ಶಿವಮೊಗ್ಗ: ನಿನ್ನೆ(ಮಂಗಳವಾರ) ಕೇಸರಿ ಧ್ವಜ ಹಾರಿಸಿದ್ದ ನಗರದ ಪ್ರಥಮ ದರ್ಜೆ ಕಾಲೇಜಿನಲ್ಲಿ ಇಂದು ಮುಂಜಾನೆ ಭಾರತದ ರಾಷ್ಟ್ರೀಯ ವಿದ್ಯಾರ್ಥಿಗಳ ಒಕ್ಕೂಟದ (ಎನ್ಎಸ್ಯುಐ) ಕಾರ್ಯಕರ್ತರು ರಾಷ್ಟ್ರಧ್ವಜ ಹಾರಿಸಿದರು.
ನಿನ್ನೆ ಬಾಪೂಜಿ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಿಜಾಬ್-ಕೇಸರಿ ಶಾಲು ವಿವಾದ ತಾರಕಕ್ಕೇರಿದ್ದು, ಕಲ್ಲು ತೂರಾಟವೂ ನಡೆದಿತ್ತು. ಈ ವೇಳೆ ಕೆಲವು ವಿದ್ಯಾರ್ಥಿಗಳು ಕಾಲೇಜು ಅವರಣದಲ್ಲಿನ ಧ್ವಜಸ್ತಂಭದಲ್ಲಿ ಕೇಸರಿ ಧ್ವಜ ಹಾರಿಸಿದ್ದರು. ನಂತರ ಇದನ್ನು ಪೊಲೀಸರು ತೆರವುಗೊಳಿಸಿದ್ದರು. ಇಂದು ಬೆಳಗ್ಗೆ ಎನ್ಎಸ್ಯುಐನ ರಾಜ್ಯ ಕಾರ್ಯದರ್ಶಿ ಚೇತನ್, ಮಧುಸೂಧನ್, ಜಿಲ್ಲಾಧ್ಯಕ್ಷ ವಿಜಯ್ ಸೇರಿದಂತೆ ಇನ್ನಿತರರು ಸೇರಿ ರಾಷ್ಟ್ರ ಧ್ವಜ ಹಾರಿಸಿದ್ದಾರೆ.
ಇದನ್ನೂ ಓದಿ: ಹಿಜಾಬ್-ಕೇಸರಿ ಸಂಘರ್ಷ : ಶಿವಮೊಗ್ಗ ಕಾಲೇಜು ಎದುರು ಪ್ರತಿಭಟನೆ ವೇಳೆ ಕಲ್ಲು ತೂರಾಟ, 7 ವಿದ್ಯಾರ್ಥಿಗಳಿಗೆ ಗಾಯ
ಈ ವಿಚಾರವನ್ನು ಕಾಲೇಜಿನ ವಾಚ್ಮ್ಯಾನ್ ಪ್ರಾಂಶುಪಾಲರಿಗೆ ತಿಳಿಸಿದ್ದಾರೆ. ತಕ್ಷಣ ಸ್ಥಳಕ್ಕಾಗಮಿಸಿದ ಪ್ರಾಂಶುಪಾಲ ಧಜಂಜಯ್, ಎಸ್ಪಿ ಲಕ್ಷ್ಮಿ ಪ್ರಸಾದ್ ಹಾಗೂ ಕೋಟೆ ಪೊಲೀಸ್ ಠಾಣೆ ಪಿಐ ಚಂದ್ರಶೇಖರ್ ಅವರಿಗೆ ಮಾಹಿತಿ ನೀಡಿದ್ದಾರೆ. ನಂತರ ರಾಷ್ಟ್ರ ಧ್ವಜವನ್ನು ಗೌರವಯುತವಾಗಿ ಕೆಳಗಿಳಿಸಿ, ಪೊಲೀಸರಿಗೆ ಒಪ್ಪಿಸಿದ್ದಾರೆ.