ಶಿವಮೊಗ್ಗ: ಕೃಷಿ ಉತ್ಪನ್ನ ಮಾರುಕಟ್ಟೆ ವ್ಯವಹಾರದಲ್ಲಿ ಜಾರಿಗೆ ತಂದಿದ್ದ ಮಾರುಕಟ್ಟೆ ಶುಲ್ಕವನ್ನು ಶೇ 0.35 ಕ್ಕೆ ಇಳಿಕೆ ಮಾಡಿದ ಸಿಎಂ ಯಡಿಯೂರಪ್ಪನವರಿಗೆ ಶಿವಮೊಗ್ಗ ಅಡಿಕೆ ವರ್ತಕರ ಸಂಘ ಅಭಿನಂದನೆ ಸಲ್ಲಿಸಿದೆ.
ಕೇಂದ್ರ ಸರ್ಕಾರದ ನೂತನ ಕಾಯ್ದೆಯ ಪ್ರಕಾರ ಎಪಿಎಂಸಿ ಮಾರುಕಟ್ಟೆಯಲ್ಲಿ ಶೇ 1 ರಷ್ಟು ಶುಲ್ಕ ಜಾರಿ ಮಾಡಲಾಗಿತ್ತು. ಅಲ್ಲದೆ ಎಪಿಎಂಸಿಯಿಂದ ಹೊರಗೆ ವ್ಯಾಪಾರ ಮಾಡುವವರಿಗೆ ಯಾವುದೇ ಶುಲ್ಕ ವಿಧಿಸುವಂತಿಲ್ಲ ಎಂಬ ಕಾಯ್ದೆ ಜಾರಿಗೆ ತರಲಾಗಿತ್ತು. ಇದರಿಂದ ಮಾರುಕಟ್ಟೆ ಬಿಟ್ಟು ಹೊರಗೆ ವ್ಯಾಪಾರ ಮಾಡುವ ಸಾಧ್ಯತೆ ಇದ್ದು, ಎಪಿಎಂಸಿಯ ಮೂಲಕ ಸರ್ಕಾರಕ್ಕೆ ಹೋಗುವ ತೆರಿಗೆ ಕಡಿಮೆಯಾಗುತ್ತದೆ.
ಇದನ್ನು ಶಿವಮೊಗ್ಗ ಅಡಿಕೆ ವರ್ತಕರ ಸಂಘ, ಜಿಲ್ಲಾ ಕೈಗಾರಿಕೆ ಮತ್ತು ವಾಣಿಜ್ಯೋದ್ಯಮ ಸಂಘಗಳು ಅಡಿಕೆ ಟಾಸ್ಕ್ ಪೋರ್ಸ್ನ ಅಧ್ಯಕ್ಷ ಆರಗ ಜ್ಞಾನೇಂದ್ರ ಹಾಗೂ ಸಂಸದ ಬಿ.ವೈ. ರಾಘವೇಂದ್ರರವರ ನೇತೃತ್ವದಲ್ಲಿ ನಿಯೋಗ ತೆರಳಿ ಎಪಿಎಂಸಿ ಮಾರುಕಟ್ಟೆಯ ಮೇಲೆ ಆಗುವ ದುಷ್ಪರಿಣಾಮಗಳು ಹಾಗೂ ತೆರಿಗೆ ವಂಚನೆಯ ಬಗ್ಗೆ ಮನವರಿಕೆ ಮಾಡಿದ ಮೇಲೆ ಮಾರುಕಟ್ಟೆಯಲ್ಲಿ ಇದ್ದ ಶೇ 1 ಶುಲ್ಕವನ್ನು ಶೇ 0.35 ಕ್ಕೆ ಇಳಿಕೆ ಮಾಡಿದ್ದಾರೆ. ಇದರಿಂದ ವ್ಯಾಪಾರಿಗಳಿಗೆ ಸಹಾಯವಾಗಲಿದೆ.
ಈ ನಿಟ್ಟಿನಲ್ಲಿ ನಿಯೋಗವು ಸಿಎಂ ಯಡಿಯೂರಪ್ಪ ಹಾಗೂ ಅವರ ಮಂತ್ರಿ ಮಂಡಲಕ್ಕೆ ಅಭಿನಂದನೆ ಸಲ್ಲಿಸಿದೆ. ಈ ವೇಳೆ ಆರ್ಯ ವೈಶ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಿ.ಎಸ್.ಅರುಣ್, ಅಡಿಕೆ ವರ್ತಕರ ಸಂಘದ ಅಧ್ಯಕ್ಷ ಶಂಕರಪ್ಪ ಸೇರಿ ಇತರರು ಹಾಜರಿದ್ದರು.