ಶಿವಮೊಗ್ಗ: ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಬಂಧನಕ್ಕೂ ಬಿಜೆಪಿಗೂ ಯಾವುದೇ ಸಂಬಂಧವಿಲ್ಲ ಎಂದು ಮುಜರಾಯಿ ಖಾತೆ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಸ್ಪಷ್ಟಪಡಿಸಿದ್ದಾರೆ.
ಶಿವಮೊಗ್ಗದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿಗೆ ಶಿವಕುಮಾರ್ರನ್ನು ಎದುರಿಸುವ ಅವಶ್ಯಕತೆ ಇಲ್ಲ. ಈಗಾಗಲೇ ಲೋಕಸಭಾ ಚುನಾವಣೆಯಲ್ಲಿ ಶಿವಕುಮಾರ್ ಅವರ ಪಕ್ಷವನ್ನು 26 ಸ್ಥಾನಗಳಿಂದ ಮಣಿಸಿ ಬಿಟ್ಟಿದ್ದೇವೆ. ಡಿ.ಕೆ.ಶಿವಕುಮಾರ್ ಅವರು ಕಾಂಗ್ರೆಸ್ ಪಕ್ಷದ ಮುಖಂಡರಾಗಿ, ಮಾಜಿ ಸಚಿವರಾಗಿ ಯೋಚಿಸಬೇಕಿದೆ ಎಂದರು.
ಇಡಿ ಅಕ್ರಮ ಸಂಪತ್ತು ಹೊಂದಿದವರ ಮೇಲೆ ಕ್ರಮ ತೆಗೆದುಕೊಳ್ಳುತ್ತದೆ. ಇಡಿ ಸ್ವಾಯತ್ತ ಸಂಸ್ಥೆಯಾಗಿದೆ ಎಂದು ಈ ಹಿಂದೆ ಕಾಂಗ್ರೆಸ್ನವರು ಹಾಗೂ ಸಿದ್ದರಾಮಯ್ಯನವರೇ ಹೇಳಿದ್ದಾರೆ. ಡಿ.ಕೆ.ಶಿವಕುಮಾರ್ ಅವರು ತಮ್ಮ ಬಂಧನಕ್ಕೆ ಬಿಜೆಪಿಯವರಿಗೆ ಧನ್ಯವಾದ ತಿಳಿಸಿದ್ದರ ಕುರಿತು ಕೋಟಾ ಶ್ರೀನಿವಾಸ ಪೂಜಾರಿ, ಅವರ ವ್ಯಂಗ್ಯ ಹೇಳಿಕೆಗೆ ಪ್ರತಿಕ್ರಿಯೆ ನೀಡಲ್ಲ ಎಂದರು. ಕಾಂಗ್ರೆಸ್ನವರ ಯಾವುದೇ ಹೇಳಿಕೆಗೆ ಪ್ರತಿಕ್ರಿಯೆ ನೀಡಲ್ಲ. ಡಿ.ಕೆ.ಶಿವಕುಮಾರ್ ಅವರ ಬಗ್ಗೆ ನಮ್ಮ ಪಕ್ಷದವರು ನೀಡಿದ ಹೇಳಿಕೆಯನ್ನು ಅವರು ವಾಪಸ್ ಪಡೆದುಕೊಂಡಿದ್ದಾರೆ. ಇಡಿ ಬಂಧನ ಯಾಕೆ ಆಯ್ತು ಅಂತ ಕಾಂಗ್ರೆಸ್ನವರು ಸೂಕ್ತವಾಗಿ ಯೋಚಿಸುವುದು ಒಳ್ಳೆಯದು ಎಂದರು.