ಶಿವಮೊಗ್ಗ: ಮುಂಬೈನಿಂದ ಬಂದಿದ್ದ ಜನರನ್ನು ಕ್ವಾರಂಟೈನ್ ಮಾಡಲು ಮುಂದಾದ ವೇಳೆ ಅಧಿಕಾರಿಗಳಿಗೆ ಅಡ್ಡಿಪಡಿಸಿದ್ದ ಜನರ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ಮುಂಬೈನಿಂದ ಜಿಲ್ಲೆಗೆ ಬಂದಿದ್ದ ಜನರನ್ನು ಬಾಪೂಜಿ ನಗರದಲ್ಲಿರುವ ಸಮಾಜ ಕಲ್ಯಾಣ ಹಾಸ್ಟೆಲ್ನಲ್ಲಿ ಕ್ವಾರಂಟೈನ್ ಮಾಡಲು ಅಧಿಕಾರಿಗಳು ಮುಂದಾಗಿದ್ದರು. ಈ ವೇಳೆ ಕ್ವಾರಂಟೈನ್ಗೆ ಮಾಡಲು ಅಲ್ಲಿನ ಜನರು ಅಡ್ಡಿ ಪಡಿಸಿದ್ದರು. ಈ ವೇಳೆ ಪೊಲೀಸರು ಜನರ ಮೇಲೆ ಲಾಠಿ ಚಾರ್ಜ್ ಮಾಡಿದ್ದಾರೆ.