ಶಿವಮೊಗ್ಗ: ಅಮೀರ್ ಅಹ್ಮದ್ ಸರ್ಕಲ್, ಗೋಪಿ ವೃತ್ತ ಹಾಗೂ ಅಶೋಕ ವೃತ್ತದ ಬಳಿ ಮಾಸ್ಕ್ ಧರಿಸದೆ ತಿರುಗಾಡುತ್ತಿದ್ದ ವಾಹನ ಸವಾರರಿಗೆ ಮಹಾನಗರ ಪಾಲಿಕೆ ಅಧಿಕಾರಿಗಳು ತಲಾ ₹ 200 ದಂಡ ವಿಧಿಸಿ, ಬಿಸಿ ಮುಟ್ಟಿಸಿದರು.
ರಾಜ್ಯದಲ್ಲಿ ಈಗಾಗಲೇ ಕೊರೊನಾ ಸೋಂಕಿತರ ಸಂಖ್ಯೆ 50 ಸಾವಿರ ದಾಟಿದೆ. ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಮತ್ತು ಸಾಮಾಜಿಕ ಅಂತರ ಪಾಲನೆ ಮಾಡಬೇಕು ಎಂದು ಸರ್ಕಾರ ಸೂಚಿಸಿದೆ. ಆದರೂ ಅದನ್ನು ಲೆಕ್ಕಿಸದೆ ಓಡಾಡುವ ಮೂಲಕ ಕೆಲವರು ಸರ್ಕಾರದ ನಿಯಮಗಳನ್ನು ಉಲ್ಲಂಘಿಸುತ್ತಿದ್ದಾರೆ. ಇದು ಬೇಜವಾಬ್ದಾರಿತನಕ್ಕೆ ಸಾಕ್ಷಿಯಾಗಿದೆ.