ಶಿವಮೊಗ್ಗ : ಶಿವಮೊಗ್ಗದ ಕಸ್ತೂರಬಾ ರಸ್ತೆಯ 62 ವರ್ಷದ ವ್ಯಕ್ತಿಯೊಬ್ಬರು ಇಂದು ಸಾವನ್ನಪ್ಪಿದ್ದಾರೆ. ಕಳೆದ ಎರಡು ದಿನಗಳ ಹಿಂದೆ ಇವರಿಗೆ ಕೊರೊನಾ ಸೋಂಕು ತಗುಲಿತ್ತು. ಇವರನ್ನು ಮೆಗ್ಗಾನ್ ಕೋವಿಡ್-19 ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.
ಇದರಿಂದ ಕಸ್ತೂರಬಾ ರಸ್ತೆಯನ್ನು ಸೀಲ್ಡೌನ್ ಮಾಡಲಾಗಿತ್ತು. ಮೃತ ವ್ಯಕ್ತಿಯು ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು. ಇವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.
ಈವರೆಗೂ ಎಂಟು ಮಂದಿ ಕೊರೊನಾದಿಂದ ಸಾವನ್ನಪ್ಪಿದ್ದಾರೆ.