ETV Bharat / state

ಶರತ್ ಬಚ್ಚೇಗೌಡ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ರೆ ಶಿಸ್ತು ಕ್ರಮ: ಈಶ್ವರಪ್ಪ - ವಿಧಾನಸಭಾ ಉಪ ಚುನಾವಣೆ

ಶರತ್ ಬಚ್ಚೇಗೌಡ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿದರೆ ಅವರ ವಿರುದ್ಧ ಪಕ್ಷ ಶಿಸ್ತು ಕ್ರಮ ಕೈಗೊಳ್ಳುತ್ತದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ ಗುಡುಗಿದ್ದಾರೆ.

Eshwarappa , ಈಶ್ವರಪ್ಪ
author img

By

Published : Nov 17, 2019, 6:17 PM IST

ಶಿವಮೊಗ್ಗ : ಶರತ್ ಬಚ್ಚೇಗೌಡ ತಮ್ಮ ನಾಮಪತ್ರವನ್ನು ವಾಪಸ್ ಪಡೆದುಕೊಳ್ಳಲು ಇನ್ನೂ ಸಮಯವಿದೆ. ಒಂದು ವೇಳೆ ನಾಮಪತ್ರ ವಾಪಸ್ ಪಡೆಯದೆ ಬಂಡಾಯವಾಗಿ ಸ್ಪರ್ಧಿಸಿದರೆ ಪಕ್ಷ ಶಿಸ್ತು ಕ್ರಮ ಕೈಗೊಳ್ಳಲಿದೆ ಎಂದು ಸಚಿವ ಈಶ್ವರಪ್ಪ ಎಚ್ಚರಿಸಿದರು.

ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ

ನಗರದಲ್ಲಿ ಮಾತನಾಡಿದ ಸಚಿವರು, ನಾಳೆ ನಮ್ಮ ಅಭ್ಯರ್ಥಿ ನಾಮಪತ್ರ ಸಲ್ಲಿಕೆ ಮಾಡುತ್ತಿದ್ದು, ಅಥಣಿಗೆ ಹೋಗಿ ಪ್ರಚಾರ ಕಾರ್ಯದಲ್ಲಿ ಭಾಗವಹಿಸುತ್ತಿದ್ದೇನೆ. ಈಗಾಗಲೇ ನಮ್ಮ ಅಭ್ಯರ್ಥಿಗಳು ಚುನಾವಣಾ ಪ್ರಚಾರ ಕಾರ್ಯದಲ್ಲಿ ತೊಡಗಿದ್ದು ಹೊಸಕೋಟೆ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲೂ ನಾವು ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

'ಟಿಕೆಟ್ ಹಂಚಿಕೆ ವಿಷಯದಲ್ಲಿ ಯಾವುದೇ ಅಸಮಾಧಾನವಿಲ್ಲ'
ಲಕ್ಷ್ಮಣ ಸವದಿಯವರಿಗೆ ಇನ್ನೂ ಅಸಮಾಧಾನವಿದೆ ಎಂಬ ಪ್ರಶ್ನೆಗೆ ಉತ್ತರಿಸಿ, ಟಿಕೆಟ್ ವಿಷಯದಲ್ಲಿ ಸವದಿ ಅವರಿಗೆ ಯಾವುದೇ ಅಸಮಾಧಾನ ಇಲ್ಲ. ಅವರ ನೇತೃತ್ವದಲ್ಲಿಯೇ ಅಥಣಿ ಕ್ಷೇತ್ರದಲ್ಲಿ ಅಭ್ಯರ್ಥಿ ಮಹೇಶ್ ಕುಮಟಳ್ಳಿ ಪರ ಪ್ರಚಾರ ನಡೆಸುತ್ತೇವೆ. ಎಲ್ಲರೂ ಎಲ್ಲಾ ಸಭೆಗಳಿಗೂ ಹೋಗಬೇಕು ಎಂಬ ನಿಯಮವಿಲ್ಲ ಎಂದರು.

Intro:ಶರತ್ ಬಚ್ಚೆಗೌಡ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿದರೆ , ಪಕ್ಷ ಶಿಸ್ತಿನ ಕ್ರಮ ಜರುಗಿಸುತ್ತದೆ: ಸಚಿವ ಈಶ್ವರಪ್ಪ.

ಶಿವಮೊಗ್ಗ : ಶರತ್ ಬಚ್ಚೇಗೌಡ ತಮ್ಮ ನಾಮಪತ್ರವನ್ನು ವಾಪಸ್ ಪಡೆದುಕೊಳ್ಳಬೇಕು. ನಾಮಪತ್ರ ವಾಪಸ್ ಪಡೆಯಲು ಇನ್ನು ಸಮಯವಿದೆ. ಒಂದು ವೇಳೆ ನಾಮಪತ್ರ ವಾಪಸ್ ಪಡೆಯದೇ ಬಂಡಾಯವಾಗಿ ಸ್ಪರ್ಧಿಸಿದರೆ ಪಕ್ಷ ಶಿಸ್ತು ಕ್ರಮ ಕೈಗೊಳ್ಳಲಿದೆ ಎಂದು ಸಚಿವ ಈಶ್ವರಪ್ಪ ತಿಳಿಸಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಹೊಸಕೋಟೆಯಲ್ಲಿ ಬಿಜೆಪಿ ಅಭ್ಯರ್ಥಿ ಎಂದು ಎಂಟಿಬಿ ನಾಗರಾಜ್ ರವರನ್ನು ಘೋಷಿಸಿದೆ.Body:ರಾಜ್ಯದಲ್ಲಿ 15 ವಿಧಾನ ಸಭಾ ಕ್ಷೇತ್ರದಲ್ಲಿ ಉಪ ಚುನಾವಣೆ ನಡೆಯುತ್ತಿದ್ದು, ನಾಳೆ ಅಥಣಿ ಕ್ಷೇತ್ರದಿಂದ ಚುನಾವಣಾ ಪ್ರಚಾರ ನಡೆಸುವುದಾಗಿ ತಿಳಿಸಿದರು. ಟಿಕೇಟ್ ಹಂಚಿಕೆ ವಿಚಾರದಲ್ಲಿ ಪಕ್ಷದಲ್ಲಿ ಯಾವುದೇ ಅಸಮಾಧಾನವಿಲ್ಲ.Conclusion: ಟಿಕೇಟ್ ಹಂಚಿಕೆ ವಿಚಾರದಲ್ಲಿ ಪಕ್ಷದಲ್ಲಿ ಯಾವುದೇ ಅಸಮಾಧಾನವಿಲ್ಲ. ಟಿಕೇಟ್ ಹಂಚಿಕೆ ವಿಷಯದಲ್ಲಿ ಲಕ್ಷ್ಮಣ ಸವದಿ ಅವರಿಗೆ ಯಾವುದೇ ಅಸಮಾಧಾನ ಇಲ್ಲ. ಸವದಿ‌ ನೇತೃತ್ವದಲ್ಲಿಯೇ ಅಥಣಿ ಕ್ಷೇತ್ರದಲ್ಲಿ ಅಭ್ಯರ್ಥಿ ಮಹೇಶ್ ಕುಮಟಳ್ಳಿ ಪರ ಪ್ರಚಾರ ನಡೆಸುತ್ತೇವೆ ಎಂದರು. ಅಲ್ಲದೇ ಅಥಣಿ ಸೇರಿದಂತೆ 15 ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಜಯ ಗಳಿಸುತ್ತಾರೆ ಎಂದರು.

ಬೈಟ್. ಕೆ.ಎಸ್.ಈಶ್ವರಪ್ಪ, ಗ್ರಾಮೀಣಾಭಿವೃದ್ಧಿ ಸಚಿವ.
ETV Bharat Logo

Copyright © 2024 Ushodaya Enterprises Pvt. Ltd., All Rights Reserved.