ETV Bharat / state

ಶಿವಮೊಗ್ಗದಲ್ಲಿ ಸಾಂಖ್ಯಿಕ ದಿನಾಚರಣೆ ಆಚರಣೆ - Shimoga latest news

ಇಂದು ಶಿವಮೊಗ್ಗದಲ್ಲಿ ಸಾಂಖ್ಯಿಕ ದಿನಾಚರಣೆ ಹಾಗೂ ಪ್ರೊ.ಪಿ.ಸಿ.ಮಹಾಲನೋಬಿಸ್ ಜನ್ಮದಿನಾಚರಣೆ ಆಚರಿಸಲಾಯಿತು.

Shimoga
Shimoga
author img

By

Published : Jun 29, 2020, 6:17 PM IST

ಶಿವಮೊಗ್ಗ: ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವಲ್ಲಿ ಅಂಕಿ ಅಂಶಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಉಪವಿಭಾಗಾಧಿಕಾರಿ ಟಿ.ಬಿ.ಪ್ರಕಾಶ್ ಅವರು ಹೇಳಿದರು.

ಜಿಲ್ಲಾಧಿಕಾರಿ ಕಚೇರಿ ನೂತನ ಸಭಾಂಗಣದಲ್ಲಿ ಸಾಂಖ್ಯಿಕ ದಿನಾಚರಣೆ ಹಾಗೂ ಪ್ರೊ.ಪಿ.ಸಿ.ಮಹಾಲನೋಬಿಸ್ ಜನ್ಮದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಯೋಜನೆಗಳನ್ನು ಅನುಷ್ಠಾನಗೊಳಿಸುವ ಮೊದಲು ಅಂಕಿ ಅಂಶಗಳನ್ನು ವೈಜ್ಞಾನಿಕವಾಗಿ ಸಂಗ್ರಹಿಸಿ ಅದನ್ನು ವಿಶ್ಲೇಷಿಸಲಾಗುತ್ತದೆ. ಸ್ವಾತಂತ್ರ್ಯ ಬಳಿಕ ದೇಶದಲ್ಲಿ ಆರ್ಥಿಕ ಯೋಜನೆಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವಲ್ಲಿ ಪ್ರೊ. ಪ್ರಶಾಂತಚಂದ್ರ ಮಹಾಲನೋಬಿಸ್ ಅವರ ಕೊಡುಗೆ ಅಪಾರವಾಗಿದೆ. ಈ ಹಿನ್ನೆಲೆಯಲ್ಲಿ ಅವರ ಜನ್ಮ ದಿನಾಚರಣೆಯನ್ನು ಸಾಂಖ್ಯಿಕ ದಿನಾಚರಣೆಯನ್ನಾಗಿ ಆಚರಿಸಲಾಗುತ್ತಿದೆ ಎಂದರು.

ಬಳಿಕ ಜಿಲ್ಲಾ ಸಾಂಖ್ಯಿಕ ಅಧಿಕಾರಿ ಬ್ರಿಜೆಟ್ ವರ್ಗಿಸ್ ಮಾತನಾಡಿ, ಮಹಾಲನೋಬಿಸ್ ಅವರು ಎರಡನೇ ಪಂಚವಾರ್ಷಿಕ ಯೋಜನೆಯ ಯಶಸ್ಸಿನ ರೂವಾರಿಯಾಗಿದ್ದಾರೆ. ಈ ಬಾರಿಯ ಸಾಂಖ್ಯಿಕ ದಿನಾಚರಣೆಯನ್ನು ಲಿಂಗ ಸಮಾನತೆ ಸಾಧಿಸಿ ಮಹಿಳೆಯರು ಮತ್ತು ಹೆಣ್ಣು ಮಕ್ಕಳನ್ನು ಸಶಕ್ತರನ್ನಾಗಿಸುವ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಧ್ಯೇಯದೊಂದಿಗೆ ಆಚರಿಸಲಾಗುತ್ತಿದೆ. ಅದರ ಜೊತೆಗೆ ಉತ್ತಮ ಆರೋಗ್ಯ, ಕುಟುಂಬ ವಿಮಾ ಸೌಲಭ್ಯ, ವಲಸೆ ಕಾರ್ಮಿಕರಿಗೆ ಸರ್ಕಾರದ ಸೌಲಭ್ಯಗಳ ತಲುಪಿಸುವಿಕೆ, ಕೌಶಲ್ಯ ಅಭಿವೃದ್ಧಿ ತರಬೇತಿ ಇತ್ಯಾದಿಗಳನ್ನು ಸಾಧಿಸುವ ಗುರಿಯನ್ನು ಹೊಂದಲಾಗಿದೆ ಎಂದು ಹೇಳಿದರು.

ಈ ವೇಳೆ ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಉಮಾ, ಜಿಲ್ಲಾ ಕೌಶಲ್ಯ ಅಭಿವೃದ್ಧಿ ಅಧಿಕಾರಿ ಗಣಪತಿ ನಾಯ್ಕ, ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ಈರಣ್ಣ ಪಂಚಾಳ, ಜಿಲ್ಲಾ ಕಾರ್ಮಿಕ ಅಧಿಕಾರಿ ವಿಶ್ವನಾಥ, ಜಿಲ್ಲಾ ಆಯುಷ್ ಅಧಿಕಾರಿ ಡಾ.ಪುಷ್ಪಾ ಮತ್ತಿತರ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದು,

ETV Bharat Logo

Copyright © 2025 Ushodaya Enterprises Pvt. Ltd., All Rights Reserved.