ಶಿವಮೊಗ್ಗ: ಪ್ರತಿ ವರ್ಷದಂತೆ ಈ ಬಾರಿ ಕೂಡ ಪೊಲೀಸ್ ಇಲಾಖೆ ವತಿಯಿಂದ ಮೂರು ದಿನಗಳ ಕಾಲ ಡಿಎಆರ್ ಮೈದಾನದಲ್ಲಿ ವಾರ್ಷಿಕ ಕ್ರೀಡಾಕೂಟ ಆಯೋಜಿಸಲಾಗಿದ್ದು, ಜಿಲ್ಲಾ ಮತ್ತು ಸತ್ರ ನ್ಯಾಯಧೀಶ ಮುಸ್ತಫಾ ಹುಸೇನ್ ಚಾಲನೆ ನೀಡಿದರು.
ಶಿವಮೊಗ್ಗ, ಭದ್ರಾವತಿ, ತೀರ್ಥಹಳ್ಳಿ, ಸಾಗರ, ಶಿಕಾರಿಪುರ ಸೇರಿದಂತೆ ಆರು ವಿಭಾಗಗಳ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಕ್ರೀಡಾಕೂಟದಲ್ಲಿ ಪಾಲ್ಗೊಂಡು ವಿವಿಧ ಕ್ರೀಡೆಗಳಲ್ಲಿ ಸ್ಫರ್ಧಿಸಿದರು. ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದ ನ್ಯಾಯಧೀಶ ಮುಸ್ತಫಾ ಹುಸೇನ್, ಕೋವಿಡ್ ಸಂದರ್ಭದಲ್ಲಿ ಪೊಲೀಸರು ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿ ರಾತ್ರಿ ಹಗಲೆನ್ನದೆ ಕೆಲಸ ಮಾಡಿದ್ದಾರೆ. ಸಂಕಷ್ಟದ ಸಮಯವನ್ನು ಮರೆಯಲು ಎಲ್ಲರೂ ಕ್ರೀಡಾಕೂಟದಲ್ಲಿ ಭಾಗಿಯಾಗಿರುವುದು ಸಂತಸದ ವಿಚಾರ ಎಂದರು.
ಓದಿ : ‘ಯಾವ ಕ್ರೀಡೆ ಅಂತ ಬಿಡಿಸಿ ಹೇಳ್ರಿ’: ವಿಧಾನಸಭೆ ಕಲಾಪದಲ್ಲಿ ಸಿಡಿಯದ್ದೇ ಹಾಸ್ಯ
ಪೊಲೀಸ್ ಕ್ರೀಡಾಕೂಟದಲ್ಲಿ ಗುಂಪು ಕ್ರೀಡೆಗಳಾದ ವಾಲಿಬಾಲ್, ಕಬಡ್ಡಿ, 800 ಮೀಟರ್ ಓಟ, ಲಾಂಗ್ ಜಂಪ್, ಹೈಜಂಪ್, ಜಾವೆಲಿನ್, ಗುಂಡು ಎಸೆತ ಸೇರಿದಂತೆ ಹಲವು ಸ್ಪರ್ಧೆಗಳಿದ್ದವು. ಇಲ್ಲಿ ವಿಜೇತರಾದವರು ರಾಜ್ಯಮಟ್ಟದ ಸ್ಫರ್ಧೆಯಲ್ಲಿ ಜಿಲ್ಲೆಯನ್ನು ಪ್ರತಿನಿಧಿಸಲಿದ್ದಾರೆ.