ETV Bharat / state

ಬಿಎಸ್​ವೈ, ಈಶ್ವರಪ್ಪ ಭಿನ್ನಾಭಿಪ್ರಾಯದಿಂದ ಜಿಲ್ಲೆಯ ಅಭಿವೃದ್ಧಿಗೆ ಹಿನ್ನಡೆ: ಹೆಚ್.ಎಸ್.ಸುಂದರೇಶ್ - ಭಿಪ್ರಾಯದಿಂದ ಜಿಲ್ಲೆಯ ಅಭಿವೃದ್ಧಿ

ಪಕ್ಷದಲ್ಲಿ ಬಗೆಹರಿಸಿಕೊಳ್ಳಬೇಕಾದ ವಿಷಯವನ್ನು ಸಾರ್ವಜನಿಕವಾಗಿ ರಾಜ್ಯಪಾಲರಿಗೆ ಪತ್ರ ಬರೆದಿರುವುದರಲ್ಲೇ ತಿಳಿಯುತ್ತೆ ಬಿಜೆಪಿ ಪಕ್ಷದಲ್ಲಿ ಆಂತರಿಕ ಗೊಂದಲ ಇದೆಯೆಂದು. ಇವರ ಭಿನ್ನಾಭಿಪ್ರಾಯದಿಂದ ಜಿಲ್ಲೆಯ ಅಭಿವೃದ್ಧಿ ಸಂಪೂರ್ಣ ಕುಂಠಿತವಾಗಿದೆ ಸುಂದರೇಶ್​ ಆರೋಪಿಸಿದರು.

ಹೆಚ್.ಎಸ್ ಸುಂದರೇಶ್
ಹೆಚ್.ಎಸ್ ಸುಂದರೇಶ್
author img

By

Published : Apr 6, 2021, 7:26 PM IST

ಶಿವಮೊಗ್ಗ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ನಡುವಿನ ಭಿನ್ನಾಭಿಪ್ರಾಯದಿಂದ ಜಿಲ್ಲೆಯ ಅಭಿವೃದ್ಧಿಗೆ ಹಿನ್ನಡೆಯಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್ ಸುಂದರೇಶ್ ಆರೋಪಿಸಿದರು.

ಸುದ್ದಿಗೊಷ್ಠಿ ನಡೆಸಿ ಮಾತನಾಡಿದ ಅವರು, ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪನವರು ಮುಖ್ಯಮಂತ್ರಿಗಳ ವಿರುದ್ಧ ರಾಜ್ಯಪಾಲರಿಗೆ ದೂರು ಸಲ್ಲಿಸಿದ್ದಾರೆ. ಪಕ್ಷದಲ್ಲಿ ಬಗೆಹರಿಸಿಕೊಳ್ಳಬೇಕಾದ ವಿಷಯವನ್ನು ಸಾರ್ವಜನಿಕವಾಗಿ ಪತ್ರ ಬರೆದಿರುವುದರಲ್ಲೇ ತಿಳಿಯುತ್ತೆ ಬಿಜೆಪಿ ಪಕ್ಷದಲ್ಲಿ ಆಂತರಿಕ ಗೊಂದಲ ಇದೆಯೆಂದು. ಇವರ ಭಿನ್ನಾಭಿಪ್ರಾಯಯಿಂದ ಜಿಲ್ಲೆಯ ಅಭಿವೃದ್ಧಿ ಸಂಪೂರ್ಣ ಕುಂಠಿತವಾಗಿದೆ ಎಂದರು.

ಸುದ್ಧಿಗೋಷ್ಠಿ

ಕಾಂಗ್ರೆಸ್ ಪಕ್ಷ ಜಾರಿಗೊಳಿಸಿರುವ ಅಭಿವೃದ್ಧಿ ಯೋಜನೆಗಳನ್ನೇ ಬಿಜೆಪಿ ಯೋಜನೆಗಳೆಂದು ಪ್ರಚಾರ ಮಾಡಿ ಗುದ್ದಲಿ ಪೂಜೆ ಮಾಡುತ್ತಿದ್ದಾರೆಯೇ ಹೊರತು ಆಡಳಿತಕ್ಕೆ ಬಂದ ನಂತರ ಯಾವುದೇ ಅಭಿವೃದ್ಧಿ ಆಗಿಲ್ಲ ಎಂದರು.

ನಂತರ ಮಹಾನಗರ ಪಾಲಿಕೆ ವಿರೋಧ ಪಕ್ಷದ ನಾಯಕಿ ಯಮುನ ರಂಗೇಗೌಡ ಮಾತನಾಡಿ, ಜಿಲ್ಲಾ ಉಸ್ತುವಾರಿ ಸಚಿವರು ನಿನ್ನೆ ಆಶ್ರಯ ಮನೆಗಳ ವೀಕ್ಷಣೆ ಕಾರ್ಯಕ್ರಮವನ್ನು ಬಿಜೆಪಿ ಸಮಾವೇಶದಂತೆ ನಡೆಸಿದ್ದಾರೆ. ಕೊರೊನಾ ಎರಡನೇ ಅಲೆ ಸಂದರ್ಭದಲ್ಲಿ ಇತಂಹ ದೊಡ್ಡ ಕಾರ್ಯಕ್ರಮ ಮಾಡುವ ಅವಶ್ಯಕತೆ ಇತ್ತಾ? ಕೋವಿಡ್ ಮಾರ್ಗಸೂಚಿ ಉಲ್ಲಂಘಿಸಿದ ಸಚಿವರ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಒತ್ತಾಯಿಸಿದರು.

ಇದನ್ನೂ ಓದಿ.. ಸಾರಿಗೆ ನೌಕರರು ಕರೆ ನೀಡಿರುವ ಮುಷ್ಕರಕ್ಕೆ ಯಾದಗಿರಿಯಲ್ಲಿ ಇಂದಿನಿಂದಲೇ ಬೆಂಬಲ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.