ಶಿವಮೊಗ್ಗ: ಬಾವಿ ಕಟ್ಟೆ ಮೇಲೆ ಕುಳಿತಿದ್ದ ವೇಳೆ ಆಯ ತಪ್ಪಿ ಬಾವಿಗೆ ಬಿದ್ದು ನರ್ಸಿಂಗ್ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಸಾಗರದ ತ್ಯಾಗರ್ತಿ ಗ್ರಾಮದಲ್ಲಿ ನಡೆದಿದೆ.
ಅಂಜಲಿ(20) ಮೃತ ವಿದ್ಯಾರ್ಥಿನಿ. ಈಕೆ ಇಂದು ಬೆಳಗ್ಗೆ ಬಾವಿ ಕಟ್ಟೆ ಮೇಲೆ ಕುಳಿತು ಓದುತ್ತಿದ್ದ ವೇಳೆ ಆಯ ತಪ್ಪಿ ಬಾವಿಗೆ ಬಿದ್ದಿದ್ದಾಳೆ. ತಕ್ಷಣ ಸ್ಥಳೀಯರು ಬಚಾವ್ ಮಾಡಲು ಯತ್ನ ಮಾಡಿದ್ದಾರೆ. ಆದರೆ ಅಷ್ಟೊತ್ತಿಗಾಗಲೇ ಯುವತಿ ಜೀವ ಕಳೆದುಕೊಂಡಿದ್ದಾಳೆ. ಸ್ಥಳಕ್ಕೆ ಸಾಗರ ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.