ ಆಗುವಾಗ ದುರ್ಘಟನೆ ನಡೆದಿದೆ. ಈ ಕುರಿತು ತರಿಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಇದನ್ನು ಓದಿ: ಸರಣಿ ಅಪಘಾತ.. ಸಂಪೂರ್ಣ ನಜ್ಜುಗುಜ್ಜಾದ ಕಾರು.. ಅದೃಷ್ಟವಶಾತ್​ ಪಾರಾದ ಚಾಲಕ: CCTV Video

ETV Bharat Logo

Copyright © 2024 Ushodaya Enterprises Pvt. Ltd., All Rights Reserved.