ETV Bharat / state

ಕೋವಿಡ್ ಮಾರ್ಗಸೂಚಿ ಪಾಲಿಸುವ ಮೂಲಕ ಆರೋಗ್ಯ ಕಾಪಾಡಿಕೊಳ್ಳಿ: ಡಾ.ರಾಜೇಶ ಸುರಗಿಹಳ್ಳಿ - Shimoga health department

ಹಬ್ಬ ಹರಿದಿನಗಳ ವೇಳೆ, ಜನರು ಕಡ್ಡಾಯವಾಗಿ ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸುವ ಮೂಲಕ ತಮ್ಮ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಜಿಲ್ಲಾ ಆರೋಗ್ಯಾಧಿಕಾರಿ ಜನರಲ್ಲಿ ಮನವಿ ಮಾಡಿದ್ದಾರೆ.

Rajesh suragihalli
Rajesh suragihalli
author img

By

Published : Oct 23, 2020, 7:57 PM IST

ಶಿವಮೊಗ್ಗ: ಮುಂಬರುವ ಹಬ್ಬ ಹರಿದಿನಗಳ ಸಂದರ್ಭದಲ್ಲಿ ಸರ್ಕಾರದ ಆರೋಗ್ಯ ಮಾರ್ಗಸೂಚಿ ಪಾಲಿಸುವ ಮೂಲಕ ಆರೋಗ್ಯ ಕಾಪಾಡಿಕೊಳ್ಳುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಶ ಸುರಗಿಹಳ್ಳಿ ಅವರು ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.

ಹವಾಮಾನ ಇಲಾಖೆಯ ಮಾಹಿತಿಯಂತೆ ರಾಜ್ಯದಲ್ಲಿ ಇನ್ನು ಎರಡು ಮೂರು ದಿನಗಳು ಹೆಚ್ಚು ಮಳೆಯಾಗುವ ನೀರಿಕ್ಷೆಯಿದ್ದು, ಇಂತಹ ವಾತಾವರಣದಲ್ಲಿ ಕೋವಿಡ್ ವೈರಸ್ ಹರಡುವಿಕೆಗೆ ಹೆಚ್ಚಿರುತ್ತದೆ. ಅಷ್ಟೇ ಅಲ್ಲದೆ ಕೊರೊನಾ ಜೊತೆಗೆ ಇತರ ಸಾಂಕ್ರಾಮಿಕ ರೋಗಗಳು ಹಡರುವ ಸಂಭವವಿರುತ್ತದೆ. ಇಂತಹ ವೇಳೆ, ಜನರು ಅಗತ್ಯವಿರುವ ಎಲ್ಲ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಅವರು ಮನವಿ ಮಾಡಿದ್ದಾರೆ.

ಹಬ್ಬ ಹರಿದಿನಗಳನ್ನು ಸರಳವಾಗಿ ಆಚರಣೆ ಮಾಡುವ ನೂಲಕ ಜನಸಂದಣಿಯಾಗದಂತೆ ನೋಡಿಕೊಳ್ಳಬೇಕು. ಅನಗತ್ಯ ತಿರುಗಾಡುವುದನ್ನು ಕಡಿಮೆ ಮಾಡಿ, ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ತಿಳಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.