ಶಿವಮೊಗ್ಗ: ಮುಖ್ಯಮಂತ್ರಿ ಯಡಿಯೂರಪ್ಪ ಅವರ ತವರು ಜಿಲ್ಲೆಯಲ್ಲಿ ಕೊರೊನಾಗೆ ಮತ್ತೊಂದು ಸಾವು ಸಂಭವಿಸಿದೆ. ಬೊಮ್ಮನಕಟ್ಟೆಯ 55 ವರ್ಷದ ಮಹಿಳೆ ಬಲಿಯಾಗಿದ್ದಾರೆ.
ಈ ಮಹಿಳೆ ಕಳೆದ 3 ದಿನಗಳ ಹಿಂದೆ ಕೊರೊನಾ ಸೋಂಕಿನಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಿಸದೇ ಇಂದು ಮೃತಪಟ್ಟಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಕೊರೊನಾಗೆ ಬಲಿಯಾದವರ ಸಂಖ್ಯೆ 15 ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಗುರುವಾರ ಇಬ್ಬರು ಸಾವನ್ನಪ್ಪಿದ್ದರು. ಕೊರೊನಾ ಮಹಾಮಾರಿ ಹೀಗೆ ರಣಕೇಕೆ ಹಾಕುತ್ತಿರುವುದು ಜನರ ಆತಂಕಕ್ಕೆ ಕಾರಣವಾಗಿದೆ.
ಜಿಲ್ಲೆಯಲ್ಲಿ ದಿನೇ ದಿನೆ ಸೋಂಕಿತರ ಸಂಖ್ಯೆ ಜೊತೆಗೆ ಸಾವಿನ ಸಂಖ್ಯೆ ಸಹ ಹೆಚ್ಚಾಗುತ್ತಿರುವುದರಿಂದ ಮಲೆನಾಡಿನ ಜನರು ಬೆಚ್ಚಿಬಿದ್ದಿದ್ದಾರೆ.