ಶಿವಮೊಗ್ಗ: ಹೆಲ್ಮೆಟ್ ಧರಿಸದೆ ವಾಹನ ಚಲಾಯಿಸುವವರ ವಿರುದ್ಧ ಜಿಲ್ಲಾ ಪೊಲೀಸ್ ಕಠಿಣ ಕ್ರಮ ತೆಗೆದುಕೊಂಡಿದ್ದು, ಸಂಚಾರಿ ಪೊಲೀಸರು ಕಾರ್ಯಾಚರಣೆ ನಡೆಸಿ, ಶಿವಮೊಗ್ಗ ಹಾಗೂ ಭದ್ರಾವತಿ ನಗರದಲ್ಲಿ ಕೇವಲ ನಾಲ್ಕು ದಿನದಲ್ಲಿ 1 ಲಕ್ಷದ 90,000 ದಂಡ ಶುಲ್ಕ ಸಂಗ್ರಹಿಸಿದ್ದಾರೆ.
ಸಂಚಾರಿ ಪೊಲೀಸರು ಅಕ್ಟೋಬರ್ 14 ರಿಂದ 17ರವರೆಗೆ ಈ ಕಾರ್ಯಾಚರಣೆ ನಡೆಸಿದ್ದಾರೆ.
ಕಳೆದ ವಾರ ಜಿಲ್ಲಾ ಪೊಲೀಸರು ಹೆಲ್ಮೆಟ್ ಕುರಿತು ಶಿವಮೊಗ್ಗ ಹಾಗೂ ಭದ್ರಾವತಿಯಲ್ಲಿ ವಿಶೇಷ ಜಾಗೃತಿ ಜಾಥಾ ನಡೆಸಿದ್ದರು. ಹೀಗಿದ್ದರೂ ಕೂಡ ಸವಾರರು ಸಂಚಾರಿ ನಿಯಮ ಉಲ್ಲಂಘನೆ ಮಾಡುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.