ETV Bharat / state

ಶಿವಮೊಗ್ಗದಲ್ಲಿ 'ಪಾಪು ಗಾಂಧಿ' ರಂಗ ಪಯಣಕ್ಕೆ ಚಾಲನೆ....

ಮಹಾತ್ಮ ಗಾಂಧೀಜಿಯವರ ಬದುಕು ಮತ್ತು ಚಿಂತನೆಯ ಬಗ್ಗೆ ಪ್ರತಿಯೊಬ್ಬರೂ ಅರಿತುಕೊಳ್ಳುವ ಅಗತ್ಯವಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಹೇಳಿದರು.

ಶಿವಮೊಗ್ಗದಲ್ಲಿ 'ಪಾಪು ಗಾಂಧಿ' ರಂಗ ಪಯಣ
ಶಿವಮೊಗ್ಗದಲ್ಲಿ 'ಪಾಪು ಗಾಂಧಿ' ರಂಗ ಪಯಣ
author img

By

Published : Dec 2, 2019, 7:03 AM IST

ಶಿವಮೊಗ್ಗ: ಮಹಾತ್ಮ ಗಾಂಧೀಜಿ ಅವರ ಬದುಕು ಮತ್ತು ಚಿಂತನೆಯ ಬಗ್ಗೆ ಪ್ರತಿಯೊಬ್ಬರೂ ಅರಿತುಕೊಳ್ಳುವ ಅಗತ್ಯವಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಹೇಳಿದರು. ನಗರದ ರಂಗಾಯಣದಲ್ಲಿ 'ಪಾಪು ಗಾಂಧಿ' ರಂಗ ಪಯಣಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಅಹಿಂಸೆಯ ಮೂಲಕ ಗಾಂಧೀಜಿಯವರು ದೇಶವನ್ನು ಕಟ್ಟಿದರು ಎಂದರು.

ದೈಹಿಕವಾಗಿ ದುರ್ಬಲರಾಗಿದ್ದ ಗಾಂಧಿ ತಮ್ಮ ಅಹಿಂಸೆ, ಸತ್ಯಾಗ್ರಹ ತತ್ವದ ಮೂಲಕ ದೇಶಕ್ಕೆ ಸ್ವಾತಂತ್ರ್ಯವನ್ನು ತಂದು ಕೊಟ್ಟರು. ಬಾಲ್ಯದಲ್ಲಿ ಸಾಮಾನ್ಯರಲ್ಲಿ ಒಬ್ಬರಾಗಿದ್ದ ಗಾಂಧೀಜಿಯವರು ಮಹಾತ್ಮರಾಗಿ ಬೆಳೆದು ನಿಂತರು ಎಂದರು. ತಮ್ಮ ಬದುಕಿನ ಮುಖಾಂತರ ದೇಶಕ್ಕೆ ಮಾರ್ಗದರ್ಶನ ನೀಡಿದ ಗಾಂಧೀಜಿಯವವರ ಬಗ್ಗೆ ನಿರಂತರವಾಗಿ ಅರಿವು ಮೂಡಿಸುವ ಕಾರ್ಯಗಳು ನಡೆಯಬೇಕಾಗಿದೆ ಎಂದು ಹೇಳಿದರು.

ಇದೇ ವೇಳೆ ಕುವೆಂಪು ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಕೇಶವ ಶರ್ಮಾ ಮಾತನಾಡಿ, ಗಾಂಧೀಜಿಯವರ ವಿಚಾರಧಾರೆಗಳನ್ನು ಮನನ ಮಾಡುವ ಅಗತ್ಯ ಇದೆ ಎಂದು ಪ್ರತಿಪಾದಿಸಿದರು.

ರಂಗ ಸಮಾಜದ ಸದಸ್ಯ ಆರ್.ಎಸ್. ಹಾಲಸ್ವಾಮಿ, ಶಿವಮೊಗ್ಗ ರಂಗಾಯಣ ಆಡಳಿತಾಧಿಕಾರಿ ಶಫಿ ಸಾದುದ್ದೀನ್, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಹೆಚ್. ಮಂಜುನಾಥ್, ಜಿಲ್ಲಾ ಸಮಾಜ ಕಲ್ಯಾಣಧಿಕಾರಿ ಹೆಚ್.ವಿ. ಮಂಜುನಾಥ್, ಕನ್ನಡ ಮತ್ತು ಸಂಸ್ಕತಿ ಇಲಾಖೆ ಸಹಾಯಕ ನಿರ್ದೇಶಕ ಹೆಚ್. ಉಮೇಶ್ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.

ಇನ್ನು ಹಿರಿಯ ಸಾಹಿತಿ ಬೊಳುವಾರು ಮಹಮ್ಮದ್ ಕುಂಞ ಅವರ ಕೃತಿ ಆಧಾರಿತ ನಾಟಕ 'ಪಾಪು ಗಾಂಧಿ', ಡಿಸೆಂಬರ್ 7ರವರೆಗೆ ಶಿವಮೊಗ್ಗ ರಂಗಾಯಣದಲ್ಲಿ ಪ್ರದರ್ಶನಗೊಳ್ಳಲಿದೆ. ಬೆಳಗ್ಗೆ 10.30ಕ್ಕೆ ಹಾಗೂ ಮಧ್ಯಾಹ್ನ 2.30ಕ್ಕೆ ಉಚಿತ ಪ್ರದರ್ಶನವಿದ್ದು, ಜನವರಿ 4ರವರೆಗೆ ಜಿಲ್ಲೆಯ ಎಲ್ಲ ತಾಲೂಕುಗಳ ಶಾಲಾ ಕಾಲೇಜುಗಳಲ್ಲಿ ನಾಟಕ ಪ್ರದರ್ಶನ ನಡೆಯಲಿದೆ.

Intro:`ಶಿವಮೊಗ್ಗ,

ಪಾಪು ಗಾಂಧಿ’ ರಂಗ ಪಯಣಕ್ಕೆ ಚಾಲನೆ

ಗಾಂಧೀಜಿ ಬದುಕು ಚಿಂತನೆ ಪ್ರತಿಯೊಬ್ಬರೂ ಅರಿತುಕೊಳ್ಳುವ ಅಗತ್ಯವಿದೆ: ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್

ಅಹಿಂಸೆಯ ಮೂಲಕ ದೇಶವನ್ನು ಕಟ್ಟಿದ ಮಹಾತ್ಮಾ ಗಾಂಧೀಜಿ ಅವರ ಬದುಕು ಮತ್ತು ಚಿಂತನೆ ಬಗ್ಗೆ ಪ್ರತಿಯೊಬ್ಬರೂ ಅರಿತುಕೊಳ್ಳುವ ಅಗತ್ಯವಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ತಿಳಿಸಿದರು.

ಶಿವಮೊಗ್ಗ ರಂಗಾಯಣದಲ್ಲಿ `ಪಾಪು ಗಾಂಧಿ’ ರಂಗ ಪಯಣಕ್ಕೆ ಚಾಲನೆ ನೀಡಿ ಮಾತನಾಡಿದರು.

ದೈಹಿಕವಾಗಿ ದುರ್ಬಲರಾಗಿದ್ದ ಗಾಂಧಿ ತಮ್ಮ ಅಹಿಂಸೆ, ಸತ್ಯಾಗ್ರಹ ತತ್ವದ ಮೂಲಕ ದೇಶಕ್ಕೆ ಸ್ವಾತಂತ್ರ್ಯವನ್ನು ತಂದು ಕೊಟ್ಟರು. ಬಾಲ್ಯದಲ್ಲಿ ಸಾಮಾನ್ಯರಲ್ಲಿ ಒಬ್ಬರಾಗಿದ್ದ ಗಾಂಧೀಜಿ ಅವರು ಮಹಾತ್ಮಾರಾಗಿ ಬೆಳೆದು ನಿಂತರು. ತನ್ನ ಬದುಕಿನ ಮುಖಾಂತರ ದೇಶಕ್ಕೆ ಮಾರ್ಗದರ್ಶನ ನೀಡಿದ ಗಾಂಧೀಜಿ ಅವರ ಬಗ್ಗೆ ನಿರಂತರವಾಗಿ ಅರಿವು ಮೂಡಿಸುವ ಇಂತಹ ಕಾರ್ಯಗಳು ನಡೆಯಬೇಕಾಗಿದೆ ಎಂದು ಹೇಳಿದರು.

ಹಿರಿಯ ಸಾಹಿತಿ ಬೊಳುವಾರು ಮಹಮ್ಮದ್ ಕುಂಞ ಅವರು ಕೃತಿ ಆಧಾರಿತ ನಾಟಕ ಪಾಪು ಗಾಂಧಿ ಡಿಸೆಂಬರ್ 2ರಿಂದ 7ರವರೆಗೆ ಶಿವಮೊಗ್ಗ ರಂಗಾಯಣದಲ್ಲಿ ಪ್ರದರ್ಶನಗೊಳ್ಳಲಿದೆ. ಬೆಳಿಗ್ಗೆ 10.30ಕ್ಕೆ ಹಾಗೂ ಮಧ್ಯಾಹ್ನ 2.30ಕ್ಕೆ ಉಚಿತ ಪ್ರದರ್ಶನವಿದೆ. ಆ ಬಳಿಕ ಜನವರಿ 4ರವರೆಗೆ ಜಿಲ್ಲೆಯ ಎಲ್ಲಾ ತಾಲೂಕುಗಳ ಶಾಲಾ ಕಾಲೇಜುಗಳಲ್ಲಿ ನಾಟಕ ಪ್ರದರ್ಶನ ನಡೆಯಲಿದೆ.

ಕುವೆಂಪು ವಿಶ್ವವಿದ್ಯಾಲಯದ ಕನ್ನಡ ಭಾಷೆ ಪ್ರಾಧ್ಯಾಪಕ ಕೇಶವ ಶರ್ಮಾ ಅವರು ಮಾತನಾಡಿ, ಗಾಂಧೀಜಿ ಅವರ ವಿಚಾರಧಾರೆಗಳನ್ನು ಮತ್ತೆ ಮತ್ತೆ ಮನನ ಮಾಡುವ ಜರೂರತ್ತಿದೆ. ಪಾಪು ಗಾಂಧಿ ನಾಟಕ ವಿದ್ಯಾರ್ಥಿ ಸಮುದಾಯದಲ್ಲಿ ಗಾಂಧೀಜಿ ಅವರ ಕುರಿತಾದ ಅರಿವನ್ನು ವಿಸ್ತರಿಸುವ ಕಾರ್ಯವನ್ನು ಮಾಡಲಿದೆ ಎಂದು ಶುಭ ಹಾರೈಸಿದರು. ರಂಗ ಸಮಾಜದ ಸದಸ್ಯ ಆರ್.ಎಸ್.ಹಾಲಸ್ವಾಮಿ ಅವರು ಮುಖ್ಯ ಅತಿಥಿಯಾಗಿ ಮಾತನಾಡಿದರು.

ಶಿವಮೊಗ್ಗ ರಂಗಾಯಣ ಆಡಳಿತಾಧಿಕಾರಿ ಶಫಿ ಸಾದುದ್ದೀನ್ ಸ್ವಾಗತಿಸಿದರು. ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಹೆಚ್.ಮಂಜುನಾಥ್, ಜಿಲ್ಲಾ ಸಮಾಜ ಕಲ್ಯಾಣಧಿಕಾರಿ ಹೆಚ್.ವಿ.ಮಂಜುನಾಥ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಹೆಚ್.ಉಮೇಶ್ ಉಪಸ್ಥಿತರಿದ್ದರು.

ಭೀಮಾನಾಯ್ಕ ಎಸ್ ಶಿವಮೊಗ್ಗBody:ಭೀಮಾನಾಯ್ಕ ಎಸ್ ಶಿವಮೊಗ್ಗConclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.