ಶಿವಮೊಗ್ಗ: ರಾಜ್ಯದಲ್ಲಿ ಬಿಜೆಪಿ ಜೊತೆ ಜೆಡಿಎಸ್ ವಿಲೀನ ಮಾಡಿಕೊಳ್ಳುವ ಕುರಿತು ಇದುವರೆಗೂ ಯಾವುದೇ ಚರ್ಚೆ ನಡೆದಿಲ್ಲ ಎಂದು ಸಚಿವ ಕೆ. ಎಸ್. ಈಶ್ವರಪ್ಪ ಹೇಳಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಯಾವ ಯಾವ ಪಕ್ಷಗಳು ವಿಲೀನ ಆಗ್ತಾವೆ ಅನ್ನೋದು ಆಯಾ ಪಕ್ಷಕ್ಕೆ ಬಿಟ್ಟ ವಿಚಾರ. ನಮಗೆ ಬೆಂಬಲ ಕೊಡುತ್ತೇವೆ ಅಂದ್ರೆ, ಬೆಂಬಲ ಪಡೆದುಕೊಳ್ಳುತ್ತೇವೆ. ಅದೇ ರೀತಿ ವಿಲೀನಕ್ಕೆ ಬರ್ತಾರೆ ಅಂದ್ರೆ ಮಾಡಿಕೊಳ್ಳುತ್ತೇವೆ. ಕಾಂಗ್ರೆಸ್ ಹಾಗೂ ಮುಸ್ಲಿಂ ಲೀಗ್ ಬಿಟ್ಟು ಉಳಿದವರ ಜೊತೆ ನಾವು ಹೊಂದಾಣಿಕೆ ಮಾಡಿಕೊಳ್ಳುತ್ತೇವೆ ಎಂದರು.
ಓದಿ:ಮಾರುಕಟ್ಟೆ ಶುಲ್ಕ ಹೆಚ್ಚಳಕ್ಕೆ ವಿರೋಧ : ಏಷ್ಯಾದ ಎರಡನೇ ಅತಿದೊಡ್ಡ ಎಪಿಎಂಸಿ ಸಂಪೂರ್ಣ ಸ್ಥಗಿತ
ಜ. 2 ಮತ್ತು 3 ರಂದು ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ:
ಬಿಜೆಪಿಯ ವಿಶೇಷ ಕಾರ್ಯಕಾರಿಣಿ ಸಭೆ ಜನವರಿ 2 ಮತ್ತು 3 ರಂದು ಶಿವಮೊಗ್ಗದಲ್ಲಿ ನಡೆಯಲಿದೆ ಎಂದು ಗ್ರಾಮೀಣಾಭಿವೃದ್ಧಿ ಖಾತೆ ಸಚಿವ ಕೆ.ಎಸ್. ಈಶ್ವರಪ್ಪ ತಿಳಿಸಿದ್ದಾರೆ. ವಿಶೇಷ ಸಭೆಯ ಕಚೇರಿ ಉದ್ಘಾಟಿಸಿ ಮಾತನಾಡಿದ ಅವರು, ಜನವರಿ 2 ರಂದು ಕೋರ್ ಕಮಿಟಿ ಸಭೆ ನಡೆಯಲಿದೆ. ಜನವರಿ 3 ರಂದು ರಾಜ್ಯ ಕಾರ್ಯಕಾರಿಣಿ ವಿಶೇಷ ಸಭೆ ಇದೆ. ಇದರ ಅಧ್ಯಕ್ಷತೆಯನ್ನು ಪಕ್ಷದ ರಾಜ್ಯಾಧ್ಯಕ್ಷ ನಳಿನ್ಕುಮಾರ್ ಕಟೀಲ್ ವಹಿಸಲಿದ್ದಾರೆ. ಕಾರ್ಯಕ್ರಮದ ಉದ್ಘಾಟನೆಯನ್ನು ಸಿಎಂ ಯಡಿಯೂರಪ್ಪ ಮಾಡಲಿದ್ದಾರೆ. ರಾಜಕೀಯ ತಿರುವು ತೆಗೆದುಕೊಳ್ಳುತ್ತಿರುವ ಸಂದರ್ಭದಲ್ಲಿ ವಿಶೇಷ ಕಾರ್ಯಕರಿಣಿ ಸಭೆ ನಡೆಯುತ್ತಿರುವುದು ಕುತೂಹಲಕ್ಕೆ ಕಾರಣವಾಗಿದೆ.