ಶಿವಮೊಗ್ಗ: ದೇಶಾದ್ಯಂತ ಕಳೆದ ಹತ್ತು ದಿನಗಳಿಂದ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆಯಾಗಿದ್ದರಿಂದ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕರ್ತರು ಜಿಲ್ಲಾಧಿಕಾರಿ ಕಛೇರಿ ಎದುರು ಪ್ರತಿಭಟನೆ ನಡೆಸಿದರು.
![shimogga](https://etvbharatimages.akamaized.net/etvbharat/prod-images/kn-smg-03-youth-congress-protest-ka10011_17062020133416_1706f_00999_64.jpg)
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಇಳಿಕೆಯಾಗಿದ್ದರೂ ಕೇಂದ್ರ ಸರ್ಕಾರ ಅಬಕಾರಿ ಸುಂಕವನ್ನು ಹೆಚ್ಚಿಸಿ ಜನ ಸಾಮಾನ್ಯರ ಮೇಲೆ ಹೊರೆ ಹಾಕುತ್ತಿದೆ ಕಾರ್ಯಕರ್ತರು ದೂರಿದರು.
ಕೊರೊನಾದಿಂದ ಜನರು ತತ್ತರಿಸಿರುವಾಗ ಕೇಂದ್ರ ಸರ್ಕಾರ ದರ ಏರಿಕೆ ನೀತಿ ಸರಿಯಲ್ಲ. ಹಾಗಾಗಿ ತಕ್ಷಣವೇ ದರ ಇಳಿಕೆ ಮಾಡಿ ಜನರನ್ನು ತೊಂದರೆಯಿಂದ ಪಾರು ಮಾಡಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ದೇಶದ ಜನರ ಪರವಾಗಿ ರಸ್ತೆಗಿಳಿದು ಹೋರಾಟ ಮಾಡಬೇಕಾಗುತ್ತದೆ ಎಂದು ಪ್ರತಿಭಟನೆ ನಡೆಸಲಾಗುವುದು ಎಂದು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.